ಸಾರಾಂಶ
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ದೇಶ ಕಂಡ ಧೀಮಂತ ನಾಯಕರು, ರೈತ ಕುಟುಂಬದಲ್ಲಿ ಜನಿಸಿ ಹಲವು ಹೋರಾಟಗಳ ಮೂಲಕ ರಾಜಕೀಯವಾಗಿ ಬೆಳೆದು ಮುಖ್ಯಮಂತ್ರಿ, ಸಂಸದರಾಗಿ, ದೇಶದ ಪ್ರಧಾನ ಮಂತ್ರಿ ಹುದ್ದೆ ಅಲಂಕರಿಸಿದ ಮೊದಲ ಕನ್ನಡಿಗ.
ಕನ್ನಡಪ್ರಭ ವಾರ್ತೆ ಪಾಂಡವಪುರ
ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡರ 92ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅಭಿಮಾನಿಗಳು, ಜೆಡಿಎಸ್ ಹಾಗೂ ಬಿಜೆಪಿ ಪಕ್ಷದ ಮುಖಂಡರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ ಹಣ್ಣು-ಹಂಪಲು ವಿತರಿಸಿ ಸಾಂಕೇತಿಕವಾಗಿ ಆಚರಣೆ ಮಾಡಿದರು.ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಎದುರು ಅಭಿಮಾನಿಗಳು ರೋಗಿಗಳಿಗೆ ದೇವೇಗೌಡರ ಹುಟ್ಟುಹಬ್ಬದ ಅಂಗವಾಗಿ 92 ಕೆಜಿ ಹಣ್ಣುಗಳನ್ನು ವಿತರಿಸಿದರು.
ಪಕ್ಷದ ತಾಲೂಕು ಅಧ್ಯಕ್ಷ ಎಸ್.ಎ.ಮಲ್ಲೇಶ್ ಮಾತನಾಡಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ದೇಶ ಕಂಡ ಧೀಮಂತ ನಾಯಕರು, ರೈತ ಕುಟುಂಬದಲ್ಲಿ ಜನಿಸಿ ಹಲವು ಹೋರಾಟಗಳ ಮೂಲಕ ರಾಜಕೀಯವಾಗಿ ಬೆಳೆದು ಮುಖ್ಯಮಂತ್ರಿ, ಸಂಸದರಾಗಿ, ದೇಶದ ಪ್ರಧಾನ ಮಂತ್ರಿ ಹುದ್ದೆ ಅಲಂಕರಿಸಿದ ಮೊದಲ ಕನ್ನಡಿಗ. ಇಂತಹ ನಾಯಕನನ್ನು ಪಡೆದ ನಾವೇ ಪುಣ್ಯವಂತರು ಎಂದರು.ಬಿಜೆಪಿ ಅಧ್ಯಕ್ಷ ಧನಂಜಯ್, ಟಿಎಪಿಸಿಎಂಎಸ್ ಅಧ್ಯಕ್ಷ ಡಿ.ಶ್ರೀನಿವಾಸ್, ನಿರ್ದೇಶಕ ರಾಮಕೃಷ್ಣೇಗೌಡ, ಸಹಕಾರಿ ಯೂನಿಯನ್ ಜಿಲ್ಲಾ ನಿರ್ದೇಶಕ ವಿ.ಎಸ್.ನಿಂಗೇಗೌಡ, ಪುರಸಭೆ ಸದಸ್ಯರಾದ ಗಿರೀಶ್, ಶಿವಕುಮಾರ್, ಯಶ್ವಂತ್, ಬಿ.ಎಸ್.ಜಯರಾಮ್,ಟೌನ್ ಚಂದ್ರು, ಯುವ ಮುಖಂಡ ಮಾಣಿಕ್ಯನಹಳ್ಳಿ ಅಶೋಕ್, ಬಿಜೆಪಿ ಮುಖಂಡ ಪುರುಷೋತ್ತಮ್, ಸಗಾಯ್, ಜಯರಾಮು, ಹಾರೋಹಳಿ ಸತೀಶ್, ಇಸ್ರತ್ ಪಾಷ ಸೇರಿ ಹಲವರು ಹಾಜರಿದ್ದರು.