ನಾಳೆ ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ

| Published : Jul 05 2025, 01:48 AM IST

ಸಾರಾಂಶ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಶಾಖೆಯಿಂದ ಜು.6ರಂದು ಬೆಳಗ್ಗೆಯಿಂದ ಸಂಜೆಯವರೆಗೆ ಪತ್ರಕರ್ತರು, ಅವರ ಕುಟುಂಬ ವರ್ಗದವರು ಹಾಗೂ ಪತ್ರಿಕಾಲಯಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಕೆ.ವಿ.ಶಿವಕುಮಾರ್ ತಿಳಿಸಿದರು.

ಶಿವಮೊಗ್ಗ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಶಾಖೆಯಿಂದ ಜು.6ರಂದು ಬೆಳಗ್ಗೆಯಿಂದ ಸಂಜೆಯವರೆಗೆ ಪತ್ರಕರ್ತರು, ಅವರ ಕುಟುಂಬ ವರ್ಗದವರು ಹಾಗೂ ಪತ್ರಿಕಾಲಯಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಕೆ.ವಿ.ಶಿವಕುಮಾರ್ ತಿಳಿಸಿದರು.ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಶಿಬಿರದಲ್ಲಿ ರಕ್ತದೊತ್ತಡ (ಬಿಪಿ), ಇಸಿಜಿ, ಇಕೋ, ಪಲ್ಸ್, ಸ್ಯಾಚ್ಯುರೇಷನ್, ಸಿಬಿಸಿ, ಆರ್‌ಬಿಎಸ್, ಮೂತ್ರಪಿಂಡ ಸೇರಿದಂತೆ ವಿವಿಧ ಪರೀಕ್ಷೆಗಳನ್ನು ತಜ್ಞ ವೈದ್ಯರು ನಡೆಸಲಿದ್ದು, ವಿಶೇಷವಾಗಿ ಮಹಿಳೆಯರಿಗೆ ಸಂಬಂಧಿಸಿದ ಕಾಯಿಲೆಗಳ ಕುರಿತಾಗಿಯೂ ತಪಾಸಣೆ ನಡೆಸಲಿದ್ದಾರೆ ಎಂದರು.ನಗರದ ಮೆಟ್ರೋ ಆಸ್ಪತ್ರೆ, ಮಾತೃ ವಾತ್ಸಲ್ಯ ಆಸ್ಪತ್ರೆ, ಹೃದಯ ಸ್ಪೆಷಾಲಿಟಿ ಕ್ಲೀನಿಕ್, ಕ್ರಿಷ ಕಿಡ್ನಿ ಕೇರ್ ಸೆಂಟರ್ ಕೈಜೋಡಿಸಿದ್ದು, ತಜ್ಞ ವೈದ್ಯರಾದ ಡಾ. ಪೃಥ್ವಿ, ಡಾ. ದಯಾನಂದ್, ಡಾ. ನಾಗಮಣಿಯವರು ಪಾಲ್ಗೊಳ್ಳಲಿದ್ದಾರೆ.

ಬೆಳಗ್ಗೆ 10 ಗಂಟೆಗೆ ಮಾತೃ ವಾತ್ಸಲ್ಯ ಆಸ್ಪತ್ರೆಯಲ್ಲಿ ಶಿಬಿರವನ್ನು ವಿಧಾನ ಪರಿಷತ್ ಸದಸ್ಯೆ ಬಲ್ಕಿಶ್‌ಬಾನು ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ಎಸ್. ಸುಂದರೇಶ್, ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣಗೌಡ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆರ್. ಮೋಹನ್ ಕುಮಾರ್ ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು. ಡಾ.ಪೃಥ್ವಿ ಮಾತನಾಡಿ, ಪತ್ರಕರ್ತರು ಹಾಗೂ ಕುಟುಂಬದವರು, ಪತ್ರಿಕಾಲಯಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳು ತಪಾಸಣೆಗೆ ಬರುವಾಗ, ತಮ್ಮ ಆಧಾರ್ ಕಾರ್ಡ್, ಸಂಘದ ಸದಸ್ಯತ್ವ ಕಾರ್ಡ್‌ಗಳನ್ನು ಕಡ್ಡಾಯವಾಗಿ ತರುವಂತೆ ಸೂಚಿಸಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಡಾ.ನಾಗವೇಣಿ, ಡಾ.ದಯಾನಂದ, ಸಂಘದ ರಾಜ್ಯ ಸಮಿತಿ ನಿರ್ದೇಶಕ ಎನ್.ರವಿಕುಮಾರ್, ಪ್ರಧಾನ ಕಾರ್ಯದರ್ಶಿ ವಿ.ಟಿ.ಅರುಣ್, ನಗರ ಕಾರ್ಯದರ್ಶಿ ಕೆ.ಆರ್.ಸೋಮನಾಥ್, ಉಪಾಧ್ಯಕ್ಷ ಉಚ್ರಾಯಪ್ಪ ಇದ್ದರು.