ರೆಡ್ ಕ್ರಾಸ್ ಸಂಸ್ಥೆಯಿಂದ ಆರೋಗ್ಯ ಉಚಿತ ತಪಾಸಣೆ, ಬೃಹತ್ ರಕ್ತದಾನ ಶಿಬಿರ

| Published : Feb 06 2025, 12:19 AM IST

ರೆಡ್ ಕ್ರಾಸ್ ಸಂಸ್ಥೆಯಿಂದ ಆರೋಗ್ಯ ಉಚಿತ ತಪಾಸಣೆ, ಬೃಹತ್ ರಕ್ತದಾನ ಶಿಬಿರ
Share this Article
  • FB
  • TW
  • Linkdin
  • Email

ಸಾರಾಂಶ

ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಯ ನಿರ್ದೇಶಕ ಎಚ್. ಡಿ. ಕುಮಾರ್ ಸಾರ್ವಜನಿಕರಿಗೆ ಸಂಸ್ಥೆಯ ಹಾಗೂ ಸಂಸ್ಥೆ ಮಾಡುತ್ತಿರುವ ಉನ್ನತ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಚನ್ನರಾಯಪಟ್ಟಣ: ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ತಾಲೂಕು ಘಟಕ, ರೋಟರಿ ಕ್ಲಬ್ ಚನ್ನರಾಯಪಟ್ಟಣ ಇವರ ವತಿಯಿಂದ ದಿಡಗ ಗ್ರಾಮ ಪಂಚಾಯತಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದೊಂದಿಗೆ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು.

ಶಿಬಿರವನ್ನು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ತಾಲೂಕು ಘಟಕ ಚೇರ್ಮನ್ ಎಚ್. ಜಿ. ಭರತ್ ಮತ್ತು ರೋಟರಿ ಕ್ಲಬ್ ನ ಅಧ್ಯಕ್ಷ ಬಿ. ವಿ. ವಿಜಯ್ ರವರು ಉದ್ಘಾಟಿಸಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಭರತ್ , ಸಾರ್ವಜನಿಕರಿಗೆ ಕ್ಯಾನ್ಸರ್ ಕಾಯಿಲೆಯ ಗುಣಲಕ್ಷಣಗಳು ಹಾಗೂ ಕಾಯಿಲೆಯನ್ನು ತಡೆಗಟ್ಟಲು ಪಾಲಿಸಬೇಕಾದ ಕ್ರಮಬದ್ಧತೆ ಮತ್ತು ಚಿಕಿತ್ಸೆ ಬಗ್ಗೆ ಹಾಗೂ ರೆಡ್ ಕ್ರಾಸ್ ಸಂಸ್ಥೆಯು ನಡೆಸುತ್ತಿರುವ ಸಾಮಾಜಿಕ ಕಾರ್ಯಕ್ರಮದ ಸೇವೆ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿದರು.

ಗ್ರಾಮ ಪಂಚಾಯಿತಿ ಪಿಡಿಒ ಪ್ರಕಾಶ್ ಮಾತನಾಡಿ, ಸಾರ್ವಜನಿಕರು ಇಂಥ ಕಾರ್ಯಕ್ರಮಗಳಲ್ಲಿ ಹೆಚ್ಚಿನ ರೀತಿ ಭಾಗವಹಿಸಿ ಆರೋಗ್ಯ ಉಚಿತ ಶಿಬಿರದ ಅನುಕೂಲಗಳನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು.

ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಯ ನಿರ್ದೇಶಕ ಎಚ್. ಡಿ. ಕುಮಾರ್ ಸಾರ್ವಜನಿಕರಿಗೆ ಸಂಸ್ಥೆಯ ಹಾಗೂ ಸಂಸ್ಥೆ ಮಾಡುತ್ತಿರುವ ಉನ್ನತ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಹಾಸನ ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆ ನಿರ್ದೇಶಕ ಎಚ್. ಡಿ. ಕುಮಾರ್ ಹಾಗೂ ಗಿರೀಶ್, ಭಾರತಿ ರೆಕಾರ್ಡ್ ಸಂಸ್ಥೆ ಕಾರ್ಯದರ್ಶಿ ಜಬಿಉಲ್ಲಾ ಬೇಗ್, ನಿರ್ದೇಶಕ ಉದಯ್, ಡಾ. ಗುಲ್ಜಾರ್ ಹಾಗೂ ಗಣ್ಯರು ಪಾಲ್ಗೊಂಡಿದ್ದರು.

ಶಿಬಿರದಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ಕಣ್ಣಿನ ತಪಾಸಣೆ, ಹೃದಯ ತಪಾಸಣೆ, ಕ್ಯಾನ್ಸರ್ ತಪಾಸಣೆ ಹಾಗೂ ಸ್ತನ ಕ್ಯಾನ್ಸರ್ ತಪಾಸಣೆ ನಡೆಸಲಾಯಿತು. ೨೩೨ ಸಾರ್ವಜನಿಕರಿಗೆ ಕಣ್ಣಿನ ಪರೀಕ್ಷೆ ಮಾಡಲಾಯಿತು. ೨೩ ಜನರಿಗೆ ಕಣ್ಣಿನ ಶಸ್ತ್ರ ಚಿಕಿತ್ಸೆಗೆ ಸೂಚಿಸಲಾಯಿತು. ಸುಮಾರು ೨೪೭ ಸಾರ್ವಜನಿಕರಿಗೆ ಹೃದಯ ಹಾಗೂ ಕ್ಯಾನ್ಸರ್ ತಪಾಸಣೆ ನಡೆಸಲಾಯಿತು.