ಸಾರಾಂಶ
ನಾಲ್ವರು ಮ್ಕಕಳು ಮೇ 14ರಂದು ನಾಪತ್ತೆಯಾಗಿರುವ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕನ್ನಡಪ್ರಭ ವಾರ್ತೆ ಕಾಪು
ಇಲ್ಲಿನ ಶಿರ್ವ ಫೈಝುಲ್ ಇಸ್ಲಾಂ ಮದ್ರಸದ ನಾಲ್ವರು ಮಕ್ಕಳು ಮೇ 14ರಂದು ಮಧ್ಯಾಹ್ನ ವೇಳೆ ನಾಪತ್ತೆಯಾಗಿರುವ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ನಾಪತ್ತೆಯಾದ ವಿದ್ಯಾರ್ಥಿಗಳನ್ನು ಬಿಹಾರ ಮೂಲದ ತಬಾರಕ್, ಜಂಶೀದ್, ತಂಝೀರ್ ಆಲಮ್, ಶಾಹಿಲ್ ಎಂದು ಗುರುತಿಸಲಾಗಿದೆ. ಅವರಲ್ಲಿ ಇಬ್ಬರು ಅಪ್ರಾಪ್ತ ವಯಸ್ಕರಾಗಿದ್ದಾರೆ.
ಮದ್ರಸದಲ್ಲಿ ಶಿಕ್ಷಣ ಪಡೆಯುತ್ತಿದ್ದ ಅವರು, ಮಂಗಳವಾರ ಮಧ್ಯಾಹ್ನ ವೇಳೆ ಮದ್ರಸದಿಂದ ಹೊರಗಡೆ ಹೋದವರು ವಾಪಸ್ ಬಾರದೇ ನಾಪತ್ತೆಯಾಗಿದ್ದಾರೆ. ಅವರು ರೈಲು ಹತ್ತಿ ತಮ್ಮ ಊರಿಗೆ ಹೋಗಿರಬಹುದು ಎಂದು ಶಂಕಿಸಲಾಗಿದೆ.ಈ ಬಗ್ಗೆ ಫೈಝುಲ್ ಇಸ್ಲಾಂ ಎಜುಕೇಶನ್ ಟ್ರಸ್ಟಿನ ಫರ್ವೇಝ್ ಸಲೀಂ ನೀಡಿದ ದೂರಿನಂತೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
--------------------------ಪರಿಷತ್ ಚುನಾವಣೆ ಧನಂಜಯ ಸರ್ಜಿ - ಭೋಜೇಗೌಡರಿಗೆ ಉಡುಪಿ ಬಿಜೆಪಿ ಗೌರವಾರ್ಪಣೆ
ಕನ್ನಡಪ್ರಭ ವಾರ್ತೆ ಉಡುಪಿವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಜಿಲ್ಲಾ ಕಚೇರಿಗೆ ಭೇಟಿ ನೀಡಿದ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಎನ್.ಡಿ.ಎ. ಅಭ್ಯರ್ಥಿ ಎಸ್.ಎಲ್. ಭೋಜೇಗೌಡ ಅವರನ್ನು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಶಾಲು ಹೊದೆಸಿ ಗೌರವಿಸಿದರು.
ಈ ಸಂದರ್ಭ ಉಡುಪಿ ಶಾಸಕ ಯಶ್ ಪಾಲ್ ಎ. ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಡಿ. ಎಸ್. ಅರುಣ್, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ರಾಘವೇಂದ್ರ ಕುಂದರ್, ನಿಕಟಪೂರ್ವ ಜಿಲ್ಲಾ ಉಪಾಧ್ಯಕ್ಷ ಬೈಕಾಡಿ ಸುಪ್ರಸಾದ್ ಶೆಟ್ಟಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ವಕ್ತಾರ ವಿಜಯಕುಮಾರ್ ಉದ್ಯಾವರ ಮತ್ತಿತರರು ಉಪಸ್ಥಿತರಿದ್ದರು.