ಯುವ ಮತದಾರರ ಗಮನ ಸೆಳೆಯಲು ಬೈಕ್ ರ್‍ಯಾಲಿ

| Published : Apr 11 2024, 12:49 AM IST

ಯುವ ಮತದಾರರ ಗಮನ ಸೆಳೆಯಲು ಬೈಕ್ ರ್‍ಯಾಲಿ
Share this Article
  • FB
  • TW
  • Linkdin
  • Email

ಸಾರಾಂಶ

ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಮತದಾರರಲ್ಲಿ ಮತದಾನದ ಮಹತ್ವ ಹಾಗೂ ಅರಿವನ್ನು ಮೂಡಿಸಲು ಮತ್ತು ಭಾರತೀಯ ಚುನಾವಣಾ ಆಯೋಗವು ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಿ, ಪ್ರತಿಯೊಬ್ಬ ಮತದಾರರು ಅದರಲ್ಲೂ ಯುವ ಮತದಾರರ ಗಮನ ಸೆಳೆಯಬೇಕಿದೆ. ಹಾಗಾಗಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಬೈಕ್ ರ್‍ಯಾಲಿಯನ್ನು ಏರ್ಪಡಿಸಲಾಗಿದೆ

ಕನ್ನಡಪ್ರಭ ವಾರ್ತೆ ಮೈಸೂರು

ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಮತದಾರರಲ್ಲಿ ಮತದಾನದ ಮಹತ್ವ ಹಾಗೂ ಅರಿವನ್ನು ಮೂಡಿಸಲು ಮತ್ತು ಭಾರತೀಯ ಚುನಾವಣಾ ಆಯೋಗವು ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಿ, ಪ್ರತಿಯೊಬ್ಬ ಮತದಾರರು ಅದರಲ್ಲೂ ಯುವ ಮತದಾರರ ಗಮನ ಸೆಳೆಯಬೇಕಿದೆ. ಹಾಗಾಗಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಬೈಕ್ ರ್‍ಯಾಲಿಯನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದರು.

ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ, ನಗರ ಪಾಲಿಕೆ ವತಿಯಿಂದ ಗನ್ ಹೌಸ್ ವೃತ್ತದಿಂದ ಕೆಂಪೇಗೌಡ ವೃತ್ತದವರೆಗೆ ಆಯೋಜಿಸಿದ್ದ ಬೈಕ್ ರ್‍ಯಾಲಿಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಪ್ರತಿಯೊಬ್ಬ ಮತದಾರನು ಯಾವುದೇ ಆಸೆ ಆಮಿಷಕ್ಕೆ ಒಳಗಾಗದೆ ನೈತಿಕ ಮತದಾನವನ್ನು ಕಡ್ಡಾಯವಾಗಿ ಮಾಡಬೇಕು ಎಂದರು.

ಪ್ರಸ್ತುತ ಯುವಜನರು ಮತದಾನ ಎಂದರೆ ಹಿಂಜರಿಯುವುದುಂಟು. ಹಾಗಾಗಿ ಅವರಿಗೆ ಮತದಾನದ ಮಹತ್ವವನ್ನು ತಿಳಿಸಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಿ ಚುನಾವಣೆಯನ್ನು ಯಶಸ್ವಿಗೊಳಿಸಬೇಕು ಎಂದರು.

ಚುನಾವಣಾ ಅಕ್ರಮಗಳನ್ನು ತಡೆಯುವುದು ಕೇವಲ ಅಧಿಕಾರಿಗಳಿಗೆ ಸೀಮಿತವಾಗಿಲ್ಲ. ಬದಲಾಗಿ ಪ್ರತಿಯೊಬ್ಬ ವ್ಯಕ್ತಿಯು ನಮ್ಮೊಂದಿಗೆ ಕೈಜೋಡಿಸಿ ಚುನಾವಣಾ ಅಕ್ರಮ ಕಂಡುಬಂದರೆ ಸಿ ವಿಜಿಲ್ ಆಪ್ ನಲ್ಲಿ ವಿಡಿಯೋ, ಆಡಿಯೋ, ಫೋಟೋ ಹಾಗೂ ಜಿ.ಪಿ.ಎಸ್ ಮೂಲಕ ಮಾಹಿತಿ ನೀಡಿ ಅಕ್ರಮ ತಡೆಗಟ್ಟಲು ಸಹಕರಿಸಬೇಕು ಎಂದು ಹೇಳಿದರು.

ನಗರ ಪೊಲೀಸ್ ಆಯುಕ್ತ ಬಿ. ರಮೇಶ್, ಜಿಪಂ ಸಿಇಒ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷೆ ಕೆ.ಎಂ. ಗಾಯಿತ್ರಿ, ಎಸ್ಪಿ ಸೀಮಾ ಲಾಟ್ಕರ್, ನಗರ ಪಾಲಿಕೆ ಆಯುಕ್ತೆ ಎನ್.ಎನ್. ಮಧು ಸೇರಿದಂತೆ ಅನೇಕ ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.