ಮಂಡ್ಯ ಕ್ಷೇತ್ರದ ಶಾಸಕರಾಗಿ ಪಿ.ರವಿಕುಮಾರ್ ರಾಜ್ಯದಲ್ಲಿ ಅತ್ಯುತ್ತಮ ಮಾದರಿ ಕ್ಷೇತ್ರವನ್ನಾಗಿ ಮಾಡಲು ಶ್ರಮಿಸುತ್ತಿದ್ದಾರೆ. ಕ್ಷೇತ್ರದಲ್ಲಿ ಕೋಟ್ಯಂತರ ರು. ವೆಚ್ಚದಲ್ಲಿ ಅಭಿವೃದ್ಧಿ ಕೆಲಸಗಳಾಗುತ್ತಿದೆ. ಪ್ರಗತಿಯತ್ತ ಮುನ್ನಡೆಯುತ್ತಿರುವುದು ಹೆಮ್ಮೆಯ ವಿಚಾರ.

ಕನ್ನಡಪ್ರಭ ವಾರ್ತೆ ಮಂಡ್ಯ

ತಾಲೂಕಿನ ಸಾತನೂರು ಗ್ರಾಮದಲ್ಲಿ ಮಂಡ್ಯ ಶಾಸಕ ಪಿ.ರವಿಕುಮಾರ್ ಅವರ ಹುಟ್ಟುಹಬ್ಬದ ಅಂಗವಾಗಿ ಉಚಿತ ಲ್ಯಾಪ್‌ಟ್ಯಾಪ್ ಮತ್ತು ನೋಟ್ ಬುಕ್ ವಿತರಣಾ ಕಾರ್ಯಕ್ರಮ ನಡೆಯಿತು.

ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸರ್ಕಾರಿ ಶಾಲೆಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗೆ ಲಾಪ್‌ಟಾಪ್ ಮತ್ತು ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ನೋಟ್ ಬುಕ್‌ಗಳನ್ನು ಗ್ರಾಮ ಪಂಚಾಯಿತಿ ಸದಸ್ಯ ವೆಂಕಟೇಶ್ವರ ಅವರು ಗ್ರಾಮದ ಮುಖಂಡರೊಂದಿಗೆ ವಿತರಣೆ ಮಾಡಿದರು.

ನಂತರ ಮಾತನಾಡಿದ ವೆಂಕಟೇಶ್, ಮಂಡ್ಯ ಕ್ಷೇತ್ರದ ಶಾಸಕರಾಗಿ ಪಿ.ರವಿಕುಮಾರ್ ರಾಜ್ಯದಲ್ಲಿ ಅತ್ಯುತ್ತಮ ಮಾದರಿ ಕ್ಷೇತ್ರವನ್ನಾಗಿ ಮಾಡಲು ಶ್ರಮಿಸುತ್ತಿದ್ದಾರೆ. ಕ್ಷೇತ್ರದಲ್ಲಿ ಕೋಟ್ಯಂತರ ರು. ವೆಚ್ಚದಲ್ಲಿ ಅಭಿವೃದ್ಧಿ ಕೆಲಸಗಳಾಗುತ್ತಿದೆ. ಪ್ರಗತಿಯತ್ತ ಮುನ್ನಡೆಯುತ್ತಿರುವುದು ಹೆಮ್ಮೆಯ ವಿಚಾರ ಎಂದರು.

ರವಿಕುಮಾರ್ ಹುಟ್ಟುಹಬ್ಬಕ್ಕೆ ಪ್ರತಿಭಾವಂತ ವಿದ್ಯಾರ್ಥಿಗೆ ಲ್ಯಾಪ್‌ಟಾಪ್, ಶಾಲೆಯ ವಿದ್ಯಾರ್ಥಿಗಳಿಗೆ ನೋಟ್ ಬುಕ್‌ಗಳನ್ನು ವಿತರಣೆ ಮಾಡುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಗಿದೆ ಎಂದರು.

ಗ್ರಾಮ ಪಂಚಾಯ್ತಿ ಅಧ್ಯಕ್ಷ ಮನು, ಮುಖಂಡರಾದ ಮಧುಸೂದನ್, ಗ್ರಾಪಂ ಸದಸ್ಯ ಸುರೇಶ್, ಕುರುಬರ ಸಂಘದ ಶ್ರೀನಿವಾಸ್, ಮಹೇಶ್, ರಾಜಣ್ಣ, ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಮಮತಾ, ಕೋನಪ್ಪ ಯೋಗೇಶ್, ಸಾತನೂರು ಗ್ರಾಮದ ಯಜಮಾನರು ಮುಖಂಡರು ಹಾಜರಿದ್ದರು.ವಾಹನ ಚಾಲಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

ಕನ್ನಡಪ್ರಭ ವಾರ್ತೆ ಮಂಡ್ಯ

ಜಿಲ್ಲಾ ಸರ್ಕಾರಿ ವಾಹನ ಚಾಲಕರ ಸಂಘದಿಂದ 2026ನೇ ವರ್ಷದ ನೂತನ ಕ್ಯಾಲೆಂಡರ್ ಬಿಡುಗಡೆ ಸಮಾರಂಭ ಹಾಗೂ ಚಾಲಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ನಗರದ ತಾಲೂಕು ಪಂಚಾಯ್ತಿ ಕಚೇರಿ ಆವರಣದಲ್ಲಿ ಜರುಗಿತು.

ಕಾರ್ಯಕ್ರಮವನ್ನು ಬೆಂಗಳೂರು ಸರ್ಕಾರಿ ವಾಹನ ಚಾಲಕರ ಕೇಂದ್ರ ಸಂಘದ ರಾಜ್ಯಾಧ್ಯಕ್ಷ ಎನ್.ಶ್ರೀನಿವಾಸ್‌ ಉದ್ಘಾಟಿಸಿದರು. ನಿವೃತ್ತ ವಾಹನ ಚಾಲಕರನ್ನು ಸನ್ಮಾನಿಸಲಾಯಿತು. ವಾಹನ ಚಾಲಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಸರ್ಕಾರಿ ವಾಹನ ಚಾಲಕರ ಸಂಘದ ಅಧ್ಯಕ್ಷ ಚೆಲುವರಾಜು ಹಾಗೂ ಟಿ.ರಾಜು, ಬೆಂಗಳೂರು ಶಾಖೆ ಗೌರವಾಧ್ಯಕ್ಷ ಜಿ.ಹಾಲೇಶ್, ಕಾರ್ಯಾಧ್ಯಕ್ಷ ವಿ.ನಾಗರಾಜು, ಮಾಜಿ ಕಾರ್ಯಾಧ್ಯಕ್ಷ ತಿಮ್ಮರಾಜು, ಮಾಜಿ ಪ್ರಧಾನ ಕಾರ್ಯದರ್ಶಿ ಕೆ.ಎಸ್.ವಿಜಯ್‌ಕುಮಾರ್ ಉಪಸ್ಥಿತರಿದ್ದರು.