ಸಾರಾಂಶ
ಹಾಸನ ತಾಲೂಕಿನ ಬಿ.ಕಾಟೀಹಳ್ಳಿಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ಆಗಸ್ಟ್ ೫ರಂದು ಇಲ್ಲಿಯ ಶಾಲಾ ಮಕ್ಕಳಿಗೆ ಮತ್ತು ಸಾರ್ವಜನಿಕರಿಗೆ ಉಚಿತವಾಗಿ ಹೃದಯ ಸಂಬಂಧಿ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರವನ್ನು ಏರ್ಪಡಿಸಿರುವುದಾಗಿ ಪುನರ್‌ಜೀವ ಸ್ವಯಂ ಸೇವಾಸಂಸ್ಥೆ ಕಾರ್ಯದರ್ಶಿ ಭರತ್ ತಿಳಿಸಿದರು. ಶಿಬಿರದಲ್ಲಿ ದೊರೆಯುವ ಸೌಲಭ್ಯಗಳೆಂದರೇ, ಉಚಿತವಾಗಿ ಸಾರ್ವಜನಿಕರಿಗೆ ಹೃದಯ ತಪಾಸಣೆ, ಕಣ್ಣಿನ ತಪಾಸಣೆ, ಬಿ.ಪಿ.ಶುಗರ್, ಹಾಗೂ ಇತರೆ ಕಾಯಿಲೆಗಳಿಗೆ ವೈದ್ಯಕೀಯ ಸೇವೆಗಳು ದೊರೆಯುತ್ತವೆ. ಸಾರ್ವಜನಿಕರು ಶಿಬಿರದಲ್ಲಿ ಭಾಗವಹಿಸಿ ಇದನ್ನು ಸದುಪಯೋಗಪಡಿಸಿಕೊಳ್ಳಬೇಕಾಗಿ ಮನವಿ ಮಾಡಿದರು.
ಕನ್ನಡಪ್ರಭ ವಾರ್ತೆ ಹಾಸನ
ತಾಲೂಕಿನ ಬಿ.ಕಾಟೀಹಳ್ಳಿಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ಆಗಸ್ಟ್ ೫ರಂದು ಇಲ್ಲಿಯ ಶಾಲಾ ಮಕ್ಕಳಿಗೆ ಮತ್ತು ಸಾರ್ವಜನಿಕರಿಗೆ ಉಚಿತವಾಗಿ ಹೃದಯ ಸಂಬಂಧಿ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರವನ್ನು ಏರ್ಪಡಿಸಿರುವುದಾಗಿ ಪುನರ್‌ಜೀವ ಸ್ವಯಂ ಸೇವಾಸಂಸ್ಥೆ ಕಾರ್ಯದರ್ಶಿ ಭರತ್ ತಿಳಿಸಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶ್ರೀ ಜೋಡಿ ಆಂಜನೇಯ ಸೇವಾ ಸಮಿತಿ, ರೋಟರಿ ಕ್ಲಬ್ ಆಫ್ ಹಾಸನ್ ಸನ್ ರೈಸ್, ಪುನರ್‌ಜೀವ ಸ್ವಯಂಸೇವಾ ಸಂಸ್ಥೆ, ಚನ್ನರಾಯಪಟ್ಟಣ, ಸ್ವಯಂ ಪ್ರೇರಿತ ರಕ್ತ ಕೇಂದ್ರ, ಚನ್ನರಾಯಪಟ್ಟಣ, ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್, ಹಾಸನ್, ಹಾಸನಾಂಬ ಲಯನ್ಸ್ ಕ್ಲಬ್ ಇವರ ವತಿಯಿಂದ ಆಗಸ್ಟ್ ೫ರಂದು ಮಂಗಳವಾರ ಬೆಳಿಗ್ಗೆ ೯ ರಿಂದ ಸಂಜೆ ೪ ಗಂಟೆಯವರೆಗೂ ಮಕ್ಕಳಿಗೆ ಮತ್ತು ಸಾರ್ವಜನಿಕರುಗಳಿಗೆ ಉಚಿತವಾಗಿ ಹೃದಯ ಸಂಭಂದಿ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಶಿಬಿರದಲ್ಲಿ ದೊರೆಯುವ ಸೌಲಭ್ಯಗಳೆಂದರೇ, ಉಚಿತವಾಗಿ ಸಾರ್ವಜನಿಕರಿಗೆ ಹೃದಯ ತಪಾಸಣೆ, ಕಣ್ಣಿನ ತಪಾಸಣೆ, ಬಿ.ಪಿ.ಶುಗರ್, ಹಾಗೂ ಇತರೆ ಕಾಯಿಲೆಗಳಿಗೆ ವೈದ್ಯಕೀಯ ಸೇವೆಗಳು ದೊರೆಯುತ್ತವೆ. ಸಾರ್ವಜನಿಕರು ಶಿಬಿರದಲ್ಲಿ ಭಾಗವಹಿಸಿ ಇದನ್ನು ಸದುಪಯೋಗಪಡಿಸಿಕೊಳ್ಳಬೇಕಾಗಿ ಮನವಿ ಮಾಡಿದರು. ಹೆಚ್ಚಿನ ಮಾಹಿತಿಗಾಗಿ ಹೆಚ್.ಡಿ. ವಜ್ರಕುಮಾರ್, ಮೊ. ೮೮೮೪೫೬೮೨೭೩, ಕೆ.ಎಸ್. ಯೋಗೀಶ್ ಮೊ. ೯೮೪೫೬೫೬೬೬೯, ಸಚಿತ್ ಮೊ. ೯೦೩೫೫೨೯೬೩೬ ಗೆ ಸಂಪರ್ಕಿಸಬಹುದು ಎಂದು ಮಾಹಿತಿ ನೀಡಿದರು. ಪತ್ರಿಕಾಗೋಷ್ಠಿಯಲ್ಲಿ ರೋಟರಿ ಕ್ಲಬ್ ಆಪ್ ಹಾಸನ್ ಸನ್ ರೈಸ್ ಕಾರ್ಯದರ್ಶಿ ಯೋಗೀಶ್, ಹಾಸನಾಂಬ ಲಯನ್ಸ್ ಕ್ಲಬ್ ಅಧ್ಯಕ್ಷ ಮೋಹನ್ ಕುಮಾರ್, ರೋಟರಿ ಸಂಸ್ಥೆ ಸದಸ್ಯ ದರ್ಶನ್, ಶ್ರೀ ಜೋಡಿ ಆಂಜನೇಯ ಸೇವಾ ಸಮಿತಿ ಗಂಗಾಧರ್ ಇತರರು ಉಪಸ್ಥಿತರಿದ್ದರು.