ಸಾರಾಂಶ
ಬೇರೆಡೆ ಸಿಇಟಿ ಮತ್ತು ನೀಟ್ ಕೋಚಿಂಗ್ ತೆಗೆದು ಕೊಳ್ಳಬೇಕಾದರೆ ಲಕ್ಷಾಂತರ ಹಣ ನೀಡಬೇಕು. ಆದರೆ ಶಾಸಕ ಪ್ರದೀಪ್ ಈಶ್ವರ್ ರ ಪರಿಶ್ರಮ ನೀಟ್ ಅಕಾಡಮಿಯಿಂದ ಇಲ್ಲಿ ಎಲ್ಲಾ ಮಕ್ಕಳಿಗೂ ಸಿಇಟಿ ಮತ್ತು ನೀಟ್ ಕೋಚಿಂಗ್ ಅನ್ನು ಉಚಿತವಾಗಿ ನೀಡುತ್ತಿರುವುದಲ್ಲದೇ ಉಚಿತ ಊಟದ ವ್ಯವಸ್ಥೆಯನ್ನು ಶಾಸಕರು ಮಾಡಿದ್ದಾರೆ.
ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಶಾಸಕ ಪ್ರದೀಪ್ ಈಶ್ವರ್ ಅವರು ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ನೀಟ್, ಸಿಇಟಿ ಕೋಚಿಂಗ್ ಮೂಲಕ ಕ್ಷೇತ್ರದಲ್ಲಿ ಬದಲಾವಣೆ ಮತ್ತು ಕ್ಷೇತ್ರದ ಅಭಿವೃದ್ಧಿಗೆ ಪ್ರಯತ್ನ ಮಾಡುತ್ತಿರುವುದು ಹೆಮ್ಮೆಯ ಸಂಗತಿ ಎಂದು ಮಂಡಿಕಲ್ ಮತ್ತು ಮಂಚೇನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗಭೂಷಣ್ ತಿಳಿಸಿದರು.ನಗರದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶಾಸಕ ಪ್ರದೀಪ್ ಈಶ್ವರ್ ರ ಪರಿಶ್ರಮ ನೀಟ್ ಅಕಾಡಮಿಯಿಂದ ಉಚಿತ ಸಿಇಟಿ ಮತ್ತು ನೀಟ್ ತರಗತಿಗಳು ಆರಂಭಕ್ಕೆ ದೀಪ ಬೇಳಗುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು.
ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ಶಾಸಕರು 10ನೇ ತರಗತಿ ಮತ್ತು ಪಿಯುಸಿಯ ವಿದ್ಯಾರ್ಥಿಗಳಿಗೆ ತಲಾ 1000 ರು., ಡಿಗ್ರಿ, ಎಂಜಿನಿಯರಿಂಗ್, ಮೆಡಿಕಲ್ ವಿದ್ಯಾರ್ಥಿಗಳಿಗೆ 3000 ರು., ಪಿಯುಸಿ ಮಕ್ಕಲಿಗೆ ಸಾವಿರ ರು.ಗಳ ಸ್ಕಾಲರ್ ಶಿಪ್ ನೀಡುತ್ತಿದ್ದು, ಕ್ಷೇತ್ರದ ಜನರ ಸಮಸ್ಯೆಗಳ ಪರಿಹಾರಕ್ಕೆ 40 ಜನರ ತಂಡ ರಚಿಸಿದ್ದಾರೆ ಎಂದರು.
ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಮುನಿರಾಜು ಮಾತನಾಡಿ, ಬೇರೆಡೆ ಸಿಇಟಿ ಮತ್ತು ನೀಟ್ ಕೋಚಿಂಗ್ ತೆಗೆದು ಕೊಳ್ಳಬೇಕಾದರೆ ಲಕ್ಷಾಂತರ ಹಣ ನೀಡಬೇಕು. ಆದರೆ ಇಲ್ಲಿ ಎಲ್ಲಾ ಮಕ್ಕಳಿಗೂ ಸಿಇಟಿ ಮತ್ತು ನೀಟ್ ಕೋಚಿಂಗ್ ಅನ್ನು ಉಚಿತವಾಗಿ ನೀಡುತ್ತಿರುವುದಲ್ಲದೇ ಉಚಿತ ಊಟದ ವ್ಯವಸ್ಥೆಯನ್ನು ಶಾಸಕರು ಮಾಡಿದ್ದಾರೆ ಎಂದು ಶ್ಲಾಘಿಸಿದರು.ಈ ವೇಳೆ ಪ್ರಾಧ್ಯಾಪಕರಾದ ಡಾ.ವೆಂಕಟರಾಮ್(ವಿನಯ್),ಡಾ.ಎಲ್.ನಾಗರಾಜ್, ಉಪನ್ಯಾಸಕ ಸದಾಶಿವ ಆರಾಧ್ಯ, ಮುಖಂಡರಾದ ಉಮೇಶ್,ಅರವಿಂದ್,ಗಣೇಶ್,ನೀಟ್ ಅಕಾಡೆಮಿಯ ಪ್ರಾಧ್ಯಪಕರು ಮತ್ತಿತರರು ಇದ್ದರು.