ಸಾರಾಂಶ
ಬಳ್ಕುಂಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಲ್ಲೂರು ಕಾಂತಾ ಬಾರೆ ಬೂದ ಬಾರೆ ಬಸ್ ಸ್ಟ್ಯಾಂಡ್ ಬಳಿಯಿಂದ ಮುಖ್ಯ ರಸ್ತೆ ವರೆಗೆ ಸುಮಾರು 3 ಕೋಟಿ ರು. ವೆಚ್ಚದಲ್ಲಿ ಅಭಿವೃದ್ಧಿಗೊಳ್ಳಲಿರುವ ಕಾಮಗಾರಿಗೆ ಶಾಸಕ ಉಮಾನಾಥ ಕೋಟ್ಯಾನ್ ಶಿಲಾನ್ಯಾಸ ನೆರವೇರಿಸಿದರು.
ಕನ್ನಡಪ್ರಭ ವಾರ್ತೆ ಮೂಲ್ಕಿ
ಅಭಿವೃದ್ಧಿಯಲ್ಲಿ ಯಾವುದೇ ರಾಜಕೀಯ ಮಾಡದೆ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಸಂಪೂರ್ಣ ಆದ್ಯತೆ ನೀಡುವುದಾಗಿ ಶಾಸಕ ಉಮಾನಾಥ ಕೋಟ್ಯಾನ್ ಭರವಸೆ ನೀಡಿದ್ದಾರೆ.ಬಳ್ಕುಂಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಲ್ಲೂರು ಕಾಂತಾ ಬಾರೆ ಬೂದ ಬಾರೆ ಬಸ್ ಸ್ಟ್ಯಾಂಡ್ ಬಳಿಯಿಂದ ಮುಖ್ಯ ರಸ್ತೆ ವರೆಗೆ ಸುಮಾರು 3 ಕೋಟಿ ರು. ವೆಚ್ಚದಲ್ಲಿ ಅಭಿವೃದ್ಧಿಗೊಳ್ಳಲಿರುವ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು ಮಾತನಾಡಿದರು.
ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯನ್ನು ಸಂಪರ್ಕಿಸುವ ಪ್ರಧಾನ ಬಳ್ಕುಂಜೆ ಸೇತುವೆ ಅಪಾಯದಲ್ಲಿದ್ದು ಘನ ವಾಹನ ಸಂಚಾರ ನಿಷೇಧಿಸಲಾಗಿದೆ. ನೂತನ ಸೇತುವೆ ನಿರ್ಮಾಣಕ್ಕೆ 30 ಕೋಟಿ ರುಪಾಯಿ ವೆಚ್ಚ ಬೇಕಿದ್ದು ಈ ಬಗ್ಗೆ ರಾಜ್ಯ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿ ಹೋಳಿ ಜೊತೆಗೆ ಮಾತುಕತೆ ನಡೆಸಲಾಗಿದೆ ಎಂದರು.ವಿಧಾನಸೌಧದಲ್ಲಿ ಕೂಡ ಪ್ರಶ್ನೋತ್ತರ ಚರ್ಚೆಯಲ್ಲಿ ಭಾಗವಹಿಸಿದ್ದು ರಾಜ್ಯ ಸರ್ಕಾರ ಸುಮಾರು 1,000 ಕೋಟಿ ನೂತನ ಸೇತುವೆಗಳಿಗೆ ಇರಿಸಿದ್ದು ಅದರಲ್ಲಿ ಬಳ್ಕುಂಜೆ ಹಾಗೂ ಮರವೂರು ಸೇತುವೆ ನಿರ್ಮಾಣದ ಯೋಜನೆ ಇದೆ ಎಂದರು.
ಮೂಲ್ಕಿ ಮೂಡಬಿದಿರೆ ಬಿಜೆಪಿ ಮಂಡಲಾಧ್ಯಕ್ಷ ದಿನೇಶ್ ಪುತ್ರನ್, ಬಳ್ಕುಂಜೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಮತಾ ಪೂಂಜಾ, ಉಪಾಧ್ಯಕ್ಷ ನವೀನ್ ಶೆಟ್ಟಿ, ಸದಸ್ಯರಾದ ರಾಜೇಶ್ ಶೆಟ್ಟಿ ಆನಂದ ಕೊಲ್ಲೂರು, ವನಿತಾ ಪೂಜಾರಿ, ಶಾಂತಾ, ತಾಲೂಕು ಪಂಚಾಯಿತಿ ಮಾಜಿ ಸದಸ್ಯೆ ರಶ್ಮಿ ಆಚಾರ್ಯ, ಸ್ಥಳೀಯರು, ಗುತ್ತಿಗೆದಾರ ಮೊಹಮ್ಮದ್ ರಫೀಕ್ ಮತ್ತಿತರರು ಉಪಸ್ಥಿತರಿದ್ದರು.