20 ಲಕ್ಷ ರು. ವೆಚ್ಚದ ನೇಜಾರು ಅಂಗನವಾಡಿಗೆ ಶಿಲಾನ್ಯಾಸ

| Published : Oct 25 2025, 01:01 AM IST

ಸಾರಾಂಶ

ನೇಜಾರು ಕ್ರೀಡಾಂಗಣದ ಬಳಿ ಸುಮಾರು 20 ಲಕ್ಷ ರು. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಅಂಗನವಾಡಿ ಕಟ್ಟಡದ ಕಾಮಗಾರಿಗೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಶಿಲಾನ್ಯಾಸ ನೆರವೇರಿಸಿದರು.

ಉಡುಪಿ: ಇಲ್ಲಿನ ಕಲ್ಯಾಣಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೇಜಾರು ಕ್ರೀಡಾಂಗಣದ ಬಳಿ ಸುಮಾರು 20 ಲಕ್ಷ ರು. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಅಂಗನವಾಡಿ ಕಟ್ಟಡದ ಕಾಮಗಾರಿಗೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಶಿಲಾನ್ಯಾಸ ನೆರವೇರಿಸಿದರು.ಈ ಸಂದರ್ಭ ಮಾತನಾಡಿದ ಶಾಸಕರು, ವಿದ್ಯಾರ್ಥಿಗಳ ಭವಿಷ್ಯದ ಶಿಕ್ಷಣಕ್ಕೆ ಅಡಿಪಾಯವಾಗಿರುವ ಅಂಗನವಾಡಿ ಕೇಂದ್ರಗಳನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ವಿಶೇಷ ಆದ್ಯತೆ ನೀಡಿದ್ದು, ಅಂಗನವಾಡಿ ಕಾಮಗಾರಿ ಶೀಘ್ರ ಪೂರ್ಣಗೊಂಡು ನೇಜಾರು ಪರಿಸರದ ಪುಟಾಣಿಗಳಿಗೆ ನೂತನ ಅಂಗನವಾಡಿ ಮೂಲಕ ಉತ್ತಮ ಶಿಕ್ಷಣ ಹಾಗೂ ಪೌಷ್ಟಿಕ ಆಹಾರದ ಮೂಲಕ ಆರೋಗ್ಯವಂತ ಬೆಳವಣಿಗೆಗೆ ಪೂರಕ ಸೌಲಭ್ಯ ದೊರೆಯುವಂತಾಗಲಿ ಎಂದು ಹೇಳಿದರು.ಈ ಸಂದರ್ಭ ಕಲ್ಯಾಣಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗರಾಜ್, ಉಪಾಧ್ಯಕ್ಷ ಪ್ರೇಮಲತಾ, ಮಾಜಿ ಅಧ್ಯಕ್ಷ ಸತೀಶ್ ನಾಯ್ಕ್, ಕೃಷ್ಣ ದೇವಾಡಿಗ, ಗ್ರಾ.ಪಂ. ಸದಸ್ಯರಾದ ವಿಶು ಕುಮಾರ್, ಉದಯ ಪೂಜಾರಿ, ಪ್ರಶಾಂತ್ ಆಚಾರ್ಯ, ನವೀನ್ ಕಾಂಚನ್, ಕವಿತ ಮೇಸ್ತ, ರತ್ನ, ಅನಿತಾ ನಾಯ್ಕ್, ಜ್ಯೋತಿ ಬೆರೆಟ್ಟೋ, ಬೆನೆಡಿಕ್ಟ ಜೆ. ಮೆನೇಜಸ್, ಪಕ್ಷದ ಪ್ರಮುಖರಾದ ಉಮೇಶ್ ಅಮೀನ್, ಸುಧೀರ್, ಅಂಗನವಾಡಿ ಕಾರ್ಯಕರ್ತರು, ಸಾರ್ವಜನಿಕರು ಉಪಸ್ಥಿತರಿದ್ದರು.