ಪ್ರಸಾದಿಹಳ್ಳಿ ಗ್ರಾಮದಲ್ಲಿ ಡಾ. ಅಂಬೇಡ್ಕರ್ ಭವನ ಕಾಮಗಾರಿಗೆ ಶನಿವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಈ ಗ್ರಾಮದ ಮುಖಂಡರು ಹಾಗೂ ಗ್ರಾಮಸ್ಥರ ಬಹುದಿನಗಳ ಬೇಡಿಕೆಯಂತೆ ಸ್ಥಳ ಪರಿಶೀಲಿಸಿ ಯಾವುದೇ ಗೊಂದಲಕ್ಕೂ ಕಾರಣವಾಗದಂತೆ ೨೦ ಲಕ್ಷ ರು. ಅನುದಾನದಲ್ಲಿ ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಭವನ ನಿರ್ಮಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಕಳೆದ ಹದಿನೈದು ದಿನಗಳ ಹಿಂದೆಯೇ ಭೂಮಿಪೂಜೆ ಆಗಬೇಕಿತ್ತು. ಆದರೆ ಕಾರಣಾಂತರಗಳಿಂದ ತಡವಾಗಿದ್ದರಿಂದ ಈಗ ಭವನಕ್ಕೆ ಭೂಮಿಪೂಜೆ ನೆರವೇರಿಸಲಾಗುತ್ತಿದೆ ಎಂದು ತಿಳಿಸಿದರು.
ಕನ್ನಡಪ್ರಭ ವಾರ್ತೆ ಬೇಲೂರು
ಗ್ರಾಮದ ಮಹಿಳೆಯರು ಮತ್ತು ಯುವಕರು ಸಾಮಾಜಿಕ ಚಟುವಟಿಕೆ ನಡೆಸಲು ಅನುಕೂಲವಾಗಲಿ ಎಂಬ ಉದ್ದೇಶದಿಂದ ಸಮುದಾಯ ಭವನಗಳ ನಿರ್ಮಾಣಕ್ಕೆ ಮುಂದಾಗುತ್ತಿದ್ದೇವೆ ಎಂದು ಶಾಸಕ ಎಚ್. ಕೆ. ಸುರೇಶ್ ಹೇಳಿದರು. ತಾಲೂಕಿನ ಪ್ರಸಾದಿಹಳ್ಳಿ ಗ್ರಾಮದಲ್ಲಿ ಡಾ. ಅಂಬೇಡ್ಕರ್ ಭವನ ಕಾಮಗಾರಿಗೆ ಶನಿವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಈ ಗ್ರಾಮದ ಮುಖಂಡರು ಹಾಗೂ ಗ್ರಾಮಸ್ಥರ ಬಹುದಿನಗಳ ಬೇಡಿಕೆಯಂತೆ ಸ್ಥಳ ಪರಿಶೀಲಿಸಿ ಯಾವುದೇ ಗೊಂದಲಕ್ಕೂ ಕಾರಣವಾಗದಂತೆ ೨೦ ಲಕ್ಷ ರು. ಅನುದಾನದಲ್ಲಿ ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಭವನ ನಿರ್ಮಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಕಳೆದ ಹದಿನೈದು ದಿನಗಳ ಹಿಂದೆಯೇ ಭೂಮಿಪೂಜೆ ಆಗಬೇಕಿತ್ತು. ಆದರೆ ಕಾರಣಾಂತರಗಳಿಂದ ತಡವಾಗಿದ್ದರಿಂದ ಈಗ ಭವನಕ್ಕೆ ಭೂಮಿಪೂಜೆ ನೆರವೇರಿಸಲಾಗುತ್ತಿದೆ ಎಂದು ತಿಳಿಸಿದರು.ಸಮುದಾಯ ಭವನಕ್ಕೆ ಅನುದಾನ ಕೊಡಿಸುವಲ್ಲಿ ಪುರಸಭೆ ಸದಸ್ಯ ಹಾಗೂ ದಲಿತ ಮುಖಂಡ ದಾನಿಯವರ ಪಾತ್ರ ಸಾಕಷ್ಟಿದೆ. ಸಚಿವ ಎಚ್. ಸಿ. ಮಹದೇವಪ್ಪರವರು ಬೇಲೂರು ಕ್ಷೇತ್ರಕ್ಕೆ ೨೦ಕ್ಕೂ ಹೆಚ್ಚು ಅಂಬೇಡ್ಕರ್ ಸಮುದಾಯ ಭವನಗಳ ನಿರ್ಮಾಣಕ್ಕೆ ಅನುದಾನ ಕೊಟ್ಟಿದ್ದಾರೆ. ಅವರಿಗೆ ಜನತೆ ಪರವಾಗಿ ಕೃತಜ್ಞತೆ ಸಲ್ಲಿಸುತ್ತೇನೆ. ಎಲ್ಲಾ ಸಮುದಾಯವು ಒಂದೇ ಎಂಬ ಭಾವನೆ ನಮ್ಮಲ್ಲಿರುವುದರಿಂದ ಅನುದಾನ ತರಲು ಸಾಧ್ಯವಾಗುತ್ತಿದೆ. ಡಾ.ಅಂಬೇಡ್ಕರ್‌ರವರು ಸಂವಿಧಾನದ ಮೂಲಕ ಎಲ್ಲರಿಗೂ ಸಮಾನ ಅವಕಾಶ ಕೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲ ಸಮುದಾಯದವರೊಂದಿಗೆ ಸೇರಿ ಷೇತ್ರದ ಅಭಿವೃದ್ಧಿಗೆ ಮುಂದಾಗಿದ್ದೇನೆ. ಮುಂದಿನ ದಿನಗಳಲ್ಲಿ ಗ್ರಾಮಕ್ಕೆ ಇನ್ನೂ ಹೆಚ್ಚಿನ ಅಭಿವೃದ್ಧಿ ಕೆಲಸ ಮಾಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. ಸನ್ಯಾಸಿಹಳ್ಳಿ ಗ್ರಾಪಂ ಅಧ್ಯಕ್ಷ ಕೋಳಿ ಶಿವು ಮಾತನಾಡಿ, ನಮ್ಮ ಗ್ರಾಪಂ ವ್ಯಾಪ್ತಿಯ ಕೆರಲೂರು, ಸನ್ಯಾಸಿಹಳ್ಳಿ, ಮಲ್ಲಾಪುರ ಸೇರಿದಂತೆ ಇತರೆ ಗ್ರಾಮಗಳಲ್ಲೂ ಸಮುದಾಯ ಭವನ ನಿರ್ಮಾಣಕ್ಕೆ ಶಾಸಕರು ಮುಂದಾಗಬೇಕು. ಇದರಿಂದ ಗ್ರಾಮಸ್ಥರಿಗೆ ಅನುಕೂಲವಾಗಲಿದೆ ಎಂದರು.ಗ್ರಾಪಂ ಸದಸ್ಯರಾದ ಮಂಜುಳಾ, ಮಾಜಿ ಸದಸ್ಯ ಚಂದನ್, ತಾಪಂ ಮಾಜಿ ಅಧ್ಯಕ್ಷ ಪರ್ವತಯ್ಯ, ರೈತ ಪ್ರತಿನಿಧಿ ದೊಡ್ಡವೀರೇಗೌಡ, ದಲಿತ ಮುಖಂಡರಾದ ಚಾ.ನಾ.ದಾನಿ, ವೆಂಕಟೇಶ್, ರಮೇಶ್ ತೆಂಡೇಕೆರೆ, ಮಲ್ಲಿಕಾರ್ಜುನ್, ಶೇಷಪ್ಪ, ಮಂಜಯ್ಯ, ಬಾಬು, ಕುಮಾರ್, ಸಂತೋಷ್, ಸತೀಶ್ ಇತರರಿದ್ದರು.