ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಣೆ

| Published : Jul 01 2025, 12:47 AM IST

ಸಾರಾಂಶ

ಫೌಂಡೇಶನ್ ಸಂಸ್ಥಾಪಕ ಮಹಾಲಿಂಗೇಗೌಡರ ನೇತೃತ್ವದಲ್ಲಿ 15 ವರ್ಷಗಳಿಂದ ಸಮಾಜಮುಖಿ ಸೇವೆಯನ್ನು ಮಾಡುತ್ತಾ ಬಂದಿದೆ. ಅದರಂತೆ ಇಂದು ಬಸರಾಳು ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ನೋಟ್ ಬುಕ್ ಗಳನ್ನುವಿತರಿಸಲಾಗುತ್ತಿದೆ.

ಕನ್ನಡಪ್ರಭ ವಾರ್ತೆ ಮಂಡ್ಯ

ತಾಲೂಕಿನ ಬಸರಾಳು ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಶ್ರೀಮಹಾಲಿಂಗೇಗೌಡ ಮುದ್ದನಘಟ್ಟ ಫೌಂಡೇಶನ್‌ನಿಂದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಿಸಲಾಯಿತು.

ಕಾರ್ಯಕ್ರಮವನ್ನು ಫೌಂಡೇಶನ್ ಖಜಾಂಚಿ ಶಶಿಕುಮಾರ್ ಉದ್ಘಾಟಿಸಿ ಮಾತನಾಡಿ, ಫೌಂಡೇಶನ್ ಸಂಸ್ಥಾಪಕ ಮಹಾಲಿಂಗೇಗೌಡರ ನೇತೃತ್ವದಲ್ಲಿ 15 ವರ್ಷಗಳಿಂದ ಸಮಾಜಮುಖಿ ಸೇವೆಯನ್ನು ಮಾಡುತ್ತಾ ಬಂದಿದೆ. ಅದರಂತೆ ಇಂದು ಬಸರಾಳು ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ನೋಟ್ ಬುಕ್ ಗಳನ್ನುವಿತರಿಸಲಾಗುತ್ತಿದೆ ಎಂದರು.

ತಾಲೂಕಿನಾದ್ಯಂತ ಒಂದು ಲಕ್ಷ ನೋಟ್ ಬುಕ್ ಗಳನ್ನು ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ವಿತರಿಸಲು ಗುರಿ ಹೊಂದಲಾಗಿದೆ. ಮಕ್ಕಳು ಇದರ ಪ್ರಯೋಜನ ಪಡೆದು ಉತ್ತಮವಾಗಿ ಅಭ್ಯಾಸ ಮಾಡಿ ಉನ್ನತ ಮಟ್ಟಕ್ಕೆ ಏರಬೇಕು ಎಂದರು.

ಮಹಾಲಿಂಗೇಗೌಡ ಮುದ್ದನಘಟ್ಟ ಫೌಂಡೇಶನ್ ಹಲವು ಸಮಾಜ ಮುಖಿ ಕಾರ್ಯಕ್ರಮ ಮಾಡುತ್ತಿದೆ. ಎಲ್ಲರೂ ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದರು.

ಈ ವೇಳೆ ಫೌಂಡೇಶನ್ ಉಪಾಧ್ಯಕ್ಷ ರವಿಗೌಡ, ಮುದ್ದನಗಟ್ಟ ಸದಸ್ಯರಾದ ಕೃಷ್ಣೇಗೌಡ,ಜೆ ಮಹೇಶ್, ಶ್ರೀನಿವಾಸ, ಮಹೇಶ, ಮುಖ್ಯ ಶಿಕ್ಷಕ ಮೋಹನ್, ಪ್ರಾಂಶುಪಾಲರಾದ ಚಂದ್ರಶೇಖರ್ ಸೇರಿದಂತೆ ಹಲವರಿದ್ದರು.

ಇಂದು ಮಾಜಿ ಸ್ಪೀಕರ್ ದಿ.ಕೃಷ್ಣರ ಹುಟ್ಟುಹಬ್ಬ, ಸಾಧಕರಿಗೆ ಪುರಸ್ಕಾರ

ಕನ್ನಡ ಪ್ರಭ ವಾರ್ತೆ ಕೆ.ಆರ್.ಪೇಟೆ

ಮಾಜಿ ಸ್ಪೀಕರ್ ದಿ.ಕೃಷ್ಣರ 85ನೇ ಹುಟ್ಟುಹಬ್ಬದ ಅಂಗವಾಗಿ ಕೃಷ್ಣ ಪ್ರತಿಷ್ಠಾನದ ವತಿಯಿಂದ ಜುಲೈ 1 ರಂದು ಪಟ್ಟಣದ ಹೋಟೆಲ್ ರಾಮದಾಸ್‌ ಸುಲೋಚನಮ್ಮ ಸಭಾಂಗಣದಲ್ಲಿ ಸಾಧಕರಿಗೆ ಪುರಸ್ಕಾರ ಮತ್ತು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕೃಷ್ಣ ಪ್ರತಿಷ್ಠಾನದ ಅಧ್ಯಕ್ಷ ಗೂಡೇಹೊಸಹಳ್ಳಿ ಜವರಾಯಿಗೌಡ ತಿಳಿಸಿದರು.

ಪಟ್ಟಣದ ಬಿಜಿಎಸ್ ಕಟ್ಟಡದ ಕೃಷ್ಣ ಪ್ರತಿಷ್ಟಾನದ ಕಚೇರಿಯಲ್ಲಿ ಕಾರ್ಯಕ್ರಮದ ಆಹ್ವಾನ ಪತ್ರಿಕೆಗಳನ್ನು ಬಿಡುಗಡೆ ಮಾಡಿ ಮಾತನಾಡಿ, ಮಂಡ್ಯದ ಗಾಂಧಿ ಎಂದೇ ಹೆಸರಾಗಿದ್ದ ಮಾಜಿ ಸ್ಪೀಕರ್ ಕೃಷ್ಣ ಸಜ್ಜನ ರಾಜಕಾರಣದ ಪ್ರತಿರೂಪ. ಕೆ.ಆರ್.ಪೇಟೆ ಕ್ಷೇತ್ರದ ಶಾಸಕರಾಗಿ, ಸಚಿವರಾಗಿ, ವಿಧಾನ ಸಭೆ ಸ್ಪೀಕರ್ ಆಗಿದ್ದಾಗಲು ಅವರು ತಮ್ಮ ಸರಳತೆ, ಪ್ರಾಮಾಣಿಕತೆಗೆ ಹೆಸರಾಗಿ ಮುಂದಿನ ಪೀಳಿಗೆಗೆ ಆದರ್ಶವಾಗಿ ನಿಂತಿದ್ದಾರೆ ಎಂದರು.

ಅಂದು ಬೆಳಗ್ಗೆ 10.30ಕ್ಕೆ ಸಾಧಕರಿಗೆ ಪುರಸ್ಕಾರ ಮತ್ತು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಕಲ್ಬುರ್ಗಿ ಜಿಲ್ಲೆಯ ಅಳಂದ ಕ್ಷೇತ್ರದ ಶಾಸಕ ಹಾಗೂ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್.ಪಾಟೀಲ್ ಉದ್ಘಾಟಿಸಲಿದ್ದಾರೆ. ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸಾಧಕರಿಗೆ ಕೃಷ್ಣ ಪುರಸ್ಕಾರ ನೀಡಲಿದ್ದಾರೆ. ಶಾಸಕ ಹೆಚ್.ಟಿ.ಮಂಜು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಿದ್ದಾರೆ. ಪುರಸಭೆ ಅಧ್ಯಕ್ಷೆ ಪಂಕಜ ಪ್ರಕಾಶ್, ಮಾಜಿ ಸಚಿವ ಕೆ.ಸಿ.ನಾರಾಯಣಗೌಡ, ಮಾಜಿ ಶಾಸಕರಾದ ಕೆ.ಬಿ.ಚಂದ್ರಶೇಖರ್, ಬಿ.ಪ್ರಕಾಶ್, ಟಿಎಪಿಸಿಎಂಎಸ್ ಅಧ್ಯಕ್ಷ ಬಿ.ಎಲ್.ದೇವರಾಜು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಪ್ರತಿಷ್ಠಾನದ ಕಾರ್ಯದರ್ಶಿ ಕತ್ತರಘಟ್ಟ ವಾಸು, ಸದಸ್ಯರಾದ ಮಾಕವಳ್ಳಿ ವಸಂತಕುಮಾರ್, ಐಚನಹಳ್ಳಿ ಶಿವಣ್ಣ, ಆರ್.ಎಸ್.ಶಿವರಾಮೇಗೌಡ ಇದ್ದರು.