ಸಾರಾಂಶ
ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್‌ನಲ್ಲಿ ಶನಿವಾರ ಫ್ರೆಶರ್ಸ್ ಡೇ ಆಚರಿಸಲಾಯಿತು. ಹೊಸ ಶಿಕ್ಷಕರ, ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ ನೃತ್ಯ, ಗಾಯನ, ಪ್ರಹಸನ, ಮೂಕಾಭಿನಯ ಮುಂತಾದ ಸಾಂಸ್ಕೃತಿಕ ಕಾರ್ಯಕ್ರಮಗಳು ಮನೋರಂಜನೆಯ ರಸದೌತಣವನ್ನು ಉಣಬಡಿಸಿತು.
ಕನ್ನಡಪ್ರಭ ವಾರ್ತೆ ಬ್ರಹ್ಮಾವರ
ಇಲ್ಲಿನ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್‌ನಲ್ಲಿ ಶನಿವಾರ ಫ್ರೆಶರ್ಸ್ ಡೇ ಆಚರಿಸಲಾಯಿತು.ಈ ಕಾರ್ಯಕ್ರಮದ ಮುಖ್ಯ ಅತಿಥಿ ಉಡುಪಿಯ ಬಿಗ್ ಮೆಡಿಕಲ್ ಸೆಂಟರ್‌ನ ವೈದ್ಯೆ ಡಾ. ಶ್ರುತಿ ಬಲ್ಲಾಳ್ ಮಾತನಾಡಿ, ದುರಾಭ್ಯಾಸಗಳು ನಮ್ಮನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುತ್ತದೆ. ಆದ್ದರಿಂದ ನಾವು ಒಳ್ಳೆಯ ಆಹಾರ ಪದ್ಧತಿ, ಉತ್ತಮ ಚಟುವಟಿಕೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಜಿ.ಎಂ. ಸಂಸ್ಥೆ ಯೋಗ, ಕರಾಟೆ ವಿಭಿನ್ನ ಪಠ್ಯೇತರ ಚಟುವಟಿಕೆಗಳನ್ನು ಆಯೋಜಿಸುತ್ತಿದ್ದು, ಮಕ್ಕಳೆಲ್ಲರೂ ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ, ಜಿ. ಎಂ. ಸಂಸ್ಥೆಗೆ ಹೊಸದಾಗಿ ಸೇರ್ಪಡೆಗೊಂಡ ಶಿಕ್ಷಕರಿಗೆ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ಮಕ್ಕಳೆಲ್ಲರೂ ಕಲಿಕೆಯ ಜೊತೆಗೆ ಶಾಲೆಯ ಎಲ್ಲಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಕೊಳ್ಳಬೇಕೆಂದರು.ಶಾಲಾ ಪ್ರಾಂಶುಪಾಲ ಜಾರ್ಜ್ ಕುರಿಯನ್ ಮಾತನಾಡಿ, ಫ್ರೆಶರ್ಸ್ ಡೇ ಎಲ್ಲರೂ ಸ್ನೇಹ ಭಾವದಿಂದ ಜೊತೆಯಾಗಿ ಸೇರಿ ಸಂಭ್ರಮಿಸುವ ದಿನ ಎಂದರು.
ಹೊಸ ಶಿಕ್ಷಕರ, ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ ನೃತ್ಯ, ಗಾಯನ, ಪ್ರಹಸನ, ಮೂಕಾಭಿನಯ ಮುಂತಾದ ಸಾಂಸ್ಕೃತಿಕ ಕಾರ್ಯಕ್ರಮಗಳು ಮನೋರಂಜನೆಯ ರಸದೌತಣವನ್ನು ಉಣಬಡಿಸಿತು.ಕಾರ್ಯಕ್ರಮದಲ್ಲಿ ಸಂಸ್ಥೆಯ ಹಳೆಯ ವಿದ್ಯಾರ್ಥಿ ಶ್ರೀಶಾ ಎ. ಶೆಟ್ಟಿ, ಜಿ.ಎಂ. ಗ್ಲೋಬಲ್ ಸ್ಕೂಲ್‌ನ ಪ್ರಾಂಶುಪಾಲ ಪ್ರಣವ್ ಶೆಟ್ಟಿ, ತಾರಾ ಪ್ರಕಾಶ್ಚಂದ್ರ ಶೆಟ್ಟಿ, ಶ್ರೀಮಾ ಪ್ರಣವ್ ಶೆಟ್ಟಿ, ಪೋಷಕರು, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.