ಸಾರಾಂಶ
ಜೇನು, ದ್ರಾಕ್ಷಿ, ದಾಳಿಂಬೆ, ಪೇರಲ, ಅಂಜೂರ, ಕಲ್ಲಂಗಡಿ, ಕರಬೂಜ, ಬಾಳೆ, ಪಪ್ಪಾಯ, ಅಣಬೆ ಸೇರಿದಂತೆ ವಿವಿಧ ಬಗೆಯ ಹಣ್ಣುಗಳನ್ನು ಮತ್ತು ಹಾಗೂ ಉತ್ಪನ್ನಗಳನ್ನು ವೀಕ್ಷಿಸಿ ಶಾಸಕ ರಾಘವೇಂದ್ರ ಹಿಟ್ನಾಳ ರುಚಿ ನೋಡಿದರು.
ಕೊಪ್ಪಳ: ಶಿವರಾತ್ರಿ ಪ್ರಯುಕ್ತ ತೋಟಗಾರಿಕೆ ಇಲಾಖೆಯಿಂದ ಕೊಪ್ಪಳ ನಗರದಲ್ಲಿ ಬುಧವಾರದಿಂದ ಮಾ.9ರವರೆಗೆ ಹಮ್ಮಿಕೊಳ್ಳಲಾದ ವಿವಿಧ ಬಗೆಯ ಹಣ್ಣುಗಳು, ಅಣಬೆ ಮತ್ತು ಜೇನು ಪ್ರದರ್ಶನ ಹಾಗೂ ಮಾರಾಟ ಮೇಳಕ್ಕೆ ಬುಧವಾರ ಶಾಸಕ ರಾಘವೇಂದ್ರ ಹಿಟ್ನಾಳ ಚಾಲನೆ ನೀಡಿದರು.
ಜೇನು, ದ್ರಾಕ್ಷಿ, ದಾಳಿಂಬೆ, ಪೇರಲ, ಅಂಜೂರ, ಕಲ್ಲಂಗಡಿ, ಕರಬೂಜ, ಬಾಳೆ, ಪಪ್ಪಾಯ, ಅಣಬೆ ಸೇರಿದಂತೆ ವಿವಿಧ ಬಗೆಯ ಹಣ್ಣುಗಳನ್ನು ಮತ್ತು ಹಾಗೂ ಉತ್ಪನ್ನಗಳನ್ನು ವೀಕ್ಷಿಸಿ ಶಾಸಕ ರಾಘವೇಂದ್ರ ಹಿಟ್ನಾಳ ರುಚಿ ನೋಡಿದರು.ರೈತರಿಂದಲೇ ನೇರ ಮಾರಾಟ ಮಾಡುತ್ತಿರುವುದು ಗ್ರಾಹಕರಿಗೂ ಮತ್ತು ರೈತರಿಗೂ ಲಾಭವಾಗಲಿದೆ ಎಂದರು.ಸಿಇಓ ಭೇಟಿ:ದ್ರಾಕ್ಷಿ, ದಾಳಿಂಬೆ, ಪೇರಲ, ಅಂಜೂರ, ಕಲ್ಲಂಗಡಿ, ಕರಬೂಜ, ಬಾಳೆ, ಪಪ್ಪಾಯ, ಅಣಬೆ, ಜೇನು ಪ್ರದರ್ಶನ, ಮಾರಾಟ ಮೇಳಕ್ಕೆ ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆ ಭೇಟಿ ನೀಡಿ, ಜೇನು, ಅಣಬೆ ಸೇರಿದಂತೆ ವಿವಿಧ ಹಣ್ಣುಗಳನ್ನು ಮತ್ತು ಹಾಗೂ ಉತ್ಪನ್ನಗಳನ್ನು ವೀಕ್ಷಿಸಿ, ಅವುಗಳ ಬಗ್ಗೆ ಮಾಹಿತಿ ಪಡೆದುಕೊಂಡರು.ಈ ಸಂದರ್ಭದಲ್ಲಿ ಜಿಲ್ಲಾ ಹಾಪ್‌ಕಾಮ್ಸ್ ಅಧ್ಯಕ್ಷ ಯಂಕಣ್ಣ ಯರಾಶಿ, ಜಂಟಿ ಕೃಷಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್., ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಕೃಷ್ಣ ಉಕ್ಕುಂದ ಉಪಸ್ಥಿತರಿದ್ದರು.ಮೇಳದಲ್ಲಿ 17ಕ್ಕೂ ಹೆಚ್ಚು ಹಣ್ಣು ಬೆಳೆಗಾರರು, 10 ರೈತ ಉತ್ಪಾದಕ ಕಂಪನಿಗಳಲ್ಲದೇ ಜಿಲ್ಲಾ ಹಾಪ್‌ಕಾಮ್ಸ್ ಸಂಸ್ಥೆಗಳಿಗೆ ಕೂಡ ಸ್ಟಾಲ್ ವ್ಯವಸ್ಥೆ ಮಾಡಲಾಗಿದೆ. ರೈತ ಉತ್ಪಾದಕ ಕಂಪನಿಗಳು ಹಾಗೂ ಜಿಲ್ಲಾ ಹಾಪ್‌ಕಾಮ್ಸ್ ಕೊಪ್ಪಳದ ನೂರಾರು ಸದಸ್ಯ ರೈತರಿಂದ ವಿವಿಧ ಹಣ್ಣುಗಳನ್ನು ಖರೀದಿಸಿ, ಮೇಳದಲ್ಲಿ ಮಾರಾಟ ಮಾಡುವುದರಿಂದ ಮೇಳದಲ್ಲಿ ನೇರವಾಗಿ ಭಾಗವಹಿಸಿದ ರೈತರಿಗೂ ಅನುಕೂಲವಾಗಿ ಯೋಗ್ಯ ಬೆಲೆ ಸಿಗುವಂತಾಗಲಿದೆ ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಕೃಷ್ಣ ಉಕ್ಕುಂದ ಅಧಿಕಾರಿಗಳಿಗೆ ಮಾಹಿತಿ ನೀಡಿದರು.ಕೃಷಿ ಬೆಳೆಗಳಲ್ಲಿ ರಾಸಾಯನಿಕ ಔಷಧಿಗಳ ಸಿಂಪಡಿಸಲು ಫ್ಲೈಯಿಂಗ್ ವೆಡ್ಜ್ ಡಿಫೆನ್ಸ್ ಆ್ಯಂಡ್ ಏರೋಸ್ಪೇಸ್ ಕಂಪನಿ ವತಿಯಿಂದ ಸಿದ್ಧಪಡಿಸಲಾದ ಕೃಷಿ ಡ್ರೋನ್ ಜೇನು ಮತ್ತು ಹಣ್ಣು'''' ಮೇಳದಲ್ಲಿ ಗಮನ ಸೆಳೆಯಿತು. ಕೃಷಿ ಸಂಶೋಧನಾ ಕೇಂದ್ರ ಸಂಸ್ಥೆಯಿಂದ ಅಧ್ಯಯನ ಮಾಡಲಾದ ಈ ಕೃಷಿ ಡ್ರೋನ್ ಕೃಷಿಕರಿಗೆ ಶೇ.50ರಷ್ಟು ಹಣ ಉಳಿತಾಯ ಮಾಡಬಹುದು. ರಾಸಾಯನಿಕ ಔಷಧಿ ಸಿಂಪಡಿಸಲು ಕೆಲಸಗಾರರ ಅವಲಂಬನೆ ಕಡಿಮೆ ಮಾಡುವುದಲ್ಲದೇ 5 ನಿಮಿಷದಲ್ಲಿ ಒಂದು ಎಕರೆಗೆ ಔಷಧಿ ಸಿಂಪಡಿಸಬಹುದು. ನೀರಿನ ಬಳಕೆಯನ್ನು ಶೇ.90 ಕಡಿಮೆ ಮಾಡುತ್ತದೆ.