ಸಾರಾಂಶ
ಯಾದಗಿರಿ: ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಜಿಲ್ಲಾ ಆಸ್ಪತ್ರೆ, ತಾಲೂಕು, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಉಚಿತ ನೇತ್ರ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಶರಣಪ್ಪ ಪಾಟೀಲ ತಿಳಿಸಿದ್ದಾರೆ.ಶಹಾಪುರ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಗುರುವಾರ ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ ವಡಗೇರಾ ಸಮುದಾಯ ಆರೋಗ್ಯ ಕೇಂದ್ರದಲ್ಲಿ 17 ರಂದು ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ, ಸುರಪುರ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ 18ರಂದು ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ ತಪಾಸಣೆ ನಡೆಯಲಿದೆ.ಹುಣಸಗಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ 20ರಂದು ಬೆಳಿಗ್ಗೆ 10 ರಿಂದ ಸಂಜೆ 4ರವರೆಗೆ, ಯಾದಗಿರಿ ಜಿಲ್ಲಾ ಆಸ್ಪತ್ರೆಯಲ್ಲಿ 21ರಂದು ಬೆಳಿಗ್ಗೆ 10 ರಿಂದ ಸಂಜೆ 4ರವರೆಗೆ, ಗುರುಮಠಕಲ್ ಸಮುದಾಯ ಆರೋಗ್ಯ ಕೇಂದ್ರದಲ್ಲಿ 22ರಂದು ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ ನಡೆಯಲಿದೆ. ಸಾರ್ವಜನಿಕರು ತಮ್ಮ ಆಧಾರ್ ಕಾರ್ಡ್, ಬಿಪಿಎಲ್ ಪಡಿತರ ಚೀಟಿಯನ್ನು ಪ್ರಾಧಿಕಾರದಿಂದ ಪಡೆದು ಶಿಬಿರದಲ್ಲಿ ಭಾಗವಹಿಸಿ ನೇತ್ರ ತಪಾಸಣಾ ಶಿಬಿರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.
-----