ರೈತರ ಪ್ರತಿಭಟನೆಯನ್ನು ಜೆಡಿಎಸ್ ಕೃಪಾಪೋಷಿತ ನಾಟಕ ಎಂದು ಹೇಳುವ ಮೂಲಕ ಶಾಸಕ ಬಾಲಕೃಷ್ಣ ರೈತ ಮಹಿಳೆಯರಿಗೆ ಅವಮಾನ ಮಾಡಿದ್ದಾರೆ. ಸ್ವಾಭಿಮಾನದಿಂದ ಜೀವನ ಮಾಡುತ್ತಿರುವ ಮಹಿಳೆಯರನ್ನು ನಾಟಕ ಮಾಡುವವರು ಅಂದಿದ್ದಾರೆ. ಕೂಡಲೇ ಬಾಲಕೃಷ್ಣ ರೈತ ಮಹಿಳೆಯರ ಕ್ಷಮೆ ಕೇಳಬೇಕು. ಇಲ್ಲವಾದರೆ ಬಾಲಕೃಷ್ಣ ಮನೆ ಮುಂದೆ ಧರಣಿ ನಡೆಸುವುದಾಗಿ ರೈತ ಮಹಿಳೆಯರು ಎಚ್ಚರಿಕೆ ನೀಡಿದರು.

ರಾಮನಗರ: ಬಿಡದಿ ಟೌನ್ ಶಿಪ್ ಯೋಜನೆ ವಿರೋಧಿಸಿ ಹೋರಾಟ ನಡೆಸುತ್ತಿರುವ ರೈತರು ನಾಲ್ಕು ಗ್ರಾಮಗಳ ಭೂ ಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರ ಬೀಳುತ್ತಿದ್ದಂತೆ ಬಿಡದಿ - ಹಾರೋಹಳ್ಳಿ ಮಾರ್ಗದ ರಸ್ತೆಯಲ್ಲಿ ಪಿಂಡ ಪ್ರದಾನದ ಅಣಕು ಪ್ರದರ್ಶನ ಮಾಡುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ತಟ್ಟೆಯಲ್ಲಿ ಮಣ್ಣು ಹಿಡಿದುಕೊಂಡು ವಾಹನಗಳನ್ನು ತಡೆದು ಪ್ರತಿಭಟಿಸಿದ ರೈತರು , ರಾಜ್ಯ ಸರ್ಕಾರಕ್ಕೆ ಪಿಂಡ ಪ್ರದಾನ ಮಾಡಿ ನಮ್ಮ ಪಾಲಿಗೆ ಸರ್ಕಾರ ಸತ್ತೋಗಿದೆ ಎಂದು ಘೋಷಣೆ ಕೂಗಿದರು.

ರೈತರ ಪ್ರತಿಭಟನೆಯನ್ನು ಜೆಡಿಎಸ್ ಕೃಪಾಪೋಷಿತ ನಾಟಕ ಎಂದು ಹೇಳುವ ಮೂಲಕ ಶಾಸಕ ಬಾಲಕೃಷ್ಣ ರೈತ ಮಹಿಳೆಯರಿಗೆ ಅವಮಾನ ಮಾಡಿದ್ದಾರೆ. ಸ್ವಾಭಿಮಾನದಿಂದ ಜೀವನ ಮಾಡುತ್ತಿರುವ ಮಹಿಳೆಯರನ್ನು ನಾಟಕ ಮಾಡುವವರು ಅಂದಿದ್ದಾರೆ. ಕೂಡಲೇ ಬಾಲಕೃಷ್ಣ ರೈತ ಮಹಿಳೆಯರ ಕ್ಷಮೆ ಕೇಳಬೇಕು. ಇಲ್ಲವಾದರೆ ಬಾಲಕೃಷ್ಣ ಮನೆ ಮುಂದೆ ಧರಣಿ ನಡೆಸುವುದಾಗಿ ರೈತ ಮಹಿಳೆಯರು ಎಚ್ಚರಿಕೆ ನೀಡಿದರು.

ಕಳೆದ 495 ದಿನಗಳಿಂದ ನಾವು ಪ್ರತಿಭಟನೆ ಮಾಡುತ್ತಿದ್ದೇವೆ. ನಾವು ಯೋಜನೆಯನ್ನು ವಿರೋಧ ಮಾಡುತ್ತಿದ್ದೇವೆ. ಆದರೂ ಸಹ ನಮ್ಮ ಮಾತಿಗೆ ಮನ್ನಣೆ ನೀಡದೆ ರಾಜ್ಯ ಸರ್ಕಾರ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಿದೆ. ನಾವು ಯಾವುದೇ ಕಾರಣಕ್ಕೂ ಭೂಮಿಯನ್ನು ನೀಡುವುದಿಲ್ಲ ಎಂದು ರೈತರು ಬಿಗಿಪಟ್ಟು ಹಿಡಿದರು.

ರೈತರು ರಸ್ತೆ ಮಧ್ಯದಲ್ಲಿ ಕುರ್ಚಿಗಳ ಮೇಲೆ ಕುಳಿತು ಒನಕೆ ಹಿಡಿದು ಪ್ರತಿಭಟಿಸಿದ್ದರಿಂದ ಬಿಡದಿ - ಹಾರೋಹಳ್ಳಿ ರಸ್ತೆಯಲ್ಲಿ ವಾಹನ ಸಂಚಾರ ಅಸ್ತವ್ಯಸ್ಥಗೊಂಡಿತು. ಪೊಲೀಸರು ರೈತರ ಮನವೊಲೀಸಿ ರಸ್ತೆ ತಡೆ ತೆರವುಗೊಳಿಸಿದರು.