.ಸರ್ಕಾರಿ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

| Published : Apr 01 2024, 12:47 AM IST

ಸಾರಾಂಶ

ಖಾನಾಪುರ: ತಾಲೂಕಿನ ಅಶೋಕನಗರ ಗ್ರಾಮದ ಪಿಎಂಶ್ರೀ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಶೋಕನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಮರಾಠಾ ಮಂಡಳ ಪದವಿ ಕಾಲೇಜು, ಹಳೆ ವಿದ್ಯಾರ್ಥಿ ಸಂಘ ಮತ್ತು ವಾಣಿಜ್ಯ ಶಿಕ್ಷಕರ ಹಾಗೂ ಪದವೀಧರ ಸಂಘಳ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಶಿಬಿರ ಜರುಗಿತು.

ಕನ್ನಡಪ್ರಭ ವಾರ್ತೆ ಖಾನಾಪುರ

ತಾಲೂಕಿನ ಅಶೋಕನಗರ ಗ್ರಾಮದ ಪಿಎಂಶ್ರೀ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಶೋಕನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಮರಾಠಾ ಮಂಡಳ ಪದವಿ ಕಾಲೇಜು, ಹಳೆ ವಿದ್ಯಾರ್ಥಿ ಸಂಘ ಮತ್ತು ವಾಣಿಜ್ಯ ಶಿಕ್ಷಕರ ಹಾಗೂ ಪದವೀಧರ ಸಂಘಳ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಶಿಬಿರ ಜರುಗಿತು.ನುರಿತ ವೈದ್ಯರ ತಂಡದ ನೇತೃತ್ವದಲ್ಲಿ ನಡೆದ ಆರೋಗ್ಯ ಶಿಬಿರವನ್ನು ದಂತ ವೈದ್ಯ ಡಾ.ರಾಧಾಕೃಷ್ಣ ಹೇರವಾಡಕರ ಸಸಿಗೆ ನಿರುಣಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿ ಹಲ್ಲುಗಳ ಮಹತ್ವ ಹಾಗೂ ಅವುಗಳ ಕಾಳಜಿ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಶಿಬಿರದಲ್ಲಿ ಡಾ.ಶ್ರೀಮತಿ ಪಾರಿಶ್ವಾಡ, ಡಾ.ಶಿವಾನಂದ ಕಿಣಗಿ, ಡಾ.ಶಾಲಿನಿ, ಡಾ.ರವಿರಾಜ್ ಪೈ, ಡಾ.ನಾಗರತ್ನ, ಡಾ ನೂತನ್, ಡಾ.ಇಮ್ರಾನ್, ಡಾ.ಅಕ್ಷತಾ ನೇತೃತ್ವದ ವೈದ್ಯಕೀಯ ತಂಡ ವಿದ್ಯಾರ್ಥಿಗಳ ಅರೋಗ್ಯ ತಪಾಸಣೆ ಮಾಡಿ ಆರೋಗ್ಯ ಸಮಸ್ಯೆ ಇರುವ ಮಕ್ಕಳಿಗೆ ಸಲಹೆ, ಸೂಚನೆ ಹಾಗೂ ಉಚಿತ ಔಷಧೋಪಚಾರ ನೀಡಿದರು.ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರು, ಸಿಬ್ಬಂದಿ, ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು, ಪಾಲಕರು, ವಿದ್ಯಾರ್ಥಿಗಳು, ವೈದ್ಯಕೀಯ ಸಿಬ್ಬಂದಿ, ಮರಾಠಾ ಮಂಡಳ ಕಾಲೇಜಿನ ಸಿಬ್ಬಂದಿ ಉಪಸ್ಥಿತರಿದ್ದರು.ಶಾಲೆಯ ಮುಖ್ಯ ಶಿಕ್ಷಕ ಐ.ಬಿ ವಸ್ತ್ರದ ಪ್ರಾಸ್ತವಿಕವಾಗಿ ಮಾತನಾಡಿದರು. ಮರಾಠಾ ಮಂಡಳ ಪದವಿ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ರೀ ವಸಂತ ದೇಸಾಯಿ ಸ್ವಾಗತಿಸಿದರು. ವಾಣಿಜ್ಯ ಶಿಕ್ಷಕರ ಹಾಗೂ ಪದವೀಧರ ವೇದಿಕೆಯ ಸಂಸ್ಥಾಪಕ ಎಸ್.ಜಿ ಸೊನ್ನದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಐ.ಟಿ ಬಡಿಗೇರ ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕ ಜಿ.ಎಸ್ ಕಂಬಳಿಮಠ ವಂದಿಸಿದರು..