ಜೆಎಸ್‌ಎಸ್‌ನಲ್ಲಿ ಉಚಿತ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ
KannadaprabhaNewsNetwork | Published : Oct 03 2023, 06:03 PM IST
ಜೆಎಸ್‌ಎಸ್‌ನಲ್ಲಿ ಉಚಿತ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ
ಸಾರಾಂಶ
ನಗರದ ಜೆಎಸ್‌ಎಸ್ ಮಹಿಳಾ ಕಾಲೇಜಿನಲ್ಲಿ ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಮತ್ತು ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ ಸೋಮವಾರ ನಡೆಯಿತು.ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಮತ್ತು ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರವನ್ನು ಜಿಲ್ಲಾಧಿಕಾರಿ ಶಿಲ್ಪಾನಾಗ್ ಉದ್ಘಾಟಿಸಿದರು
ಜೆಎಸ್‌ಎಸ್ ಶಿಕ್ಷಣ ಸಂಸ್ಥೆಗಳ ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾಧಿಕಾರಿ ಶಿಲ್ಪಾನಾಗ್ ಕನ್ನಡಪ್ರಭ ವಾರ್ತೆ ಚಾಮರಾಜನಗರ ನಗರದ ಜೆಎಸ್‌ಎಸ್ ಮಹಿಳಾ ಕಾಲೇಜಿನಲ್ಲಿ ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಮತ್ತು ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ ಸೋಮವಾರ ನಡೆಯಿತು. ಡಾ. ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ 108 ನೇ ಜಯಂತಿ ಮಹೋತ್ಸವ ಅಂಗವಾಗಿ ವಿವಿಧ ಸಂಘ ಸಂಸ್ಥೆಗಳು, ಭಕ್ತವೃಂದ ಹಾಗೂ ಜೆಎಸ್‌ಎಸ್ ಶಿಕ್ಷಣ ಸಂಸ್ಥೆಗಳ ವತಿಯಿಂದ ಆಯೋಜಿಸಿದ್ದ ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಮತ್ತು ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರವನ್ನು ಜಿಲ್ಲಾಧಿಕಾರಿ ಶಿಲ್ಪಾನಾಗ್ ಉದ್ಘಾಟಿಸಿದರು. ಜಿಲ್ಲಾಧಿಕಾರಿ ಸಿ.ಟಿ ಶಿಲ್ಪಾನಾಗ್ ಮಾತನಾಡಿ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹುದ್ದೂರು ಶಾಸ್ತ್ರಿ ಅವರು ಗುಣ ಆದರ್ಶಗಳನ್ನು ಎಲ್ಲರೂ ಅನುಸರಿಸುವಂತದಾಗಿದೆ. ಗಾಂಧೀಜಿ ದೇಶದ ಸ್ವಾತಂತ್ರಕ್ಕಾಗಿ ಮಾತ್ರ ಹೋರಾಟ ಮಾಡದೇ ದೇಶದಲ್ಲಿದ್ದ ಬಡತನ ವಿರುದ್ದವು ಹೋರಾಟ ಮಾಡಿದವರು. ಅವರ ತತ್ವ, ಆದರ್ಶಗಳು ಪ್ರತಿಯೊ ಬ್ಬರಿಗೂ ದಾರಿದೀಪ ಎಂದರು. ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಹಸಿರು ಕ್ರಾಂತಿಯನ್ನು ಮಾಡುವ ಮೂಲಕ ದೇಶದ ಆಹಾರ ಭದ್ರತೆಗೆ ಒತ್ತನ್ನು ನೀಡಿದರು. ಮಾದರಿ ಆಡಳಿತವನ್ನು ನೀಡಿದವರು ಅವರಂತವರ ಆಲೋಚನೆಯನ್ನು ಎಲ್ಲರೂ ಬೆಳೆಸಿಕೊಳ್ಳಬೇಕಿದೆ ಎಂದು ಸಲಹೆ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮನಿ ಸಾಹು, ಜಿಪಂ ಸಿಇಓ ಆನಂದ್, ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ. ಜೆ. ಉದೇಶ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚಿದಂಬರಂ, ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಡಾ.ಮಹೇಶ್, ರಾಜ್ಯ ಸಮಿತಿ ಸದಸ್ಯ ಡಾ. ಸಿ.ಎನ್.ರೇಣುಕಾದೇವಿ, ಜೆಎಸ್‌ಎಸ್ ಆಸ್ಪತ್ರೆಯ ಅಧೀಕ್ಷಕ ಡಾ. ಗೋವಿಂದಶೆಟ್ಟಿ, ಸಿಮ್ಸ್ ರಕ್ತನಿಧಿ ಅಧಿಕಾರಿ ಡಾ.ದಿವ್ಯಾ, ಮೈಸೂರು ಜೆಎಸ್‌ಎಸ್ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಬಸವಣ್ಣ ಗೌಡಪ್ಪ ಇದ್ದರು. ಚಾಮರಾಜನಗರದ ಜೆಎಸ್‌ಎಸ್ ಮಹಿಳಾ ಕಾಲೇಜಿನಲ್ಲಿ ಜೆಎಸ್‌ಎಸ್ ಶಿಕ್ಷಣ ಸಂಸ್ಥೆಗಳ ವತಿಯಿಂದ ಆಯೋಜಿಸಿದ್ದ ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಮತ್ತು ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರದಲ್ಲಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮನಿ ಸಾಹು ರಕ್ತದಾನ ಮಾಡಿದರು.