ಇಂದಿನಿಂದ ಹಾನಗಲ್ಲ ಲಿಂ. ಕುಮಾರ ಶಿವಯೋಗಿಗಳ ೯೫ನೇ ಪುಣ್ಯಸ್ಮರಣೋತ್ಸವ

| Published : Feb 18 2025, 12:30 AM IST

ಇಂದಿನಿಂದ ಹಾನಗಲ್ಲ ಲಿಂ. ಕುಮಾರ ಶಿವಯೋಗಿಗಳ ೯೫ನೇ ಪುಣ್ಯಸ್ಮರಣೋತ್ಸವ
Share this Article
  • FB
  • TW
  • Linkdin
  • Email

ಸಾರಾಂಶ

ಫೆ. ೧೮ರಂದು ಬೆಳಗ್ಗೆ ೮ ಗಂಟೆಗೆ ಷಟ್‌ಸ್ಥಲ ಧ್ವಜಾರೋಹನವನ್ನು ಬಾಳೂರು ಅಡವಿಸ್ವಾಮಿ ಮಠದ ಕುಮಾರ ಸ್ವಾಮಿಗಳು ನೆರವೇರಿಸುವರು.

ಹಾನಗಲ್ಲ: ಅಖಿಲ ಭಾರತ ವೀರಶೈವ ಮಹಾಸಭಾ ಹಾಗೂ ಶಿವಯೋಗ ಮಂದಿರದ ಸಂಸ್ಥಾಪಕ ಹಾನಗಲ್ಲ ಲಿಂ. ಕುಮಾರ ಶಿವಯೋಗಿಗಳ ೯೫ನೇ ಪುಣ್ಯಸ್ಮರಣೋತ್ಸವ ಫೆ. ೧೮ರಿಂದ ೨೦ರ ವರೆಗೆ ಪಟ್ಟಣದ ವಿರಕ್ತಮಠದಲ್ಲಿ ನಡೆಯಲಿದೆ.

ಫೆ. ೧೮ರಂದು ಬೆಳಗ್ಗೆ ೮ ಗಂಟೆಗೆ ಷಟ್‌ಸ್ಥಲ ಧ್ವಜಾರೋಹನವನ್ನು ಬಾಳೂರು ಅಡವಿಸ್ವಾಮಿ ಮಠದ ಕುಮಾರ ಸ್ವಾಮಿಗಳು ನೆರವೇರಿಸುವರು. ಸ್ಮರಣೋತ್ಸವ ಸಮಿತಿ ಅಧ್ಯಕ್ಷ ಶಿವಕುಮಾರ ಉದಾಸಿ ಅಧ್ಯಕ್ಷತೆ ವಹಿಸುವರು. ಅಕ್ಕಿಆಲೂರಿನ ಶಿವಬಸವ ಸ್ವಾಮಿಗಳು ಉಪಸ್ಥಿತರಿರುವರು.ಸಂಜೆ ೬.೩೦ಕ್ಕೆ ನಡೆಯುವ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಬೆಳಗಾವಿ ರುದ್ರಾಕ್ಷಿಮಠದ ಡಾ. ಅಲ್ಲಮಪ್ರಭು ಸ್ವಾಮಿಗಳು ವಹಿಸುವರು. ಜಡೆ ಸಂಸ್ಥಾನಮಠದ ಕುಮಾರ ಕೆಂಪಿನ ಸಿದ್ಧವೃಷಭೇಂದ್ರ ಸ್ವಾಮಿಗಳು, ಕೂಡಲದ ಗುರುಮಹೇಶ್ವರ ಶಿವಾಚಾರ್ಯರು, ನರಗುಂದ ಪತ್ರಿವನದ ಸಿದ್ಧವೀರ ಶಿವಾಚಾರ್ಯರು, ಸದ್ಗುರು ಶಂಕರಾನಂದ ಸ್ವಾಮಿಗಳು ನೇತೃತ್ವ ವಹಿಸುವರು. ಮಾಜಿ ಸಂಸದ ಶಿವಕುಮಾರ ಉದಾಸಿ, ಶಾಸಕ ಶ್ರೀನಿವಾಸ ಮಾನೆ ಅತಿಥಿಗಳಾಗಿ ಪಾಲ್ಗೊಳ್ಳುವರು. ಹಾವೇರಿ ಎಎಸ್‌ಪಿ ಎಲ್.ವೈ. ಶಿರಕೋಳ ಅವರನ್ನು ಸನ್ಮಾನಿಸಲಾಗುತ್ತದೆ. ಫೆ. ೧೯ರಂದು ಬೆಳಗ್ಗೆ ಅಕ್ಕಿಆಲೂರಿನ ಶಿವಬಸವ ಸ್ವಾಮಿಗಳ ನೇತೃತ್ವದಲ್ಲಿ ಗ್ರಾಮದ ಭಕ್ತರು ಅಕ್ಕಿಆಲೂರಿನಿಂದ ಹಾನಗಲ್ಲ ಶ್ರೀಮಠಕ್ಕೆ ಪಾದಯಾತ್ರೆ ಮೂಲಕ ಆಗಮಿಸಲಿದ್ದಾರೆ. ಸಂಜೆ ನಡೆಯುವ ಧರ್ಮಸಭೆಯಲ್ಲಿ ಆನಂದಪುರ ಬೆಕ್ಕಿನಕಲ್ಮಠದ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮಿಗಳು ಸಾನ್ನಿಧ್ಯ ವಹಿಸುವರು. ರಾಯನಾಳದ ಅಭಿನವ ರೇವಣಸಿದ್ದೇಶ್ವರ ಸ್ವಾಮಿಗಳು ಸಮ್ಮುಖ ವಹಿಸುವರು.

ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಅವರನ್ನು ಶ್ರೀಮಠದಿಂದ ಗೌರವಿಸಲಾಗುವುದು. ಹಾವೇರಿ ವಿಶ್ವವಿದ್ಯಾಲಯದ ಆ. ವಿಜಯಲಕ್ಷ್ಮೀ ಹರ್ಲಾಪೂರ ಉಪನ್ಯಾಸ ನೀಡಲಿದ್ದಾರೆ. ಮಾಜಿ ಶಾಸಕ ಶಿವರಾಜ ಸಜ್ಜನರ, ಸಿಪಿಐ ಎನ್.ಎಚ್. ಆಂಜನೇಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಇದೇ ಸಂದರ್ಭದಲ್ಲಿ ಪ್ರಸ್ತುತ ವರ್ಷ ನಿವೃತ್ತರಾದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರನ್ನು ಸನ್ಮಾನಿಸಲಾಗುತ್ತಿದೆ. ನಂತರ ಸ್ಥಳೀಯ ಕುಮಾರೇಶ್ವರ ಪಪೂ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರಸ್ತುತಗೊಳ್ಳಲಿವೆ. ಫೆ. ೨೦ರಂದು ಬೆಳಗ್ಗೆ ಶ್ರೀಮಠದ ಆವರಣದಲ್ಲಿ ಸಾಮೂಹಿಕ ವಿವಾಹಗಳು ಜರುಗಲಿದ್ದು, ಸ್ಮರಣೋತ್ಸವ ಸಮಿತಿ ಅಧ್ಯಕ್ಷ ಶಿವಕುಮಾರ ಉದಾಸಿ ಅಧ್ಯಕ್ಷತೆ ವಹಿಸುವರು. ನಂತರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಲಿಂ. ಕುಮಾರ ಶಿವಯೋಗಿಗಳವರ ಭಾವಚಿತ್ರದ ಮೆರವಣಿಗೆ ನಡೆಯಲಿದೆ. ಸಂಜೆ ನಡೆಯುವ ಧರ್ಮಸಭೆಯಲ್ಲಿ ಹಾಲಕೇರಿ ಅನ್ನದಾನೇಶ್ವರ ಸಂಸ್ಥಾನಮಠದ ಮುಪ್ಪಿನ ಬಸವಲಿಂಗ ಸ್ವಾಮಿಗಳು ಸಾನ್ನಿಧ್ಯ ವಹಿಸುವರು.

ಬಿಜಕಲ್ಲ ಶಿವಲಿಂಗ ಸ್ವಾಮಿಗಳು, ಅಕ್ಕಿಆಲೂರಿನ ಶಿವಬಸವ ಸ್ವಾಮಿಗಳು, ಮುತ್ತಿನಕಂತಿಮಠದ ಚಂದ್ರಶೇಖರ ಶಿವಾಚಾರ್ಯರು, ಶೇಗುಣಶಿಯ ಡಾ. ಮಹಾಂತಪ್ರಭು ಸ್ವಾಮಿಗಳು ನೇತೃತ್ವ ವಹಿಸುವರು. ಸಂಸದ ಬಸವರಾಜ ಬೊಮ್ಮಾಯಿ ಅತಿಥಿಗಳಾಗಿ ಪಾಲ್ಗೊಳ್ಳುವರು. ನಂತರ ಸ್ಥಳೀಯ ಕುಮಾರೇಶ್ವರ ಬಿಇಡಿ ಕಾಲೇಜಿನ ಪ್ರಶಿಕ್ಷಣಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.