ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಭಾರತ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಮತದಾರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯ ಕೈಗೊಳ್ಳಲಾಗುತ್ತಿದ್ದು, ಜೂನ್ 30 ರಿಂದ ಜುಲೈ 29 ವರೆಗೆ ಮನೆಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಆಗಿರುವ ಜಿಲ್ಲಾ ಚುನಾವಣಾಧಿಕಾರಿ ಸಂಗಪ್ಪ ತಿಳಿಸಿದ್ದಾರೆ.ಅಕ್ಟೋಬರ 1, 2026 ಅನ್ನು ಅರ್ಹತಾ ದಿನಾಂಕವನ್ನಾಗಿ ಪರಿಗಣಿಸಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಜರುಗಿಸಲಾಗುತ್ತಿದೆ. ಈಗಾಗಲೇ ಬೂತ ಮಟ್ಟದ ಅಧಿಕಾರಿಗಳು ಮತದಾರರ ಪಟ್ಟಿಯಲ್ಲಿರುವ ಎಲ್ಲ ಮತದಾರರಿಗೆ ಎನ್ಯೂಮರೇಷನ್ ಫಾರಂಗಳನ್ನು ವಿತರಣೆ ಮಾಡಿದ್ದಾರೆ. ಜೂನ್ 30 ರಿಂದ ಜುಲೈ 29 ವರೆಗೆ ನಿಮ್ಮ ಮನೆಗಳಿಗೆ ಭೇಟಿ ನೀಡಲಿದ್ದಾರೆ. ಫಾರಂಗಳನ್ನು ದ್ವಿಪ್ರತಿಯಲ್ಲಿ ನಿಮಗೆ ನೀಡಿ ಫಾರಂನ್ನು ಭರ್ತಿ ಮಾಡಲು ಸಹಾಯ ಮಾಡಿ, ಭರ್ತಿ ಮಾಡಿದ ಫಾರಂಗಳನ್ನು ಸಂಗ್ರಹಿಸಿ ಅದಕ್ಕೆ ಸ್ವೀಕೃತಿ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.
ಪರಿಷ್ಕರಣೆ ಪ್ರಕ್ರಿಯೆ, ನಮೂನೆಗಳು ಮತ್ತು ವೇಳಾಪಟ್ಟಿಯ ಕುರಿತು ಹೆಚ್ಚಿನ ವಿವರಗಳನ್ನು ಜಿಲ್ಲಾ ಚುನಾವಣಾ ಅಧಿಕಾರಿಗಳ ಅಧಿಕೃತ ವೆಬ್ಸೈಟ್, ಮುಖ್ಯ ಚುನಾವಣಾಧಿಕಾರಿಗಳು, ಬೆಂಗಳೂರು ಭಾರತ ಚುನಾವಣಾ ಆಯೋಗದ ವೆಬ್ಸೈಟ್, ನಿಂದ ಪಡೆದುಕೊಳ್ಳಬಹುದಾಗಿದೆ. ಅಲ್ಲದೇ ಮುಖ್ಯ ಚುನಾವಣಾಧಿಕಾರಿಗಳ ವೆಬ್ಸೈಟ್ ನಲ್ಲಿ 2002ರ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರುಗಳನ್ನು ಶೋಧಿಸಲು ಬಳಸಲು ಎಲ್ಲ ಮತದಾರರಲ್ಲಿ ವಿನಂತಿಸಿಕೊಂಡಿದ್ದಾರೆ.ಬಾಗಲಕೋಟೆ ಜಿಲ್ಲೆಯಲ್ಲಿ ಮತದಾರರಿಗೆ ಅನುಕೂಲವಾಗುವಂತೆ ಪ್ರತಿ ಗ್ರಾಮ ಪಂಚಾಯತಿ ಹಾಘೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹಾಗೂ ವಾರ್ಡಗಳಲ್ಲಿ ಓಟರ್ ಫೆಸಿಲಿಟಿ ಸೆಂಟರ್ ಹಾಗೂ ಪ್ರತಿ ಮತಗಟ್ಟೆಯಲ್ಲಿ ಬಿಎಲ್ಓ ಫೆಸಿಲಿಟಿ ಸೆಂಟರ್ ಪ್ರಾರಂಭಿಸಲು ಕ್ರಮಕೈಗೊಳ್ಳಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮತದಾರರ ನೋಂದಣಾಧಿಕಾರಿಗಳು ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಮತದಾರರು ಬೂತ್ ಮಟ್ಟದ ಅಧಿಕಾರಿಯು ನೀಡುವ 2 ಫಾರಂಗಳನ್ನು ಭರ್ತಿ ಮಾಡಬೇಕು. ಫಾರಂ ಮೇಲೆ ಇತ್ತೀಚಿನ ಕಲರ್ ಪೋಟೋ ಅಂಟಿಸಬೇಕು. ಫಾರಂ ಭರ್ತಿ ಮಾಡಲು ಅಥವಾ ಆನ್ಲೈನ್ನಲ್ಲಿ ಅಪಲೋಡ್ ಮಾಡಲು ಅಗತ್ಯ ಸಹಾಯಕ್ಕಾಗಿ ಬೂತ್ ಮಟ್ಟದ ಅಧಿಕಾರಿಗಳನ್ನು ಸಂಪರ್ಕಿಸಬೇಕು. ಈ ಪರಿಷ್ಕರಣೆ ಕಾರ್ಯವು ಮತದಾರರು, ರಾಜಕೀಯ ಪಕ್ಷಗಳು ಮತ್ತು ಚುನಾವಣಾ ಸಿಬ್ಬಂದಿಗಳನ್ನು ಒಳಗೊಂಡಂತೆ ಪಾಲ್ಗೊಳ್ಳುವಿಕೆ ಹಾಗೂ ಪಾರದರ್ಶಕ ಪ್ರಕ್ರಿಯೆಯಾಗಿದೆ. ನಮೂನೆ ವಿತರಣೆ ಮತ್ತು ಸಂಗ್ರಹಣೆಗಾಗಿ ಬೂತ್ ಮಟ್ಟದ ಅಧಿಕಾರಿಗಳಿಗೆ ಮನೆ ಮನೆಗೆ ಭೇಟಿ ನೀಡಲಿದ್ದಾರೆ.
-ಸಂಗಪ್ಪ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಅ