ಕಾರ್ಕಳ ಶ್ರೀಮದ್ ಭುವನೇಂದ್ರ ಪ್ರೌಢಶಾಲೆಯಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ಕಾರ್ಕಳ ನ್ಯಾಯವಾದಿಗಳ ಸಂಘ ಕಾರ್ಕಳ ಹಾಗೂ ಶ್ರೀಮದ್ ಭುವನೇಂದ್ರ ಪ್ರೌಢ ಶಾಲೆ ಕಾರ್ಕಳ ಸಂಯುಕ್ತ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ಅಂಗವಾಗಿ ಉಚಿತ ಕಾನೂನು ಅರಿವು ಮಾಹಿತಿ ಕಾರ್ಯಕ್ರಮ ನಡೆಯಿತು.
ಕಾರ್ಕಳ: ಕಾರ್ಕಳ ಶ್ರೀಮದ್ ಭುವನೇಂದ್ರ ಪ್ರೌಢಶಾಲೆಯಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ಕಾರ್ಕಳ ನ್ಯಾಯವಾದಿಗಳ ಸಂಘ ಕಾರ್ಕಳ ಹಾಗೂ ಶ್ರೀಮದ್ ಭುವನೇಂದ್ರ ಪ್ರೌಢ ಶಾಲೆ ಕಾರ್ಕಳ ಸಂಯುಕ್ತ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ಅಂಗವಾಗಿ ಉಚಿತ ಕಾನೂನು ಅರಿವು ಮಾಹಿತಿ ಕಾರ್ಯಕ್ರಮ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ವಿದ್ಯಾಸಂಸ್ಥೆಯ ಮುಖ್ಯ ಶಿಕ್ಷಕ ಆರ್ ನಾರಾಯಣ ಶೆಣೈ ವಹಿಸಿದ್ದರು.
ಕಾರ್ಕಳದ ಹಿರಿಯ ಸಿವಿಲ್ ಜಡ್ಜ್ ಮತ್ತು ಎ ಸಿ ಜೆ ಎಂ ನ್ಯಾಯಾಧೀಶ ಪ್ರವೀಣ್ ನಾಯಕ್ ಉದ್ಘಾಟಿಸಿದರು. ಬಳಿಕ ಅಂತಾರಾಷ್ಟ್ರೀಯ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ಮಹತ್ವದ ಕುರಿತು ನ್ಯಾಯವಾದಿಗಳಾದ ಎಂ ಶ್ವೇತಾ ವಿಪುಲ ತೇಜ್ ಕಾರ್ಕಳ ಮಾತನಾಡಿದರು. ಮುಖ್ಯ ಅತಿಥಿಗಳಾದ ನಿತ್ಯಾ. ಎನ್. ಗುಜ್ಜಾರ್ ಹೆಚ್ಚುವರಿ 1 ನೇ ಸಿವಿಲ್ ಜಡ್ಜ್ ಮತ್ತು ಎಸಿಜೆಎಂ ನ್ಯಾಯಾಧೀಶ ಹಾಗೂ ನ್ಯಾಯವಾದಿ ಪದ್ಮಪ್ರಸಾದ್ ಜೈನ್ ಮಾತನಾಡಿದರು. ಜ್ಯೋತಿ, ಶಿಕ್ಷಕ ಗಣೇಶ ಜಾಲ್ಸೂರು ನಿರೂಪಿಸಿದರು. ಹಿಂದಿ ಭಾಷಾ ಶಿಕ್ಷಕಿ ಚೇತನಾ ನಾಯಕ್ ಸ್ವಾಗತಿಸಿದರು. ವಿಜ್ಞಾನ ಶಿಕ್ಷಕಿ ನಯನಾ ಶೆಣೈ ವಂದಿಸಿದರು. ವಿದ್ಯಾರ್ಥಿಗಳಾದ ಆರುಕ್ಷಿತಾ, ಧಾರಿಣಿ ಉಪಾಧ್ಯ ಸಾನ್ವಿ ಸಿ, ಹರ್ಷಿಣಿ, ಸಾನ್ವಿ ಎಲ್, ಶಮಂತ್ ಸಹಕರಿಸಿದರು.