ಸಾರಾಂಶ
ಕನ್ನಡಪ್ರಭ ವಾರ್ತೆ ಮಂಡ್ಯ
ನಾಗಮಂಗಲ ತಾಲೂಕು ಬಿ.ಜಿ.ನಗರದ ಆದಿಚುಂಚನಗಿರಿ ಆಸ್ಪತ್ರೆಯಿಂದ ಡಿ.1 ರಿಂದ 13ರವರೆಗೆ ಸೀಳು ತುಟಿ, ಸೀಳು ಅಂಗುಳ ಮತ್ತು ಸುಟ್ಟಗಾಯಗಳಿಂದ ಉಂಟಾದ ವಿರೂಪಗಳ ಉಚಿತ ಶಸ್ತ್ರ ಚಿಕಿತ್ಸಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಆಸ್ಪತ್ರೆಯ ಮುಖ್ಯಸ್ಥ ಕೆ.ಎಂ.ಶಿವಕುಮಾರ್ ತಿಳಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಬಿರವನ್ನು ಅಮೆರಿಕಾದ ರೂಟಾಪ್ಲಾಸ್ಟ್ ಇಂಟರ್ ನ್ಯಾಷನಲ್ ಸಂಸ್ಥೆ, ರೋಟರಿ ಸಂಸ್ಥೆ ಸಹಯೋಗದೊಂದಿಗೆ ಬಿ.ಜಿ.ನಗರದ ಆಸ್ಪತ್ರೆಯಲ್ಲಿ ನಡೆಸಲಾಗುತ್ತಿದೆ. 2ರಿಂದ 18 ವರ್ಷದ ಮಕ್ಕಳು ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳಬಹುದಾಗಿದೆ ಎಂದರು.
ಅಮೆರಿಕಾದ ರೂಟಾಪ್ಲಾಸ್ಟ್ ಇಂಟರ್ ನ್ಯಾಷನಲ್ ಸಂಸ್ಥೆಯ ನುರಿತ 30 ತಜ್ಞ ವೈದ್ಯರ ತಂಡದಿಂದ ಶಸ್ತ್ರ ಚಿಕಿತ್ಸೆ ನಡೆಸಲಾಗುತ್ತಿದೆ. ಶಿಬಿರದಲ್ಲಿ ಭಾಗವಹಿಸುವ ಶಿಬಿರಾರ್ಥಿಗಳಿಗೆ ಉಚಿತ ಶಸ್ತ್ರ ಚಿಕಿತ್ಸೆ, ಔಷಧೋಪಚಾರ, ವಾರ್ಡ್ ಸೌಲಭ್ಯ, ಶಿಬಿರಾರ್ಥಿಗಳ ಸಹಾಯಕರಿಗೆ ವಸತಿ ಮತ್ತು ಊಟದ ವ್ಯವಸ್ಥೆಯನ್ನು ಉಚಿತವಾಗಿ ಕಲ್ಪಿಸಲಾಗುತ್ತದೆ ಎಂದರು.ಈಗಾಗಲೇ ಪೂರ್ವ ನೋಂದಣಿ ಪ್ರಕ್ರಿಯೆ ನಡೆಯುತ್ತಿದೆ. ಆಸಕ್ತರು ಮೊ-9945558579, ಮೊ-9900758946, ಮೊ-7975012982, ದೂ.08234-287575, ಮೊ- 08234-287011 ಸಂಖ್ಯೆಗೆ ಕರೆ ಮಾಡಿ ಮಾಹಿತಿ ಹಾಗೂ ನೋಂದಣಿ ಮಾಡಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.
ಸಿದ್ದಪ್ಪಾಜಿ ಕಂಡಾಯ ಮೆರವಣಿಗೆಮಳವಳ್ಳಿ: ಕಡೇ ಕಾರ್ತಿಕ ಮಾಸದ ಅಂಗವಾಗಿ ತಾಲೂಕಿನ ಶೆಟ್ಟಹಳ್ಳಿಯಲ್ಲಿ ಸಿದ್ದಪ್ಪಾಜಿ ಕಂಡಾಯ ಮೆರವಣಿಗೆ ಹಾಗೂ ಹುಲಿವಾಹನ ಉತ್ಸವವು ಭಕ್ತಿ ಪ್ರಧಾನವಾಗಿ ಜರುಗಿತು.ಗ್ರಾಮದ ಸಿದ್ದಪ್ಪಾಜಿ ದೇವಸ್ಥಾನದ ಆವರಣದಲ್ಲಿ ಹೂವು ಹೊಂಬಾಳೆಯೊಂದಿಗೆ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದ ನಂತರ ಮಹದೇಶ್ವರ ಗುಡ್ಡಪ್ಪಂದಿರು, ದಾಸರು, ಜೋಗಿಗಳು ದೇವರನ್ನು ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು. ಮನೆ ಎದುರು ಬಂದ ದೇವರುಗಳಿಗೆ ಮಹಿಳೆಯರು ಪೂಜೆ ಸಲ್ಲಿಸಿ ಧನ್ಯತೆ ಮೆರೆದರು.
;Resize=(128,128))
;Resize=(128,128))
;Resize=(128,128))
;Resize=(128,128))