ಆ.೬ ಹೊಳವನಹಳ್ಳಿಯಲ್ಲಿ ಆರೋಗ್ಯ ಶಿಬಿರ ಉಚಿತ

| Published : Aug 03 2025, 11:45 PM IST

ಸಾರಾಂಶ

ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ರವರ ೭೪ ನೇ ವರ್ಷದ ಹುಟ್ಟು ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲು ಆ.6ರಂದು ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರವನ್ನು ಡಾ.ಜಿ.ಪರಮೇಶ್ವರ್ ಅಭಿಮಾನಿ ಬಳಗದಿಂದ ಏರ್ಪಡಿಸಲಾಗಿದೆ ಎಂದು ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೊಡ್ಲಹಳ್ಳಿ ಅಶ್ವತ್ಥನಾರಾಯಣ್ ತಿಳಿಸಿದರು.

ಕನ್ನಡಪ್ರಭ ವಾರ್ತೆ ಕೊರಟಗೆರೆ

ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ರವರ ೭೪ ನೇ ವರ್ಷದ ಹುಟ್ಟು ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲು ಆ.6ರಂದು ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರವನ್ನು ಡಾ.ಜಿ.ಪರಮೇಶ್ವರ್ ಅಭಿಮಾನಿ ಬಳಗದಿಂದ ಏರ್ಪಡಿಸಲಾಗಿದೆ ಎಂದು ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೊಡ್ಲಹಳ್ಳಿ ಅಶ್ವತ್ಥನಾರಾಯಣ್ ತಿಳಿಸಿದರು. ತಾಲೂಕಿನ ಹೊಳವನಹಳ್ಳಿ ಹೋಬಳಿಯ ಇತಿಹಾಸ ಪ್ರಸಿದ್ದ ಕ್ಯಾಮೇನಹಳ್ಳಿ ಆಂಜನೇಯಸ್ವಾಮಿ ದೇವಾಲಯದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಏರ್ಪಡಿಸಲಾಗಿದ್ದ ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದರು. ಬುಧವಾರ ಪ್ರೌಢಶಾಲೆ ಆವರಣದಲ್ಲಿ ಈ ಶಿಬಿರ ಏರ್ಪಡಿಸಲಾಗಿದ್ದು ಈ ಆರೋಗ್ಯ ಶಿಬಿರವನ್ನು ಎಲ್ಲಾ ಸಾರ್ವಜನಿಕ ಬಂಧುಗಳು ಸದುಪಯೋಗ ಪಡಿಸಿಕೊಳ್ಳುವಂತೆ ಕೋರಿದರು. ಬರುವಂತ ಎಲ್ಲಾ ಸಾರ್ವಜನಿಕರಿಗೂ ತಿಂಡಿ ಮತ್ತು ಊಟದ ವ್ಯವಸ್ಥೆಯನ್ನು ಮಾಡಲಾಗುವುದು ಎಂದರು. ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರಕೆರೆಶಂಕರ್ ಮಾತನಾಡಿ, ಈ ಆರೋಗ್ಯ ಶಿಬಿರದಲ್ಲಿ ತುಮಕೂರು ಸಿದ್ದಾರ್ಥ ವೈದ್ಯಕೀಯ ಆಸ್ಪತ್ರೆಯ ನುರಿತ ತಜ್ಞ ವೈದ್ಯರುಗಳ ತಂಡ ಭಾಗವಹಿಸಲಿದ್ದು ಸಾರ್ವಜನಿಕರು ಶಿಬಿರಕ್ಕೆ ಬರುವಾಗ ಆಧಾರ್‌ಕಾರ್ಡ್ ಮತ್ತು ಪಡಿತರ ಕಾರ್ಡ್‌ನ್ನು ತರಬೇಕು ಎಂದು ಹೇಳಿದರು. ಜಿಲ್ಲಾ ಕಾಂಗ್ರೆಸ್ ಮಹಿಳಾ ಪ್ರಧಾನ ಕಾರ್ಯದರ್ಶಿ ಕವಿತಾ ಮಾತನಾಡಿ ಈ ಶಿಬಿರದಲ್ಲಿ ಯುವ ಕಾಂಗ್ರೆಸ್ ವತಿಯಿಂದ ರಕ್ತದಾನ ಶಿಬಿರವು ಸಹ ನಡೆಯಲಿದೆ ಇಂತಹ ಬೃಹತ್ ಆರೋಗ್ಯ ಶಿಬಿರದ ಸದುಪಯೋಗವನ್ನು ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಹನುಮಾನ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಜಯಮ್ಮ, ಯುವಕಾಂಗ್ರೆಸ್ ಅಧ್ಯಕ್ಷ ಬೈರೇಶ್, ವಿ.ಎಸ್.ಎಸ್.ಎನ್. ಅಧ್ಯಕ್ಷರಾದ ವಿನಯ್ ಕುಮಾರ್, ಕೇಶವಮೂರ್ತಿ, ಮುಖಂಡರುಗಳಾದ ವೆಂಕಟಪ್ಪ, ಜಯರಾಮ್, ಈಶಪ್ರಸಾದ್, ಗಟ್ಲಹಳ್ಳಿಕುಮಾರ್, ರವಿಕುಮಾರ್, ಮೈಲಾರಪ್ಪ, ಗೋವಿಂದರಾಜು, ಮಹಮದ್‌ಇಸ್ಮಾಯಿಲ್, ಗಣೇಶ್, ಉಮೇಶ್, ಸುನಿಲ್, ವೀರಭದ್ರಯ್ಯ, ಉಮಾಶಂಕರ್, ಅಲ್ಲಾಬಕಾಶ್, ವೀರಣ್ಣ, ಕಾರ್ ಮಹೇಶ್, ಗಂಗರಾಜು, ಜಗದೀಶ್, ಅರವಿಂದ್ ಸೇರಿದಂತೆ ಇತರರು ಇತರರಿದ್ದರು.