ಹಂಡ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2025ನೇ ಪ್ರತಿಭಾ ಕಾರಂಜಿ ಕಾರ್ಯಕ್ರಮ ನಡೆಯಿತು.
ಕನ್ನಡಪ್ರಭವಾರ್ತೆ, ಸೋಮವಾರಪೇಟೆ
ಹಂಡ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2025ನೇ ಪ್ರತಿಭಾ ಕಾರಂಜಿ ಕಾರ್ಯಕ್ರಮ ಮಂಗಳವಾರ ನಡೆಯಿತು.ಹಂಡ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಧರ್ಮಪ್ಪ ಮಾತನಾಡಿ, ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ಪ್ರತಿಭಾಕಾರಂಜಿ ಉತ್ತಮ ವೇದಿಕೆಯಾಗಿದೆ. ಇದರಲ್ಲಿ ಕಲೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಇಂತಹ ಕಾರ್ಯಕ್ರಮದಲ್ಲಿ ಎಲ್ಲ ವಿದ್ಯಾರ್ಥಿಗಳು ಪಾಲ್ಗೊಳ್ಳುವ ಮೂಲಕ ಬಳಸಿಕೊಳ್ಳಬೇಕು ಎಂದರು. ಹಂಡ್ಲಿ ಕ್ಲಸ್ಟರ್‌ನ ಸಿ.ಆರ್.ಪಿ ಗಿರೀಶ್ ಮಾತನಾಡಿ ವಿದ್ಯಾರ್ಥಿಗಳ ಪ್ರತಿಭೆಗಳ ಅನಾವರಣಕ್ಕೆ ಪ್ರತಿಭಾಕಾರಂಜಿ ಸೂಕ್ತ ವೇದಿಕೆಯಾಗಿದ್ದು, ಎಲ್ಲ ಶಾಲಾ ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕು ಎಂದರು. ಹಂಡ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಧಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶಾಲಾ ಎಸ್‌ಡಿಎಂಸಿ ಅಧ್ಯಕ್ಷರಾದ ಕೆ.ಪಿ. ಶಿವಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಕೃಷಿ ಪತ್ತಿನ ಸಹಹಾರ ಸಂಘದ ಅಧ್ಯಕ್ಷ ಚಿದಾನಂದ, ಉಪಾಧ್ಯಕ್ಷ ಯಶವಂತ, ಹಂಡ್ಲಿ ಗ್ರಾಮ ಪಂಚಾಯತಿ ಸದಸ್ಯ ವೀರೇಂದ್ರ ಕುಮಾರ್ ಇದ್ದರು. ನಿಕಟ ಪೂರ್ವ ಸಿಆರ್‌ಪಿ ಸಿ.ಕೆ. ದಿನೇಶ್, ಹಂಡ್ಲಿ ಶಾಲೆಯಲ್ಲಿ ಮುಖ್ಯೋಪಧ್ಯಾಯರಾಗಿದ್ದ ಬಿಂದಮ್ಮ ಅವರನ್ನು ಸನ್ಮಾನಿಸಲಾಯಿತು. ಶಾಲಾ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧಾ ಕಾರ್ಯಕ್ರಮಗಳು ನಡೆದವು.