ಸತತ ನಾಲ್ಕು ಬಾರಿ ದಾಖಲೆ ಬಹುಮತಗಳೊಂದಿಗೆ ಶಾಸಕರಾಗಿ ಆಯ್ಕೆಯಾಗಿರುವ ಕೆ.ಎಂ. ಶಿವಲಿಂಗೇಗೌಡರು ಅರಸೀಕೆರೆ ಕ್ಷೇತ್ರವನ್ನು ರಾಜ್ಯದ ಮಾದರಿ ಕ್ಷೇತ್ರವನ್ನಾಗಿ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಕ್ಷೇತ್ರದ ಸಮಗ್ರ ಅಭಿವೃದ್ಧಿ, ಜನಪರ ಆಡಳಿತ ಮತ್ತು ನಿರಂತರ ಸಾರ್ವಜನಿಕ ಸೇವೆಯನ್ನು ಪರಿಗಣಿಸಿ ಅವರಿಗೆ ಸಚಿವ ಸ್ಥಾನ ನೀಡುವುದು ನ್ಯಾಯಸಮ್ಮತವಾಗಿದ್ದು, ಇದರಿಂದ ರಾಜ್ಯ ಹಾಗೂ ಕ್ಷೇತ್ರದ ಅಭಿವೃದ್ಧಿಗೆ ಮತ್ತಷ್ಟು ವೇಗ ಸಿಗಲಿದೆ ಎಂದು ಸಂಘದ ಪದಾಧಿಕಾರಿಗಳು ಅಭಿಪ್ರಾಯಪಟ್ಟರು. ರೈತರು, ಕೂಲಿ ಕಾರ್ಮಿಕರು ಹಾಗೂ ಬಡವರ ಸಮಸ್ಯೆಗಳನ್ನು ಹತ್ತಿರದಿಂದ ಅರಿತು ಅವರ ಸಂಕಷ್ಟಗಳಿಗೆ ಸ್ಪಂದಿಸುವ ಜನನಾಯಕನಾಗಿ ಅವರು ಗುರುತಿಸಿಕೊಂಡಿದ್ದಾರೆ. ಅಭಿವೃದ್ಧಿ ಹಾಗೂ ಜನಸೇವೆಯಲ್ಲಿ ಅವರ ಸಾಧನೆಯನ್ನು ಪರಿಗಣಿಸಿ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿದರು.

ಕನ್ನಡಪ್ರಭ ವಾರ್ತೆ ಅರಸೀಕೆರೆ

ರಾಜ್ಯ ರಾಜಕಾರಣದಲ್ಲಿ ವಿಶಿಷ್ಟ ಗುರುತನ್ನು ಮೂಡಿಸಿರುವ ತಾಲೂಕಿನ ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರಿಗೆ ಈ ಬಾರಿ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ತಾಲೂಕು ಘಟಕ ಒತ್ತಾಯಿಸಿದೆ. ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಎಂ.ಎನ್. ಯೋಗೇಶಪ್ಪ ಮಾತನಾಡಿ, ಸತತ ನಾಲ್ಕು ಬಾರಿ ದಾಖಲೆ ಬಹುಮತಗಳೊಂದಿಗೆ ಶಾಸಕರಾಗಿ ಆಯ್ಕೆಯಾಗಿರುವ ಕೆ.ಎಂ. ಶಿವಲಿಂಗೇಗೌಡರು ಅರಸೀಕೆರೆ ಕ್ಷೇತ್ರವನ್ನು ರಾಜ್ಯದ ಮಾದರಿ ಕ್ಷೇತ್ರವನ್ನಾಗಿ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಕ್ಷೇತ್ರದ ಸಮಗ್ರ ಅಭಿವೃದ್ಧಿ, ಜನಪರ ಆಡಳಿತ ಮತ್ತು ನಿರಂತರ ಸಾರ್ವಜನಿಕ ಸೇವೆಯನ್ನು ಪರಿಗಣಿಸಿ ಅವರಿಗೆ ಸಚಿವ ಸ್ಥಾನ ನೀಡುವುದು ನ್ಯಾಯಸಮ್ಮತವಾಗಿದ್ದು, ಇದರಿಂದ ರಾಜ್ಯ ಹಾಗೂ ಕ್ಷೇತ್ರದ ಅಭಿವೃದ್ಧಿಗೆ ಮತ್ತಷ್ಟು ವೇಗ ಸಿಗಲಿದೆ ಎಂದು ಸಂಘದ ಪದಾಧಿಕಾರಿಗಳು ಅಭಿಪ್ರಾಯಪಟ್ಟರು. ರೈತರು, ಕೂಲಿ ಕಾರ್ಮಿಕರು ಹಾಗೂ ಬಡವರ ಸಮಸ್ಯೆಗಳನ್ನು ಹತ್ತಿರದಿಂದ ಅರಿತು ಅವರ ಸಂಕಷ್ಟಗಳಿಗೆ ಸ್ಪಂದಿಸುವ ಜನನಾಯಕನಾಗಿ ಅವರು ಗುರುತಿಸಿಕೊಂಡಿದ್ದಾರೆ. ಅಭಿವೃದ್ಧಿ ಹಾಗೂ ಜನಸೇವೆಯಲ್ಲಿ ಅವರ ಸಾಧನೆಯನ್ನು ಪರಿಗಣಿಸಿ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿದರು.ಸಂಘದ ಪ್ರಧಾನ ಕಾರ್ಯದರ್ಶಿ ರಂಗನಾಥಾಚಾರ್ ಮಾತನಾಡಿ, ಅರಸೀಕೆರೆ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾದ ಯಾವುದೇ ಶಾಸಕರಿಗೆ ಇದುವರೆಗೆ ಸಚಿವರಾಗುವ ಅವಕಾಶ ದೊರೆತಿಲ್ಲ ಎಂಬುದು ಕ್ಷೇತ್ರದ ಜನತೆಯಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್ ಅವರು ಶಿವಲಿಂಗೇಗೌಡರಿಗೆ ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದರು. ಆ ಭರವಸೆಯನ್ನು ಈಡೇರಿಸುವ ಸಮಯ ಇದೀಗ ಬಂದಿದೆ ಎಂದು ಹೇಳಿದರು. ಶಿವಲಿಂಗೇಗೌಡರು ಪಕ್ಷಭೇದ ಮರೆತು ಸರ್ಕಾರದಿಂದ ಹೆಚ್ಚಿನ ಅನುದಾನ ತಂದು ಕ್ಷೇತ್ರದ ರಸ್ತೆ, ಶಿಕ್ಷಣ, ನೀರಾವರಿ, ಆರೋಗ್ಯ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ವಿಶೇಷ ಕೊಡುಗೆ ನೀಡಿದ್ದಾರೆ. ಅವರ ಅಭಿವೃದ್ಧಿ ಕಾರ್ಯಗಳಿಂದ ಅರಸೀಕೆರೆ ರಾಜ್ಯದ ಗಮನ ಸೆಳೆದಿದ್ದು, ಸಚಿವ ಸ್ಥಾನ ದೊರೆತರೆ ತಾಲೂಕು ಹಾಗೂ ರಾಜ್ಯದ ಅಭಿವೃದ್ಧಿಗೆ ಇನ್ನಷ್ಟು ಅನುಕೂಲವಾಗಲಿದೆ ಎಂದು ಅಭಿಪ್ರಾಯಪಟ್ಟರು.ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಉಪಾಧ್ಯಕ್ಷೆ ಸರಸ್ವತಮ್ಮ, ಸಂಘಟನಾ ಕಾರ್ಯದರ್ಶಿ ನಟರಾಜ್, ಕಾರ್ಯದರ್ಶಿ ಮಲ್ಲಯ್ಯ, ಲೆಕ್ಕಪರಿಶೋಧಕ ಪುಟ್ಟಸ್ವಾಮಿ, ಖಜಾಂಚಿ ಜಗನ್ನಾಥ್, ಗಂಗಾಧರ್ ಶೆಟ್ಟಿ, ನಾಸಿರಾ ಬೇಗಂ ಸೇರಿದಂತೆ ಹಲವರು ಉಪಸ್ಥಿತರಿದ್ದರು.