ಸಾರಾಂಶ
ಹೊಳಲ್ಕೆರೆ ತಾಲೂಕಿನ ಅಂದನೂರಿನಲ್ಲಿ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಸಸಿಗೆ ನೀರೆರೆಯುವ ಮೂಲಕ ಆರ್.ಹನುಮಂತಪ್ಪ ಉದ್ಘಾಟಿಸಿದರು.
ಕನ್ನಡಪ್ರಭ ವಾರ್ತೆ ಹೊಳಲ್ಕೆರೆ
ಸಾರ್ವಜನಿಕ ಗ್ರಂಥಾಲಯ ಅರಿವು ಕೇಂದ್ರ, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ, ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಇವರ ಆಶ್ರಯದಲ್ಲಿ ಮಹಿಳೆಯರ ಹಕ್ಕುಗಳ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮ ಸಾರ್ವಜನಿಕ ಗ್ರಂಥಾಲಯ ಅರಿವು ಕೇಂದ್ರ, ಅಂದನೂರಿನಲ್ಲಿ ನೆರವೇರಿತು.ಸಸಿಗೆ ನೀರು ಎರೆಯುವುದರ ಮೂಲಕ ಕಾರ್ಯಕ್ರಮದ ಉದ್ಘಾಟಿಸಿ ಮಾತನಾಡಿದ ವಕೀಲ ಆರ್.ಹನುಮಂತಪ್ಪ, ಪರಿಶಿಷ್ಟ ಜಾತಿ ಮತ್ತು ಪರಿಷ್ಟ ಪಂಗಡಕ್ಕೆ ಸೇರಿದವರು, ಮಹಿಳೆ ಮತ್ತು ಮಕ್ಕಳಿಗೆ, ಕಾರ್ಮಿಕರಿಗೆ, ಜೀತಕ್ಕೆ ಒಳಗಾದವರಿಗೆ, ವಾರ್ಷಿಕ 3 ಲಕ್ಷ ರು. ಗಳಿಗಿಂತ ಕಡಿಮೆ ಇರುವ ಎಲ್ಲಾ ವರ್ಗದ ಜಾತಿಯ ಜನರಿಗೆ ಉಚಿತ ಕಾನೂನು ಸಲಹೆ ಮತ್ತು ನೆರವು ನೀಡಲಾಗುವುದು ಎಂದರು. ಮಹಿಳೆಯರು ಅಬಲೆಯರಲ್ಲ ಸಬಲೆಯರು ಎಂದ ಅವರು ಕಾನೂನು ಸೇವೆಗಳ ಪ್ರಾಧಿಕಾರದ ದ್ಯೇಯೋದ್ದೇಶ ಮತ್ತು ಮಹಿಳಾ ಸಬಲೀಕರಣದ ಕುರಿತು ಉಪನ್ಯಾಸ ನೀಡಿದರು.ಪುಣ್ಯಕೋಟಿ ಜ್ಞಾನ ವಿಕಾಸ ಕೇಂದ್ರದ ಅಧ್ಯಕ್ಷೆ ಶ್ರೀದೇವಿ ಅಧ್ಯಕ್ಷತೆ ವಹಿಸಿದ್ದರು. ಗ್ರಂಥಪಾಲಕರಾದ ರೇಖಾ ಎಚ್.ಆರ್.ಧರ್ಮಸ್ಥಳ ಜ್ಞಾನ ವಿಕಾಸ ಕೇಂದ್ರದ ಸಮನ್ವಯಾಧಿಕಾರಿಗಳಾದ ರಂಜಿತಾ, ಸೇವಾ ಪ್ರತಿನಿಧಿಗಳಾದ ಶಾರದಾ, ದೀಪಾ, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಥರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಸದಸ್ಯರು ಉಪಸ್ಥಿತರಿದ್ದರು.
;Resize=(128,128))
;Resize=(128,128))
;Resize=(128,128))