ಮಾರ್ಪಳ್ಳಿ ದೇವಾಲಯದಲ್ಲಿ ಉಚಿತ ಗಿಡ ವಿತರಣೆ

| Published : Jul 06 2025, 11:48 PM IST

ಸಾರಾಂಶ

ಮಾರ್ಪಳ್ಳಿಯ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಭಾನುವಾರ ಗ್ರಾಮಸ್ಥರಿಗೆ ವಿವಿಧ ತಳಿಗಳ ಗಿಡಗಳ ಉಚಿತ ವಿತರಣಾ ಕಾರ್ಯಕ್ರಮವನ್ನು ಉಮಾಮಹೇಶ್ವರ ಸಭಾಭವನದಲ್ಲಿ ಮಾಜಿ ಸಚಿವ ವಿನಯಕುಮಾರ್ ಸೊರಕೆ‌ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಉಡುಪಿಇಲ್ಲಿನ ಮಾರ್ಪಳ್ಳಿಯ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಭಾನುವಾರ ಗ್ರಾಮಸ್ಥರಿಗೆ ವಿವಿಧ ತಳಿಗಳ ಗಿಡಗಳ ಉಚಿತ ವಿತರಣಾ ಕಾರ್ಯಕ್ರಮವನ್ನು ಉಮಾಮಹೇಶ್ವರ ಸಭಾಭವನದಲ್ಲಿ ಮಾಜಿ ಸಚಿವ ವಿನಯಕುಮಾರ್ ಸೊರಕೆ‌ ಉದ್ಘಾಟಿಸಿದರು.ನಂತರ ಮಾತನಾಡಿದ ಅವರು ಇಂದು ಕಾಡು ನಾಡಾಗಿ ಪರಿವರ್ತನೆಯಾಗುತ್ತಿದೆ, ಪ್ರಕೃತಿ ಇದ್ದರೆ ಮನುಷ್ಯ ಜೀವಿಸಲು ಸಾಧ್ಯ, ಪ್ರತಿಯೊಂದು ಸಂದರ್ಭದಲ್ಲಿ ಪ್ರಕೃತಿ ನಮ್ಮ ಜೊತೆ ಇರುತ್ತದೆ, ನಾವು ಅದನ್ನು ರಕ್ಷಿಸುವ ಕೆಲಸ ಮಾಡಬೇಕು ಎಂದರು.ಸಮಾರಂಭದ ಅಧ್ಯಕ್ಷತೆಯನ್ನು ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಕಂಬಳ ಮನೆ ದಿನೇಶ್ ಶೆಟ್ಟಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಾಜಿ ಜಿಪಂ ಸದಸ್ಯೆ ಗೀತಾಂಜಲಿ ಸುವರ್ಣ ಕಟಪಾಡಿ, ಅಲೆವೂರು ಗ್ರಾಪಂ ಮಾಜಿ ಅಧ್ಯಕ್ಷ ಅಲೆವೂರು ಹರೀಶ್ ಕಿಣಿ, ಜಿಲ್ಲಾ ಕೃಷಿಕ‌ ಸಂಘದ ಅಧ್ಯಕ್ಷ ಬಂಟಕಲ್ಲು ರಾಮಕೃಷ್ಣ ಶರ್ಮ, ತ್ರಿಶಾ ಸಮೂಹ ಸಂಸ್ಥೆಯ ಮುಖ್ಯಸ್ಥ ಗೋಪಾಲಕೃಷ್ಣ ರಾವ್, ಸಾಮಾಜಿಕ ಅರಣ್ಯ ಇಲಾಖೆಯ ಅಧಿಕಾರಿ ಪ್ರತ್ಯಕ್ಷ ಕಾಮತ್, ಸ್ಥಳೀಯ ಗ್ರಾಪಂ ಸದಸ್ಯರಾದ ಸುಧಾಕರ್ ಪೂಜಾರಿ ಮತ್ತು ಶಂಕರ್ ಜಿ.ದೇವಾಡಿಗ ಮಾರ್ಪಳ್ಳಿ, ದೇವಳದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಶೇಖರ್ ಸುವರ್ಣ, ಪಾಂಡುರಂಗ ನಾಯ್ಕ್, ಉಮೇಶ್ ಮಾರ್ಪಳ್ಳಿ, ಶಂಕರ ಆಚಾರ್ಯ, ಚಂದ್ರಾವತಿ, ಅರ್ಚಕ ಅನಂತ ಉಪಾಧ್ಯ ಉಪಸ್ಥಿತರಿದ್ದರು. ಲಕ್ಷ್ಮೀನಾರಾಯಣ ರಾವ್ ಸ್ವಾಗತಿಸಿ, ವಿಜಯಲಕ್ಷ್ಮಿ ಎಂ ವಂದಿಸಿದರೆ, ವಿಷ್ಣುಮೂರ್ತಿ ಉಪಾಧ್ಯಾಯ ಕಾರ್ಯಕ್ರಮ ನಿರೂಪಿಸಿದರು.