ನಗರದ ವಿವಿಧೆಡೆ ಪ್ರತಿಷ್ಠಾಪಿಸಲಾದ 22 ಗಣೇಶ ಮೂರ್ತಿ ವಿಸರ್ಜನಾ ಶೋಭಾಯಾತ್ರೆ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿ ನಾಲ್ವರು ಗಾಯಗೊಂಡ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಈ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ.
ವಿರಾಜಪೇಟೆ : ನಗರದ ವಿವಿಧೆಡೆ ಪ್ರತಿಷ್ಠಾಪಿಸಲಾದ 22 ಗಣೇಶ ಮೂರ್ತಿ ವಿಸರ್ಜನಾ ಶೋಭಾಯಾತ್ರೆ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿ ನಾಲ್ವರು ಗಾಯಗೊಂಡ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಈ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ.ಅಲಂಕೃತ ಡಿಜೆ ವಾಹನದ ಮೇಲಿದ್ದವರಿಗೆ ವಿದ್ಯುತ್ ಸ್ಪರ್ಶವಾಗಿದ್ದು ಈ ಸಂದರ್ಭದಲ್ಲಿ ಡಿಜೆ ಸೌಂಡ್ ಬಾಕ್ಸ್‌ಗಳಿಗೂ ಹಾನಿ ಉಂಟಾಗಿದೆ.ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರ ಪರಿಸ್ಥಿತಿಯಲ್ಲಿರುವ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿ ಹಾಗೂ ಮೈಸೂರು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಗಾಯಾಳುಗಳು ಹುಬ್ಬಳ್ಳಿ ಮತ್ತು ಧಾರವಾಡ ಮೂಲದವರು ಎಂದು ತಿಳಿದುಬಂದಿದೆ.
ಶಾಸಕ ಎ.ಎಸ್. ಪೊನ್ನಣ್ಣ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ ಹಾಗೂ ಶಬೀರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.