ಶೀರೂರು ಮಠಾಧೀಶ, ಕೃಷ್ಣಮಠದ ಭಾವೀ ಪರ್ಯಾಯ ಪೀಠಾಧಿಪತಿ ಶ್ರೀ ವೇದವರ್ಧನ ತೀರ್ಥ ಶ್ರೀ ಪಾದರು ಶುಕ್ರವಾರ ಬೆಳಗ್ಗೆ ನಗರದ ಉತ್ತರ ದಿಕ್ಕಿನ ಅಂಬಾಗಿಲು ಜಂಕ್ಷನ್ ಬಳಿ ನೂತನ ಪರಶುರಾಮ ದ್ವಾರದ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದರು.
ಉಡುಪಿ: ಶೀರೂರು ಮಠಾಧೀಶ, ಕೃಷ್ಣಮಠದ ಭಾವೀ ಪರ್ಯಾಯ ಪೀಠಾಧಿಪತಿ ಶ್ರೀ ವೇದವರ್ಧನ ತೀರ್ಥ ಶ್ರೀ ಪಾದರು ಶುಕ್ರವಾರ ಬೆಳಗ್ಗೆ ನಗರದ ಉತ್ತರ ದಿಕ್ಕಿನ ಅಂಬಾಗಿಲು ಜಂಕ್ಷನ್ ಬಳಿ ನೂತನ ಪರಶುರಾಮ ದ್ವಾರದ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದರು.ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯೋತ್ಸವ ನೆನಪಿನಲ್ಲಿ, ಸುಮಾರು 1 ಕೋಟಿ ರು. ವೆಚ್ಚದಲ್ಲಿ ಪರ್ಯಾಯ ಸ್ವಾಗತ ಸಮಿತಿ ವತಿಯಿಂದ, ಉಡುಪಿಗೆ ಬರುವ ಯಾತ್ರಾರ್ಥಿಗಳನ್ನು ಸ್ವಾಗತಿಸಲು ಈ ಸುಂದರ ಪರಶುರಾಮ ದ್ವಾರ ನಿರ್ಮಿಸಲುದ್ದೇಶಿಸಲಾಗಿದೆ.
ಈ ಸಂದರ್ಭ ಪರ್ಯಾಯ ಸ್ವಾಗತ ಸಮಿತಿ ಅಧ್ಯಕ್ಷ ಶಾಸಕ ಯಶ್‌ಪಾಲ್ ಸುವರ್ಣ, ಪ್ರಧಾನ ಕಾರ್ಯದರ್ಶಿ ಮಟ್ಟಾರ್ ರತ್ನಾಕರ್ ಹೆಗ್ಡೆ, ಮಠದ ದಿವಾನರಾದ ಡಾ. ಉದಯಕುಮಾರ್ ಸರಳತ್ತಾಯ, ಸಂಚಾಲಕ ಬೈಕಾಡಿ ಸುಪ್ರಸಾದ್ ಶೆಟ್ಟಿ, ಕೋಶಾಧಿಕಾರಿ ಜಯಪ್ರಕಾಶ್ ಕೆದ್ಲಾಯ, ಶ್ರಿಮಠದ ಪಾರಪತ್ಯೆದಾರರಾದ ಶ್ರೀಶ ಕಡೆಕಾರ್, ನಗದಸಭೆಯ ನಿಕಟಪೂರ್ವ ಅಧ್ಯಕ್ಷ ಪ್ರಭಾಕರ ಪೂಜಾರಿ, ಪ್ರಮುಖರಾದ ವಾಸುದೇವ ಭಟ್ ಪೆರಂಪಳ್ಳಿ, ವಿಷ್ಣುಮೂರ್ತಿ ಪಾಡಿಗಾರ್, ಬಾಲಕೃಷ್ಣ ಶೆಟ್ಟಿ ನಿಟ್ಟೂರು, ವೀಣಾ ಎಸ್.ಶೆಟ್ಟಿ, ಪ್ರಚಾರ ಸಮಿತಿ ಸಂಚಾಲಕ ನಂದನ್ ಜೈನ್, ಮಧುಕರ್ ಮುದ್ರಾಡಿ ಮೊದಲಾದವರು ಇದ್ದರು.