ಪ್ರತಿ ತಿಂಗಳು ಮೊದಲನೇ ಮಂಗಳವಾರ ಶಾರದಾ ಕಣ್ಣಿನ ಮತ್ತು ದಂತ ಆಸ್ಪತ್ರೆಯಿಂದ ಉಚಿತ ಕಣ್ಣಿನ ತಪಾಸಣೆ ನಡೆಸಲಾಗುತ್ತಿದೆ. ಕಣ್ಣಿನ ಪೊರೆ ತಪಾಸಣೆ ಮಾಡಿ ಶಸ್ತ್ರಚಿಕಿತ್ಸೆ ಅವಶ್ಯಕತೆ ಇರುವವರನ್ನು ಬೆಂಗಳೂರಿನ ನಮ್ಮ ಶಾರದಾ ಕಣ್ಣಿನ ಆಸ್ಪತ್ರೆಗೆ ಕರೆದೊಯ್ದು ನಾಳೆ ಬೆಳಗ್ಗೆ ಶಸ್ತ್ರಚಿಕಿತ್ಸೆ ನಡೆಸಿ ನಾಡಿದ್ದು ಇಲ್ಲಿಗೆ ಕರೆ ತರಲಾಗುತ್ತದೆ.

ಹಲಗೂರು:

ಬೆಂಗಳೂರಿನ ಚಾಮರಾಜಪೇಟೆಯ ಶಾರದ ಕಣ್ಣಿನ ಆಸ್ಪತ್ರೆಯಿಂದ ಇಲ್ಲಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಚಿತ ಕಣ್ಣಿನ ತಪಾಸಣೆ ಶಿಬಿರ ನಡೆಯಿತು.

ಶಿಬಿರದಲ್ಲಿ 25 ಜನರಿಗೆ ತಪಾಸಣೆ ನಡೆಸಿ ಎಂಟು ಜನರಿಗೆ ಶಸ್ತ್ರಚಿಕಿತ್ಸೆ ಅವಶ್ಯಕತೆ ಇದ್ದ ಹಿನ್ನೆಲೆಯಲ್ಲಿ ಬೆಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಯಿತು.

ವೈದ್ಯಾಧಿಕಾರಿ ಚಂದ್ರಶೇಖರ್ ಮಾತನಾಡಿ, ಪ್ರತಿ ತಿಂಗಳು ಮೊದಲನೇ ಮಂಗಳವಾರ ಶಾರದಾ ಕಣ್ಣಿನ ಮತ್ತು ದಂತ ಆಸ್ಪತ್ರೆಯಿಂದ ಉಚಿತ ಕಣ್ಣಿನ ತಪಾಸಣೆ ನಡೆಸಲಾಗುತ್ತಿದೆ. ಕಣ್ಣಿನ ಪೊರೆ ತಪಾಸಣೆ ಮಾಡಿ ಶಸ್ತ್ರಚಿಕಿತ್ಸೆ ಅವಶ್ಯಕತೆ ಇರುವವರನ್ನು ಬೆಂಗಳೂರಿನ ನಮ್ಮ ಶಾರದಾ ಕಣ್ಣಿನ ಆಸ್ಪತ್ರೆಗೆ ಕರೆದೊಯ್ದು ನಾಳೆ ಬೆಳಗ್ಗೆ ಶಸ್ತ್ರಚಿಕಿತ್ಸೆ ನಡೆಸಿ ನಾಡಿದ್ದು ಇಲ್ಲಿಗೆ ಕರೆ ತರಲಾಗುತ್ತದೆ ಎಂದರು.

ಆಸ್ಪತ್ರೆಯಲ್ಲಿ ಉಚಿತವಾಗಿ ಶಸ್ತ್ರಚಿಕಿತ್ಸೆ ಪಡೆದುಕೊಂಡ ಶಿಬಿರಾರ್ಥಿಗಳು ಆರೋಗ್ಯವಾಗಿದ್ದಾರೆ. ಹೆಚ್ಚು ಶಿಬಿರಾರ್ಥಿಗಳು ಪಾಲ್ಗೊಳ್ಳುತ್ತಿದ್ದಾರೆ. ಗ್ರಾಮೀಣ ಪ್ರದೇಶದ ಜನರು ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ಈ ವೇಳೆ ಸಂಯೋಜಕರಾದ ಮಹದೇವಪ್ಪ ಸೇರಿದಂತೆ ಇತರರು ಇದ್ದರು.ನಾಳೆ ಕೆ.ಎನ್.ನಾಗೇಗೌಡರ 22ನೇ ವರ್ಷದ ಪುಣ್ಯಸ್ಮರಣೆ

ಮಳವಳ್ಳಿ: ಮಾಜಿ ಸಚಿವ ದಿ.ಕೆ.ಎನ್.ನಾಗೇಗೌಡರ 22ನೇ ವರ್ಷದ ಪುಣ್ಯಸ್ಮರಣೆ ಹಾಗೂ ಸಮಾಜ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭ ಫೆ.5ರಂದು ನಡೆಯಲಿದೆ.

ಪಟ್ಟಣದ ಶಾಂತಿ ಕಾಲೇಜು ಆವರಣದಲ್ಲಿ ಬೆಳಗ್ಗೆ 11ಗಂಟೆಗೆ ಶಾಂತಿ ಶಿಕ್ಷಣ ಸಂಸ್ಥೆ ಹಾಗೂ ಶಾಂತಿ ಸೇವಾ ಟ್ರಸ್ಟ್‌ನಿಂದ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಶಾಂತಿ ಶಿಕ್ಷಣ ಸಂಸ್ಥೆ ಅಧ್ಯಕ್ಷೆ ಎಂ.ಕೆ.ನಾಗಮಣಿ ನಾಗೇಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ಕೃಷಿಕ್ ಸರ್ವೋದಯ ಟ್ರಸ್ಟ್ ಅಧ್ಯಕ್ಷ, ನಿವೃತ್ತ ಐಎಎಸ್ ಅಧಿಕಾರಿ ಟಿ.ತಿಮ್ಮೇಗೌಡ ಅವರು ಸೇವಾ ಪ್ರಶಸ್ತಿ ಸ್ವೀಕರಿಸಿ ಮುಖ್ಯ ಭಾಷಣ ಮಾಡಲಿದ್ದಾರೆ. ಅತಿಥಿಗಳಾಗಿ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷ ಎಚ್.ಎಂ.ಮಹದೇವಸ್ವಾಮಿ, ಕಾರ್ಯದರ್ಶಿ ಎಂ.ಎಚ್.ಕೆಂಪಯ್ಯ, ಸಹ ಕಾರ್ಯದರ್ಶಿ ಎಚ್.ತಿಮ್ಮೇಗೌಡ, ಖಜಾಂಚಿ ಕೆ.ಸಿ.ಪುಟ್ಟೀರೇಗೌಡ, ಸದಸ್ಯರಾದ ಎಂ.ಎನ್.ಅರ್ಜುನ್ ಗೌಡ, ಪುಟ್ಟರಾಜು, ಎಂ.ಸಿ.ಕೃಷ್ಣ, ಎಂ.ಮಲ್ಲುಗೌಡ, ಟ್ರಸ್ಟಿಗಳಾದ ರಮೇಶ್, ದೊರೆಸ್ವಾಮಿ, ಕೆ.ಎನ್.ರಾಜಣ್ಣ, ಮಾರ್ಕಂಡೇಯ, ಪ್ರಾಂಶುಪಾಲರಾದ ಸಿ.ಎಂ.ನಾಗರಾಜು, ಎಂ.ಸಿ.ಶಿವಪ್ಪ, ಎಚ್.ಎನ್.ಮಂಜು, ಶಿವಕುಮಾರ್, ಕುಸುಮಾ ಪಾಲ್ಗೊಳ್ಳಲಿದ್ದಾರೆ ಎಂದು ಶಾಂತಿ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಎಂ.ಎಚ್.ಕೆಂಪಯ್ಯ ತಿಳಿಸಿದ್ದಾರೆ.