ಕನ್ನಡಪ್ರಭವಾರ್ತೆ ತುರುವೇಕೆರೆ
ತಾಲೂಕಿನ ಬಾಣಸಂದ್ರದಲ್ಲಿ ಸುಮಾರು ಮೂರು ಕೋಟಿ ವೆಚ್ಚದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಾಣ ಮಾಡಲು ಶಾಸಕ ಎಂ.ಟಿ.ಕೃಷ್ಣಪ್ಪ ಭೂಮಿ ಪೂಜೆ ನೆರವೇರಿಸಿದರು.ಬಾಣಸಂದ್ರ ಹೋಬಳಿ ಕೇಂದ್ರವಾಗಿದೆ. ಹಾಲಿ ಇರುವ ಕಟ್ಟಡ ಶಿಥಿಲಾವಸ್ಥೆಯಲ್ಲಿದೆ. ಹಾಗಾಗಿ ಸುಸಜ್ಜಿತವಾದ ಕಟ್ಟಡ ಅಗತ್ಯವಿದ್ದುದರಿಂದ ನೂತನವಾಗಿ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ತಿಳಿಸಿದರು. ಇಲ್ಲಿ ಸುಮಾರು ಎರಡು ಎಕರೆ ಜಮೀನಿನಲ್ಲಿ ಆಸ್ಪತ್ರೆಯನ್ನು ನಿರ್ಮಾಣ ಮಾಡಲಾಗುತ್ತಿದೆ. ಮುಂಬರುವ ದಿನಗಳಲ್ಲಿ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಆಗುತ್ತಿದೆ. ವಿಪರೀತವಾದ ಸಂಚಾರ ಆಗುತ್ತಿರುವ ಹಿನ್ನೆಲೆಯಲ್ಲಿ ವಿವಿಧ ಅನಾಹುತಗಳು ಸಂಭವಿಸುತ್ತವೆ. ಹಾಗಾಗಿ ಇಲ್ಲಿ ನೂತನವಾಗಿ ಸುಸಜ್ಜಿತವಾದ ಆಸ್ಪತ್ರೆ ನಿರ್ಮಾಣ ಮಾಡುವುದು ಅಗತ್ಯವಿತ್ತು ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಹೇಳಿದರು. ಈ ಸಂದರ್ಭದಲ್ಲಿ ಡಾ.ಸ್ವರೂಪ, ಆರೋಗ್ಯ ಇಲಾಖಾ ಸಿಬ್ಬಂದಿಗಳಾದ ಆರೋಗ್ಯ ನಿರೀಕ್ಷಣಾಧಿಕಾರಿ ಗಿಡ್ಡೇಗೌಡ, ಪಿಡಿಒ ಸೋಮಶೇಖರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎ.ಬಿ.ಜಗದೀಶ್, ಗ್ರಾಮದ ಮುಖಂಡರಾದ ಮರೀಗೌಡ, ಯಾಲಕ್ಕಿ, ಅನಂತರಾಮು, ಹೆಲ್ತ್ ಇನ್ಸ್ ಪೆಕ್ಟರ್ ರಾಮಲಿಂಗಯ್ಯ, ಆರೋಗ್ಯ ಇಲಾಖಾ ಎಇಇ ಚಂದ್ರು, ಎಇ ಉಮೇಶ್, ಗುತ್ತಿಗೆದಾರರಾದ ಗಗನ್ ಇದ್ದರು.