ಗ್ರಾಮಾಂತರ ಕ್ಷೇತ್ರದ ಸ್ವಾಂದೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಲ್ಲಾಪುರದಲ್ಲಿ ಶಾಸಕ ಬಿ.ಸುರೇಶ್‌ಗೌಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು.

ಕನ್ನಡಪ್ರಭ ವಾರ್ತೆ ತುಮಕೂರುಗ್ರಾಮಾಂತರ ಕ್ಷೇತ್ರದ ಸ್ವಾಂದೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಲ್ಲಾಪುರದಲ್ಲಿ ಶಾಸಕ ಬಿ.ಸುರೇಶ್‌ಗೌಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು.

ಈ ವೇಳೆ ಮಾತನಾಡಿದ ಶಾಸಕರು, ಶಾಲೆಗಾಗಿ ಟೂಡಾದಿಂದ ಮಂಜೂರಾಗಿರುವ ಅರ್ಧ ಎಕರೆ ಜಾಗದಲ್ಲಿ ಕಟ್ಟಡ ಕಟ್ಟಲು ಇನ್‌ ಕ್ಯಾಪ್‌ ಕಂಪನಿಯವರು ಒಂದು ಕೋಟಿ ರು. ಸಿಎಸ್‌ಆರ್ ಅನುದಾನ ನೀಡಿದ್ದಾರೆ. ಜೊತೆಗೆ ತಮ್ಮ ಶಾಸಕರ ಅನುದಾನದ 50 ಲಕ್ಷ ಸೇರಿಸಿ ಒಂದೂವರೆ ಕೋಟಿ ರು. ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣ ಮಾಡಲಾಗುವುದು. ಈ ಶಾಲೆಯನ್ನು ಕೆಪಿಎಸ್ ಶಾಲೆಯಾಗಿ ಪರಿವರ್ತಿಸಲು ಹಾಗೂ ಎಲ್‌ಕೆಜಿ, ಯುಕೆಜಿ ಆರಂಭಿಸಲು ಸರ್ಕಾರಕ್ಕೆ ಮನವಿ ಮಾಡುವುದಾಗಿ ಹೇಳಿದ ಅವರು, ಮೇ ತಿಂಗಳಲ್ಲಿ ಕಟ್ಟಡ ಪೂರ್ಣಗೊಳಿಸಲಾಗುವುದು ಎಂದರು. ಇಲ್ಲಿ ಉತ್ತಮವಾದ ಗ್ರಂಥಾಲಯವಿದೆ, ಗ್ರಂಥಾಲಯಕ್ಕೆ ತಾವು ಶಾಸಕರ ಅನುದಾನದಲ್ಲಿ 3 ಲಕ್ಷರು.ಗಳ ಪುಸ್ತಕ ಕೊಡಿಸುವುದಾಗಿ ಭರವಸೆ ನೀಡಿದರು. ಇದೇ ವೇಳೆ ಜೆಜೆಎಂ ಕಾಮಗಾರಿಗೆ ಚಾಲನೆ ನೀಡಿದರು.

ಈ ವೇಳೆ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಮಹಾಲಕ್ಷ್ಮಿ ಸೋಮಶೇಖರ್, ಉಪಾಧ್ಯಕ್ಷ ಲೋಕೇಶ್, ಮಾಜಿ ಅಧ್ಯಕ್ಷರಾದ ಸಿದ್ಧರಾಜು, ರಮೇಶ್, ಡಿಡಿಪಿಐ ರಘುಚಂದ್ರ, ಬಿಇಓ ಹನುಮಂತರಾಯಪ್ಪ, ಮುಖ್ಯ ಶಿಕ್ಷಕಿ ಜಯಲಕ್ಷ್ಮಮ್ಮ, ಗ್ರಾಮ ಪಂಚಾಯ್ತಿ ಸದಸ್ಯರಾದ ಯೋಗೀಶ್, ಗಿರೀಶ್, ಈರಣ್ಣ, ನಂಜುಂಡಪ್ಪ, ಮುಖಂಡರಾದ ಮಲ್ಲೇಶ್, ನಾಗರಾಜು, ಸೋಮಶೇಖರ್‌ಯೋಗೀಶ್, ದೊಡ್ಡಯ್ಯ ಮೊದಲಾದವರು ಭಾಗವಹಿಸಿದ್ದರು.