ಮೋದಿ ಅಕ್ಷಯ ಪಾತ್ರೆಯಿಂದ ಜನತೆಗೆ ಉಚಿತ ಅಕ್ಕಿ, ಕಾಂಗ್ರೆಸಿನಿಂದ ಖಾಲಿ ಚೊಂಬು ಮಾತ್ರ: ಯಶ್ಪಾಲ್

| Published : Apr 23 2024, 12:53 AM IST

ಮೋದಿ ಅಕ್ಷಯ ಪಾತ್ರೆಯಿಂದ ಜನತೆಗೆ ಉಚಿತ ಅಕ್ಕಿ, ಕಾಂಗ್ರೆಸಿನಿಂದ ಖಾಲಿ ಚೊಂಬು ಮಾತ್ರ: ಯಶ್ಪಾಲ್
Share this Article
  • FB
  • TW
  • Linkdin
  • Email

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದ 6 ಕೋಟಿ ಜನತೆಗೆ ಒಂದು ಕಾಳು ಅಕ್ಕಿಯನ್ನೂ ನೀಡದೆ ಖಾಲಿ ಚೊಂಬು ನೀಡಿ ದ್ರೋಹವೆಸಗಿದೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಸೋಮವಾರ ಉಡುಪಿಯಲ್ಲಿ ಆರೋಪಿಸಿದ್ದಾರೆ.

ಕನ್ನಡಪ್ರಭ ವಾರ್ತೆ, ಉಡುಪಿ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಆಹಾರ ಭದ್ರತಾ ಕಾಯ್ದೆಯಡಿ ದೇಶದ 80 ಕೋಟಿ ಜನತೆಗೆ 5 ಕೆ.ಜಿ.ಯಂತೆ ಉಚಿತ ಅಕ್ಕಿಯನ್ನು ನೀಡುತ್ತಿದೆ. ಆದರೆ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ 10 ಕೆಜಿ ಉಚಿತ ''''''''''''''''ಅಕ್ಕಿ ಬೇಕೋ ಬೇಡ್ವೊ'''''''''''''''' ಎಂದು ಪುಂಗಿ ಊದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದ 6 ಕೋಟಿ ಜನತೆಗೆ ಒಂದು ಕಾಳು ಅಕ್ಕಿಯನ್ನೂ ನೀಡದೆ ಖಾಲಿ ಚೊಂಬು ನೀಡಿ ದ್ರೋಹವೆಸಗಿದೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಹೇಳಿದ್ದಾರೆ

ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಉಡುಪಿ ನಗರ ಚುನಾವಣಾ ನಿರ್ವಹಣಾ ಸಮಿತಿಯ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಚುನಾವಣಾ ಅಭಿಯಾನ ಪ್ರಮುಖ್ ಬೈಕಾಡಿ ಸುಪ್ರಸಾದ್ ಶೆಟ್ಟಿ, ಪ್ರಜಾಪ್ರಭುತ್ವದ ಆಶಯ ರಾಮ ರಾಜ್ಯ. ರಾಮ ರಾಜ್ಯ ಸಾಕಾರಗೊಳ್ಳಬೇಕಾದರೆ ಧರ್ಮಾಧಾರಿತ, ಸಾಂಸ್ಕೃತಿಕ, ವಿಕಸಿತ ಭಾರತ ನಿರ್ಮಾಣಗೊಳ್ಳಬೇಕು. ಅದಕ್ಕಾಗಿ ಈ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಚುನಾವಣಾ ಸಂಚಾಲಕ ಕುತ್ಯಾರು ನವೀನ್ ಶೆಟ್ಟಿ ಮಾತನಾಡಿ ಮನೆಮನೆ ಪ್ರಚಾರದೊಂದಿಗೆ ಪ್ರತೀ ಬೂತ್ ಗಳಲ್ಲಿ ಸಂಘಟಿತ ಪ್ರಯತ್ನದಿಂದ ಕೋಟ ಶ್ರೀನಿವಾಸ ಪೂಜಾರಿಯವರನ್ನು ದೊಡ್ಡ ಅಂತರದಂದ ಗೆಲ್ಲಿಸಲು ಬದ್ಧತೆಯಿಂದ ಶ್ರಮಿಸಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕಿರಣ್ ಕುಮಾರ್ ಬೈಲೂರು, ಮಾಜಿ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಉಡುಪಿ ವಿಧಾನಸಭಾ ಕ್ಷೇತ್ರ ಚುನಾವಣಾ ಸಂಚಾಲಕ ಗಿರೀಶ್ ಎಂ. ಅಂಚನ್, ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್, ಪ್ರಧಾನ ಕಾರ್ಯದರ್ಶಿಗಳಾದ ಜಗದೀಶ್ ಆಚಾರ್ಯ ಕಪ್ಪೆಟ್ಟು, ರಶ್ಮಿತಾ ಬಿ. ಶೆಟ್ಟಿ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಉಪಸ್ಥಿತರಿದ್ದರು.