ಸಾರಾಂಶ
ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಕೊಂಡು, ಉತ್ತಮ ದೇಹಾರೋಗ್ಯ ಕಾಪಾಡಿಕೊಳ್ಳಬೇಕು. ನಾವು ಆರೋಗ್ಯವಾಗಿದ್ದರೆ ಮಾತ್ರ ಬದುಕಿನಲ್ಲಿ ಏನನ್ನಾದರೂ ಸಾಧಿಸಲು ಸಾಧ್ಯ
ಕನ್ನಡಪ್ರಭ ವಾರ್ತೆ ಮೈಸೂರು
ಹುಟ್ಟಿನಿಂದಲೇ ದೃಷ್ಟಿಯನ್ನು ಕಳೆದುಕೊಂಡವರು ಪ್ರಪಂಚವನ್ನು ನೋಡುವ ಭಾಗ್ಯದಿಂದ ವಂಚಿತರಾಗಿದ್ದಾರೆ. ಆದರೆ, ಬಹಳಷ್ಟು ಮಂದಿ ತಮ್ಮ ನಿರ್ಲಕ್ಷ್ಯದಿಂದ ಕಣ್ಣು ಕಳೆದುಕೊಂಡವರಿದ್ದಾರೆ. ಆದ ಕಾರಣ ದೃಷ್ಟಿ ಇದ್ದವರು ಕಣ್ಣಿನ ರಕ್ಷಣೆಗೆ ಒತ್ತು ನೀಡುವುದು ಅವಶ್ಯ ಎಂದು ಎ.ಎಸ್.ಜಿ ಆಸ್ಪತ್ರೆಯ ವೈದ್ಯ ಡಾ.ಎಚ್.ಎನ್. ಮಹೇಶ್ ಕುಮಾರ್ ತಿಳಿಸಿದರು.ನಗರದ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ಎ.ಎಸ್.ಜಿ ಕಣ್ಣಿನ ಆಸ್ಪತ್ರೆಯಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳೆಯರಿಗಾಗಿ ಶುಕ್ರವಾರ ಆಯೋಜಿಸಿದ್ದ ಉಚಿತ ಕಣ್ಣಿನ ತಪಾಸಣಾ ಶಿಬಿರದಲ್ಲಿ ಮಾತನಾಡಿದ ಅವರು, ಇಂದಿನ ಒತ್ತಡದ ಜೀವನದಲ್ಲಿ ಆರೋಗ್ಯದ ಬಗ್ಗೆ ಕಾಳಜಿ ವಹಿಸದಿರುವುದರಿಂದ ಅನೇಕ ರೋಗಗಳಿಗೆ ತುತ್ತಾಗುವಂತಾಗಿದೆ ಎಂದು ಹೇಳಿದರು.
ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಕೊಂಡು, ಉತ್ತಮ ದೇಹಾರೋಗ್ಯ ಕಾಪಾಡಿಕೊಳ್ಳಬೇಕು. ನಾವು ಆರೋಗ್ಯವಾಗಿದ್ದರೆ ಮಾತ್ರ ಬದುಕಿನಲ್ಲಿ ಏನನ್ನಾದರೂ ಸಾಧಿಸಲು ಸಾಧ್ಯ ಎಂದರು.ಆಸ್ಪತ್ರೆಯ ವೈದ್ಯರಾದ ಡಾ. ಲೂಸಿ ಕಾವೇರಿ, ಡಾ. ವಿನಿ ಬದ್ಲಾನಿ, ಡಾ. ರೋಷನ್, ಆಪರೇಷನ್ ಮ್ಯಾನೇಜರ್ ಪ್ರದೀಪ್, ಪ್ರಸಾದ್, ಮಾರ್ಕೆಟಿಂಗ್ ಮ್ಯಾನೇಜರ್ ಪ್ರದೀಪ್ ರಾವತ್, ಸಮಾಜ ಸೇವಕರಾದ ವಿದ್ಯಾ , ಮಂಜುಳಾ, ಚಾಂದಿನಿ, ನಾಗಶ್ರೀ ಮೊದಲಾದವರು ಇದ್ದರು.