ಇಲ್ಲಿನ ನ್ಯಾಯಾಲಯದ ಸಂಕೀರ್ಣದಲ್ಲಿ ನೂತನವಾಗಿ ನಿರ್ಮಾಣವಾಗುವ ನ್ಯಾಯಾಲಯಗಳ ಕಟ್ಟಡಕ್ಕೆ ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ವಿಬು ಖಬ್ರು ಶಂಕುಸ್ಥಾಪನೆ ನೆರವೇರಿಸಿದರು.

ಕನ್ನಡಪ್ರಭ ವಾರ್ತೆ ಭಟ್ಕಳ

ಇಲ್ಲಿನ ನ್ಯಾಯಾಲಯದ ಸಂಕೀರ್ಣದಲ್ಲಿ ನೂತನವಾಗಿ ನಿರ್ಮಾಣವಾಗುವ ನ್ಯಾಯಾಲಯಗಳ ಕಟ್ಟಡಕ್ಕೆ ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ವಿಬು ಖಬ್ರು ಶಂಕುಸ್ಥಾಪನೆ ನೆರವೇರಿಸಿದರು.

ಉತ್ತರ ಕನ್ನಡ ಜಿಲ್ಲಾ ನ್ಯಾಯಾಂಗ ಇಲಾಖೆ, ಜಿಲ್ಲಾ ಲೋಕೋಪಯೋಗಿ ಇಲಾಖೆ ಹಾಗೂ ಭಟ್ಕಳ ತಾಲೂಕಾ ವಕೀಲರ ಸಂಘ ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಧಾರ್ಮಿಕ ವಿಧಿ ವಿದಾನಗಳ ಮೂಲಕ ಪೂಜೆ ಸಲ್ಲಿಸಿ, ಅಡಿಗಲ್ಲುಗಳಿಗೆ ಪೂಜೆ ನೆರವೇರಿಸಿ, ಭೂಮಿ ಛೇದನ ಮಾಡುವ ಮೂಲಕ ಕಟ್ಟಡ ನಿರ್ಮಾಣಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಚ್ಛ ನ್ಯಾಯಾಲಯದ ನ್ಯಾಯಾಧೀಶ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ನ್ಯಾಯಾಧೀಶ ಸಚಿನ ಶಂಕರ ಮಗದಮ್ ವಹಿಸಿದ್ದರು.

ಈ ಸಂದರ್ಭ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ಎಸ್.ಜಿ. ಪಂಡಿತ್, ಅನಂತ ರಾಮನಾಥ ಹೆಗಡೆ, ವಿಶೇಷ ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಉಚ್ಛ ನ್ಯಾಯಾಲಯದ ರಿಜಿಸ್ಟ್ರಾರ್ ಕೆ.ಎಸ್. ಭರತ ಕುಮಾರ, ಉತ್ತರ ಕನ್ನಡ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಪರಮೇಶ್ವರ ಪ್ರಸನ್ನ ಬಿ., ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್., ಭಟ್ಕಳದ ಹಿರಿಯ ನ್ಯಾಯಾಲಯದ ನ್ಯಾಯಾಧೀಶ ಕಾಂತ ಕುರಣಿ, ಪ್ರಧಾನ ನ್ಯಾಯಾಲಯದ ನ್ಯಾಯಾಧೀಶೆ ದೀಪಾ ಅರಳಗುಂಡಿ, ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶೆ ಧನವತಿ, ನಗರಸಭಾ ಆಯುಕ್ತ ಬಾಬಾಸಾಹೇಬ್ ಮಾನೆ, ಸಹಾಯಕ ಆಯುಕ್ತ ಪ್ರವೀಣ ಕರಾಂಡೆ, ತಹಸೀಲ್ದಾರ್ ನಾಗೇಂದ್ರ ಕೋಳಶೆಟ್ಟಿ, ಭಟ್ಕಳ ಬಾರ್ ಅಸೋಶಿಯೇಶನ್ ಅಧ್ಯಕ್ಷ ಈಶ್ವರ ಎಂ. ನಾಯ್ಕ, ಕಾರ್ಯದರ್ಶಿ ನಾಗೇಶ ಗದ್ದೆಮನೆ, ಉಪಾಧ್ಯಕ್ಷ ಆರ್.ಜಿ.ನಾಯ್ಕ, ಕಟ್ಟಡ ಸಮಿತಿ ಅಧ್ಯಕ್ಷ ಎಂ.ಎಲ್.ನಾಯ್ಕ, ಗೌರವಾಧ್ಯಕ್ಷ ಜೆ.ಡಿ.ನಾಯ್ಕ, ಪಿ.ಡಬ್ಲು.ಡಿ. ಕಾರವಾರದ ಕಾರ್ಯನಿರ್ವಾಹಕ ಇಂಜಿನಿಯರ್ ಮಲ್ಲಿಕಾರ್ಜುನ ಹೆಚ್., ಭಟ್ಕಳದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸುಜಯ್ ಮುಂತಾದವರು ಉಪಸ್ಥಿತರಿದ್ದರು.

ನ್ಯಾಯವಾದಿಗಳಾದ ನಾಗರಾಜ ಈ.ಎಚ್. ಕಾರ್ಯಕ್ರಮ ನಿರ್ವಹಿಸಿದರು. ಪಲ್ಲವಿ ಕಿಣಿ ಮತ್ತು ತೇಜಸ್ವಿ ಕಿಣಿ ಯಕ್ಷಗಾನದ ರೀತ್ಯಾ ಸ್ವಾಗತ ನೃತ್ಯ ಮಾಡಿದರು. ಕಾನಮದ್ಲು ದುರ್ಗಾಶ್ರೀ ಚಂಡೆ ತಂಡದವರಿಂದ ಢಕ್ಕೆ ಕುಣಿತ ಕಾರ್ಯಕ್ರಮಕ್ಕೆ ಮೆರಗು ನೀಡಿತು.