ಪ್ರಾಥಮಿಕ ಆರೋಗ್ಯ ಕೇಂದ್ರ ಕಾಟಿಪಳ್ಳ ಮತ್ತು ಲಯನ್ಸ್ ಕ್ಲಬ್ ಗಣೇಶಪುರ ಇದರ ಜಂಟಿ ಆಶ್ರಯದಲ್ಲಿ ಉಚಿತ ಕಣ್ಣು ತಪಾಸಣಾ ಶಿಬಿರ ಮತ್ತು ಕನ್ನಡಕ ವಿತರಣೆ ಕಾರ್ಯಕ್ರಮ ಕಾಟಿಪಳ್ಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜರಗಿತು.
ಮಂಗಳೂರು: ಪ್ರಾಥಮಿಕ ಆರೋಗ್ಯ ಕೇಂದ್ರ ಕಾಟಿಪಳ್ಳ ಮತ್ತು ಲಯನ್ಸ್ ಕ್ಲಬ್ ಗಣೇಶಪುರ ಇದರ ಜಂಟಿ ಆಶ್ರಯದಲ್ಲಿ ಉಚಿತ ಕಣ್ಣು ತಪಾಸಣಾ ಶಿಬಿರ ಮತ್ತು ಕನ್ನಡಕ ವಿತರಣೆ ಕಾರ್ಯಕ್ರಮ ಕಾಟಿಪಳ್ಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜರಗಿತು. 100 ಮಂದಿ ಕಣ್ಣು ತಪಾಸಣೆ ಮಾಡಲಾಗಿದ್ದು 68 ಮಂದಿಗೆ ಕನ್ನಡಕ ವಿತರಿಸಲಾಯಿತು. ಐದು ಮಂದಿಯಲ್ಲಿ ಕಣ್ಣಿನ ಪೊರೆ ಪತ್ತೆಯಾಗಿದ್ದು, ಇತರ ಎರಡು ಮಂದಿಗೆ ಕಣ್ಣಿಗೆ ಸಂಬಂಧಿಸಿದ ತೊಂದರೆಗಳು ಕಂಡು ಬಂದಿದೆ. ತೊಂದರೆಗೆ ಒಳಗಾದವರ ಮತ್ತು ಅವರ ಸಂಬಂಧಿಕರ ಒಪ್ಪಿಗೆ ಪಡೆದು ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಯನ್ನು ನಡೆಸಲಾಗುವುದು ಎಂದು ಆರೋಗ್ಯ ಕೇಂದ್ರದ ಅಧಿಕಾರಿಗಳು ತಿಳಿಸಿದ್ದಾರೆ.