ಅಂದು ಜಿಲ್ಲಾಡಳಿತ, ತಾಲೂಕು ಆಡಳಿತ ಹಾಗೂ ಎಲ್ಲಾ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಸ್ಥಳದಲ್ಲಿರಲಿದ್ದು ಸಾರ್ವಜನಿಕರು ತಮ್ಮ ಸಮಸ್ಯೆಗಳ ಬಗ್ಗೆ ಸಭೆಯಲ್ಲಿ ಅರ್ಜಿ ಸಲ್ಲಿಸಬಹುದು. ಸಾಧ್ಯವಾದರೆ ಸ್ಥಳದಲ್ಲೆ ಸಮಸ್ಯೆಗೆ ಪರಿಹಾರ ಒದಗಿಸಲಾಗುವುದು ಎಂದರು.
ಕನ್ನಡಪ್ರಭ ವಾರ್ತೆ ಮದ್ದೂರು
ನಾಗಮಂಗಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೊಪ್ಪ ಗ್ರಾಮದಲ್ಲಿ ಡಿ.3 ರಂದು 100 ಕೋಟಿಗೂ ಹೆಚ್ಚಿನ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಲಾಗುವುದು ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಬುಧವಾರ ಹೇಳಿದರು.ತಾಲೂಕಿನ ಕೌಡ್ಲೆ - ಗಟ್ಟಹಳ್ಳಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿ, ಕೊಪ್ಪ ಹೋಬಳಿಯ 8 ಗ್ರಾಪಂ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಅಂದಾಜು 100 ಕೋಟಿಗೂ ಹೆಚ್ಚಿನ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಹಾಗೂ ಜನ ಸಂಪರ್ಕ ಸಭೆಯನ್ನು ಆಯೋಜಿಸಲಾಗಿದೆ ಎಂದರು.
ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಪ್ರಾರಂಭವಾಗಲಿದೆ. ಹೀಗಾಗಿ ಸಮಯಾವಕಾಶದ ಕೊರತೆಯಿಂದ ಎಲ್ಲಾ ಗ್ರಾಮಗಳಿಗೆ ತೆರಳಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಕೊಪ್ಪದಲ್ಲೇ ಎಲ್ಲಾ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.ಅಂದು ಜಿಲ್ಲಾಡಳಿತ, ತಾಲೂಕು ಆಡಳಿತ ಹಾಗೂ ಎಲ್ಲಾ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಸ್ಥಳದಲ್ಲಿರಲಿದ್ದು ಸಾರ್ವಜನಿಕರು ತಮ್ಮ ಸಮಸ್ಯೆಗಳ ಬಗ್ಗೆ ಸಭೆಯಲ್ಲಿ ಅರ್ಜಿ ಸಲ್ಲಿಸಬಹುದು. ಸಾಧ್ಯವಾದರೆ ಸ್ಥಳದಲ್ಲೆ ಸಮಸ್ಯೆಗೆ ಪರಿಹಾರ ಒದಗಿಸಲಾಗುವುದು ಎಂದರು.
ಸ್ಥಳದಲ್ಲಿ ತಮ್ಮ ಸಮಸ್ಯೆಗೆ ಪರಿಹಾರ ಸಿಗದೇ ಹೋದರೆ ಅಂತಹ ಅರ್ಜಿಗಳನ್ನು ಅಧಿಕಾರಿಗಳು ತಮ್ಮ ಪೋನ್ ಮೂಲಕ ಸಂಪರ್ಕಿಸಿ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುತ್ತಾರೆ ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ವಿಜಯಲಕ್ಷ್ಮೀ ರಘುನಂದನ್, ನಾಗಮಂಗಲ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್.ದಿವಾಕರ್, ತಾಪಂ ಮಾಜಿ ಅಧ್ಯಕ್ಷ ಕೌಡ್ಲೆ ಶ್ರೀನಿವಾಸ್, ಮಾಜಿ ಉಪಾಧ್ಯಕ್ಷ ಎಚ್.ಜಿ.ರಾಮಚಂದ್ರ, ಮನ್ಮುಲ್ ಮಾಜಿ ನಿರ್ದೇಶಕ ಕುಮಾರ್ ಕೊಪ್ಪ. ಮುಖಂಡರಾದ ಗಟ್ಟಹಳ್ಳಿ ಹರೀಶ್, ಪಶುಇಲಾಖೆ ಉಪ ನಿರ್ದೇಶಕ ಡಾ.ಶಿವಲಿಂಗಯ್ಯ, ಸಹಾಯಕ ನಿರ್ದೇಶಕ ನಿರ್ದೇಶಕ ಡಾ.ಗೋವಿಂದ ಭಾಗವಹಿಸಿದ್ದರು.