ಸಾರಾಂಶ
ಎಸ್ ಎಫ್ ಐ ಹಾಗೂ ಡಿವೈಎಫ್ ಐ ವಿದ್ಯಾರ್ಥಿ ಸಂಘಟನೆಗಳು ನೀಡಿದ ಅಭೂತಪೂರ್ವ ಬೆಂಬಲದಿಂದ ಹಲವಾರು ತಿಂಗಳಿನಿಂದ ಸೇವಾ ಕಾಯಮಾತಿಗೆ ಆಗ್ರಹಿಸುತ್ತಿರುವ ಅತಿಥಿ ಉಪನ್ಯಾಸಕರ ಹೋರಾಟಕ್ಕೆ ಆನೆ ಬಲ ಬಂದಂತಾಗಿದೆ,
ಎಸ್ಎಫ್ಐ ಹಾಗೂ ಡಿವೈಎಫ್ಐ ವಿದ್ಯಾರ್ಥಿ ಸಂಘಟನೆಗಳಿಂದ ಧರಣಿ
ಕನ್ನಡಪ್ರಭ ವಾರ್ತೆ ಹಾಸನತಮ್ಮ ಸೇವೆ ಕಾಯಂಗೊಳಿಸಬೇಕು ಎಂಬುದು ಸೇರಿ ಅತಿಥಿ ಉಪನ್ಯಾಸಕರ ಹಲವು ಬೇಡಿಕೆ ಈಡೇರಿಕೆಗಳಿಗೆ ಆಗ್ರಹಿಸಿ ನಗರದ ಡೀಸಿ ಕಚೇರಿಯೆದುರು ಎಸ್ಎಫ್ಐ, ಡಿವೈಎಫ್ಐ ಸಂಘಟನೆಯ ವತಿಯಿಂದ ಗುರುವಾರ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಎಂ.ಜಿ.ಪೃಥ್ವಿ ಮಾತನಾಡಿ,ಕಳೆದ ಹದಿನೈದರಿಂದ ಇಪ್ಪತ್ತು ವರ್ಷಗಳಿಂದ ಯಾವುದೆ ಸೌಲಭ್ಯಗಳಿಲ್ಲದೆ, ಕಾಯಮಾತಿ ಇಲ್ಲದೆ ತಾತ್ಕಾಲಿಕ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರ ಸ್ಥಿತಿ ದುಸ್ತರವಾಗಿದೆ.ಅತಿಥಿ ಉಪನ್ಯಾಸಕರು ಕಾಯಮಾತಿ ಸೇರಿ ವೇತನ ಹೆಚ್ಚಳ ಮತ್ತು ಉದ್ಯೋಗ ಭದ್ರತೆಗಾಗಿ ಹಲವಾರು ವರ್ಷಗಳಿಂದ ಹೋರಾಟ ನಡೆಸುತ್ತಾ ಬಂದಿದ್ದು, ರಾಜ್ಯವನ್ನಾಳಿದ ಹಲವು ಸರ್ಕಾರಗಳಿಗೆ ಮನವಿ ಸಲ್ಲಿಸಿದ್ದರೂ ಶಾಶ್ವತ ಪರಿಹಾರ ಸಿಕ್ಕಿಲ್ಲ. ಕೇವಲ ತಾತ್ಕಾಲಿಕ ಪರಿಹಾರ ನೀಡಿ, ಸರ್ಕಾರಗಳು ಪ್ರಮುಖ ಬೇಡಿಕೆಗಳನ್ನು ಮರೆಮಾಚುತ್ತಾ ಬಂದಿವೆ.
ಪ್ರಸ್ತುತ ರಾಜ್ಯ ಸರ್ಕಾರ ಅತಿಥಿ ಉಪನ್ಯಾಸಕರ ಕಾಯಮಾತಿಗೆ ಕಾರ್ಯಯೋಜನೆ ರೂಪಿಸಲಾಗುವುದು ಎಂದು ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದ್ದು, ಅಧಿಕಾರಕ್ಕೆ ಬಂದು 6 ತಿಂಗಳು ಕಳೆದರೂ ಇಲ್ಲಿಯವರೆಗೆ ಯಾವುದೆ ತೀರ್ಮಾನ ಕೈಗೊಂಡಿಲ್ಲ. ಇದು ಅತಿಥಿ ಉಪನ್ಯಾಸಕರಿಗೆ ಮಾಡಿದ ದ್ರೋಹವಾಗಿರುತ್ತದೆ.ಅದ್ದರಿಂದ ಕೂಡಲೇ ಅತಿಥಿ ಉಪನ್ಯಾಸಕರ ಬೇಡಿಕೆಗಳಾದ ಉದ್ಯೋಗದ ಭದ್ರತೆ, ವೇತನ ಹೆಚ್ಚಳ ಮತ್ತು ಅವರ ಸೇವೆಯನ್ನು ಕಾಯಂಗೊಳಿಸಬೇಕೆಂದು ಈ ಮೂಲಕ ಭಾರತ ವಿದ್ಯಾರ್ಥಿ ಫೆಡರೇಷನ್ ಹಾಗೂ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ ಸಂಘಟನೆಗಳು ಪ್ರಸ್ತುತ ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತವೆ ಎಂದರು.
ಪ್ರತಿಭಟನೆಯಲ್ಲಿ ಎಸ್ಎಫ್ಐ ಕಾರ್ಯದರ್ಶಿ ರಮೇಶ್, ಡಿವೈಎಫ್ಐ ಜಿಲ್ಲಾಧ್ಯಕ್ಷ ವಾಸುದೇವ್, ಶಶಿ, ವಿವೇಕ್, ಸ್ವರೂಪ್ ಮತ್ತಿತರರಿದ್ದರು.----
ಅತಿಥಿ ಉಪನ್ಯಾಸಕರ ಬೇಡಿಕೆಗಳಿಗಾಗಿ ಡೀಸಿ ಕಚೇರಿಯ ಮುಂದೆ ಎಸ್ಎಫ್ಐ ಮತ್ತು ಡಿವೈಎಫ್ಐ ವಿದ್ಯಾರ್ಥಿ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು.