ಹಾನಗಲ್ಲು ಶೆಟ್ಟಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ದಾನಿಗಳಾದ ಪದ್ಮನಾಭ ಅವರು ಉಚಿತವಾಗಿ ಟ್ರ್ಯಾಕ್ ಸೂಟ್ ವಿತರಿಸಿದರು.

ಕನ್ನಡಪ್ರಭವಾರ್ತೆ ಸೋಮವಾರಪೇಟೆ

ಹಾನಗಲ್ಲು ಶೆಟ್ಟಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ದಾನಿಗಳಾದ ಪದ್ಮನಾಭ ಅವರು ಉಚಿತವಾಗಿ ಟ್ರ್ಯಾಕ್ ಸೂಟ್ ವಿತರಿಸಿದರು.ಶಾಲಾ ಸಭಾಂಗಣದಲ್ಲಿ ಸೋಮವಾರ ನಡೆದ ಮಕ್ಕಳ ಗ್ರಾಮಸಭೆಯಲ್ಲಿ ವಿತರಿಸಿದ ಅವರು ಮಾತನಾಡಿ, ಸರ್ಕಾರಿ ಶಾಲೆಗಳೇ ಗ್ರಾಮೀಣ ಮಕ್ಕಳ ಭವಿಷ್ಯ ರೂಪಿಸುವ ಕೇಂದ್ರಗಳಾಗಿವೆ. ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಮಾಜದ ಪ್ರತಿಯೊಬ್ಬರೂ ಕೈಜೋಡಿಸಬೇಕಿದೆ. ಶಾಲೆಗಳಿಗೆ ಅಗತ್ಯವಾದ ಮೂಲಸೌಕರ್ಯ, ಶೈಕ್ಷಣಿಕ ಸೌಲಭ್ಯಗಳು ಹಾಗೂ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಅತ್ಯವಶ್ಯಕವಾಗಿದೆ ಎಂದರು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆತರೆ ದೇಶದ ಭವಿಷ್ಯ ಬೆಳಗುತ್ತದೆ ಎಂದು ಅಭಿಪ್ರಾಯಪಟ್ಟರು. ಈ ಸಂದರ್ಭ ಹಾನಗಲ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಯಶಾಂತ್ ಕುಮಾರ್, ಉಪಾಧ್ಯಕ್ಷೆ ರೇಣುಕ, ಎಸ್‌ಡಿಎಂಸಿ ಉಪಾಧ್ಯಕ್ಷೆ ಮೋಹಿನಿ, ಪಿಡಿಒ ಸ್ಮಿತಾ, ಬಿಅರ್‌ಸಿ ಚಂದ್ರಕಲಾ, ಮುಖ್ಯ ಶಿಕ್ಷಕರಾದ ಸುಕುಮಾರ್, ನಾವು ಪ್ರತಿಷ್ಠಾನದ ಸಂಸ್ಥಾಪಕ ಗೌತಮ್ ಕಿರಗಂದೂರು ಮತ್ತಿತರರು ಇದ್ದರು.