ಸಾರಾಂಶ
ದೇವನಹಳ್ಳಿ: ಇಲ್ಲಿನ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ 1980ರಲ್ಲಿ ಸ್ಥಾನಪನೆಗೊಂಡು ಈಗ ರಾಜ್ಯದಲ್ಲೆ ಅತ್ಯುನ್ನತ ಸ್ಥಾನದಲ್ಲಿರುವುದಕ್ಕೆ ಈ ಬ್ಯಾಂಕಿನ ಅಧ್ಯಕ್ಷರು ಮತ್ತು ಆಡಳಿತ ಮಂಡಳಿಯ ಪ್ರಾಮಾಣಿಕ ಪ್ರಯತ್ನದಿಂದ ಸಾಧ್ಯವಾಗಿದೆ ಎಂದು ಐದನೇ ಹಣಕಾಸು ಆಯೋಗ ಅಧ್ಯಕ್ಷ ಸಿ.ನಾರಾಯಣಸ್ವಾಮಿ ತಿಳಿಸಿದರು.

ದೇವನಹಳ್ಳಿ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿಗೆ ಹೊಂದಿಕೊಂಡಂತಿರುವ ವಿಕಾಸ ಸೌಧದ ಎರಡನೇ ಮಹಡಿಗೆ ಶಂಕುಸ್ಥಾಪನಾ ಸಮಾರಂಭದಲ್ಲಿ ಮಾತನಾಡಿದ ಅವರು, ಸಹಕಾರ ಕ್ಷೇತ್ರದಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುವಂತಹ ಆಡಳಿತ ಮಂಡಳಿ ಇದ್ದರೆ ಮಾತ್ರ ತಾಲೂಕಿನ ರೈತರಿಗಷ್ಟೇ ಅಲ್ಲದೆ ಸಣ್ಣ ಉದ್ದಿಮೆದಾರರಿಗೆ ಸಾಲ ಸೌಲಭ್ಯ ನೀಡಲು ಸಾಧ್ಯ ಎಂದರು.ಹೊಸ ಕಟ್ಟಡ 60 ಲಕ್ಷ ರು. ವೆಚ್ಚದಲ್ಲಿ ನಿರ್ಮಾಣವಾಗುತ್ತಿದ್ದು ಇನ್ನು ಐದಾರು ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಮಾಜಿ ಅಧ್ಯಕ್ಷ ಮುನಿರಾಜು ತಿಳಿಸಿದರು. ಇದೇ ಸಂದರ್ಭದಲ್ಲಿ ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ. ಮುನೇಗೌಡ ಹಾಗೂ ಬ್ಯಾಂಕಿನ ಮಾಜಿ ಅಧ್ಯಕ್ಷ ಆರ್. ಮುನೇಗೌಡ ಮಾತನಾಡಿದರು.
ಸಮಾರಂಭದಲ್ಲಿ ಬ್ಯಾಂಕಿನ ಅಧ್ಯಕ್ಷ ಜಿ.ಕೆ. ಹನುಮಪ್ಪ, ಬ್ಯಾಂಕಿನ ಮಾಜಿ ಅಧ್ಯಕ್ಷ ಮಂಡಿಬೆಲೆ ರಾಜಣ್ಣ, ವಕೀಲರ ಸಂಘದ ಅಧ್ಯಕ್ಷ ವಕೀಲ ಮುನಿರಾಜು ಎಪಿಎಂಸಿ ಮಾಜಿ ಅಧ್ಯಕ್ಷ ಮಂಜುನಾಥ್, ಪುರಸಭಾ ಸದಸ್ಯ ಜಿ.ಎ.ರವೀಂದ್ರ ಉಪಸ್ಥಿತರಿದ್ದರು.(ಫೋಟೊ ಕ್ಯಾಪ್ಷನ್)
ದೇವನಹಳ್ಳಿಯಲ್ಲಿ ಪಿಎಲ್ಡಿ ಬ್ಯಾಂಕಿನ ವಿಕಾಸಸೌಧದ ಎರಡನೇ ಮಹಡಿಗೆ ಐದನೇ ಹಣಕಾಸು ಆಯೋಗದ ಅಧ್ಯಕ್ಷ ಸಿ.ನಾರಾಯಣಸ್ವಾಮಿ ಶಂಕುಸ್ಥಾಪನೆ ನೆರವೇರಿಸಿದರು. ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಇತರರಿದ್ದರು.