ಸಾರಾಂಶ
ಉಡುಪಿ ನಗರಸಭೆಯ ಇಂದ್ರಾಳಿ ವಾರ್ಡಿನ ಮಂಚಿ ಕೊರಗ ಕಾಲನಿಯಲ್ಲಿ ಉಡುಪಿ ನಗರಸಭೆಯ ನಗರೋತ್ಥಾನ ಯೋಜನೆಯಡಿ 1 ಕೋಟಿ ರು. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಸಮುದಾಯ ಭವನಕ್ಕೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಶಿಲಾನ್ಯಾಸ ನೆರವೇರಿಸಿದರು.
ಕನ್ನಡಪ್ರಭ ವಾರ್ತೆ ಉಡುಪಿ
ಉಡುಪಿ ನಗರಸಭೆಯ ಇಂದ್ರಾಳಿ ವಾರ್ಡಿನ ಮಂಚಿ ಕೊರಗ ಕಾಲನಿಯಲ್ಲಿ ಉಡುಪಿ ನಗರಸಭೆಯ ನಗರೋತ್ಥಾನ ಯೋಜನೆಯಡಿ 1 ಕೋಟಿ ರು. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಸಮುದಾಯ ಭವನಕ್ಕೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಶಿಲಾನ್ಯಾಸ ನೆರವೇರಿಸಿದರು.ಈ ಸಂದರ್ಭ ಮಾತನಾಡಿದ ಯಶ್ಪಾಲ್ ಸುವರ್ಣ, ಕೊರಗ ಸಮುದಾಯದ ಆಶೋತ್ತರಗಳ ಈಡೇರಿಕೆಗೆ ವಿಶೇಷ ಆದ್ಯತೆ ನೀಡುವ ನಿಟ್ಟಿನಲ್ಲಿ ಸುಸಜ್ಜಿತ ಸಮುದಾಯ ಭವನಕ್ಕೆ 1 ಕೋಟಿ ರು. ಅನುದಾನ ಮಂಜೂರು ಮಾಡಿ ಶಿಲಾನ್ಯಾಸ ನೆರವೇರಿಸಿದ್ದು, ಅತೀ ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಂಡು ಸಮುದಾಯದ ಅಭಿವೃದ್ಧಿ ಪರ ಕಾರ್ಯಕ್ರಮಗಳಿಗೆ ಈ ಸಮುದಾಯ ಭವನ ಸದುಪಯೋಗವಾಗಲಿ ಎಂದರು.ಈ ಸಂದರ್ಭ ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಉಪಾಧ್ಯಕ್ಷೆ ರಜನಿ ಹೆಬ್ಬಾರ್, ನಗರಸಭಾ ಸದಸ್ಯರಾದ ಅಶೋಕ್ ನಾಯ್ಕ್, ಬಾಲಕೃಷ್ಣ ಶೆಟ್ಟಿ, ಸುಮಿತ್ರಾ ನಾಯಕ್, ಶ್ರೀ ಗಿರಿಧರ ಆಚಾರ್ಯ, ಶ್ರೀ ಹರೀಶ್ ಶೆಟ್ಟಿ, ಶ್ರೀಮತಿ ಕಲ್ಪನಾ ಸುಧಾಮ, ಪಕ್ಷದ ಪ್ರಮುಖರು, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.