ಸಾರಾಂಶ
ದೇವನಹಳ್ಳಿಯ ಆಕಾಶ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ವೆಂಕಟಗಿರಿಕೋಟೆ ಗ್ರಾಪಂ ಮತ್ತು ನಾಗಾರ್ಜುನ ಕಾಲೇಜ್ ಆಫ್ ಮ್ಯಾನೇಜ್ ಮೆಂಟ್ ಸ್ಟಡೀಸ್, ಇವರ ಸಹಯೋಗದಲ್ಲಿ ಶಿಬಿರವನ್ನು ಆಯೋಜನೆ ಮಾಡಲಾಗುತ್ತಿದೆ. ಗ್ರಾಪಂ ವ್ಯಾಪ್ತಿಯ ಎಲ್ಲಾ ಹಳ್ಳಿಗಳ ಜನರು ಇದರ ಸದುಪಯೋಗ ಮಾಡಿಕೊಳ್ಳುವಂತೆ ತಿಳಿಸಿದರು.
ಕನ್ನಡಪ್ರಭ ವಾರ್ತೆ ವಿಜಯಪುರ
ವಿಜಯಪುರ ಹೋಬಳಿಯ ವೆಂಕಟಗಿರಿಕೋಟೆ ಗ್ರಾಪಂ ಸಮೀಪದ ಚನ್ನಕೇಶವಸ್ವಾಮಿ ಸಮುದಾಯ ಭವನದಲ್ಲಿ ಫೆ.12ರಂದು ಬುಧವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ರಕ್ತದಾನ ಶಿಬಿರವನ್ನು ಆಯೋಜನೆ ಮಾಡಲಾಗಿದೆ ಎಂದು ಗ್ರಾಪಂ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಆರ್.ಅಮರನಾಥ್ ತಿಳಿಸಿದರು.ಈ ಕುರಿತು ವೆಂಕಟಗಿರಿಕೋಟೆ ಗ್ರಾಪಂ ಕಾರ್ಯಾಲಯದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದೇವನಹಳ್ಳಿಯ ಆಕಾಶ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ವೆಂಕಟಗಿರಿಕೋಟೆ ಗ್ರಾಪಂ ಮತ್ತು ನಾಗಾರ್ಜುನ ಕಾಲೇಜ್ ಆಫ್ ಮ್ಯಾನೇಜ್ ಮೆಂಟ್ ಸ್ಟಡೀಸ್, ಇವರ ಸಹಯೋಗದಲ್ಲಿ ಶಿಬಿರವನ್ನು ಆಯೋಜನೆ ಮಾಡಲಾಗುತ್ತಿದೆ. ಗ್ರಾಪಂ ವ್ಯಾಪ್ತಿಯ ಎಲ್ಲಾ ಹಳ್ಳಿಗಳ ಜನರು ಇದರ ಸದುಪಯೋಗ ಮಾಡಿಕೊಳ್ಳುವಂತೆ ತಿಳಿಸಿದರು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಸವನಗೌಡ ಪಾಟೀಲ್ , ಗ್ರಾಪಂ ಅಧ್ಯಕ್ಷೆ ಬಿ. ಆರ್. ಸರೋಜಮ್ಮ, ಉಪಾಧ್ಯಕ್ಷ ಸಿ. ಜಗನ್ನಾಥ್, ಮಾಜಿ ಅಧ್ಯಕ್ಷ ಹುರುಳುಗುರ್ಕಿ ಶ್ರೀನಿವಾಸ್, ಆಶಾ ಮಂಜುನಾಥ್, ಜೋಸೆಪ್, ಮಾಜಿ ಉಪಾಧ್ಯಕ್ಷ ವಿಶ್ವನಾಥಾಚಾರ್, ಸದಸ್ಯರಾದ ಎಂ.ಮಾರಪ್ಪ, ನಾಗರಾಜ್ ಹಾಗೂ ನಾಗಾರ್ಜುನ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಶೋಭಾ, ಮೀನಾ, ಶಿಕ್ಷಣ ಇಲಾಖೆಯ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಜಯಂತಿ ಸೇರಿ ಗ್ರಾಪಂ ಸದಸ್ಯರು ಹಾಜರಿದ್ದರು.