ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಗಾಗಿ ನಿರಂತರ ಧರಣಿ ಸತ್ಯಾಗ್ರಹ ನಡೆಯುತ್ತಿದೆ. ಸರ್ಕಾರ ಹೋರಾಟವನ್ನು ಗಂಭೀರವಾಗಿ ತೆಗೆದುಕೊಂಡು ಜಿಲ್ಲೆಯ ಜನರ ಬೇಡಿಕೆ ಈಡೇರಿಸಲು ಮುಂದಾಗದಿರುವುದು ಖಂಡನೀಯ ಎಂದು ರೈತ ಭಾರತ ಪಕ್ಷದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಕೆಂಗನಾಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕನ್ನಡಪ್ರಭ ವಾರ್ತೆ ವಿಜಯಪುರ
ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಗಾಗಿ ನಿರಂತರ ಧರಣಿ ಸತ್ಯಾಗ್ರಹ ನಡೆಯುತ್ತಿದೆ. ಸರ್ಕಾರ ಹೋರಾಟವನ್ನು ಗಂಭೀರವಾಗಿ ತೆಗೆದುಕೊಂಡು ಜಿಲ್ಲೆಯ ಜನರ ಬೇಡಿಕೆ ಈಡೇರಿಸಲು ಮುಂದಾಗದಿರುವುದು ಖಂಡನೀಯ ಎಂದು ರೈತ ಭಾರತ ಪಕ್ಷದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಕೆಂಗನಾಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜಿಲ್ಲೆಯ ಶಾಸಕರು ಮತ್ತು ವಿಧಾನ ಪರಿಷತ್ತಿನ ಸದಸ್ಯರು ಚಳಿಗಾಲ ಅಧಿವೇಶನದಲ್ಲಿ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಗಾಗಿ ನಡೆಯುತ್ತಿರುವ ಹೋರಾಟದ ಕುರಿತು ಅಧಿವೇಶನದಲ್ಲಿ ಚರ್ಚೆ ಮಾಡಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಖಾಸಗಿ ಸಹ ಭಾಗಿತ್ವದ ವೈದ್ಯಕೀಯ ಮಹಾವಿದ್ಯಾಲಯ ಕೈಬಿಟ್ಟು ಪೂರ್ಣ ಪ್ರಮಾಣದ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆ ಮಾಡಲು ಸರ್ಕಾರದ ಮೇಲೆ ಒತ್ತಡ ಹಾಕಬೇಕು ಎಂದು ಆಗ್ರಹಿಸಿದ್ದಾರೆ. ವಜ್ರಹನುಮಾನ ರೇಲ್ವೆ ಗೇಟ್ ಹತ್ತಿರ ಫ್ಲೈಓವರ್ ಬ್ರಿಜ್ಡ್ ಮಾಡದ ಕಾರಣ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗುತ್ತಿದೆ. ಕಳೆದ 7 ಹಾಗೂ 8 ತಿಂಗಳಿನಿಂದ ಸಾರ್ವಜನಿಕರಿಗೆ ಕಟ್ಟಿದ ಮನೆ ಹಾಗೂ ಕಟ್ಟುವ ಮನೆಗಳಿಗೆ ವಿದ್ಯುತ್ ಸಂಪರ್ಕ ನೀಡದೇ ಇರುವುದು ಸಾರ್ವಜನಿಕರ ಮೂಲಭೂತ ಹಕ್ಕು ಉಲ್ಲಂಘನೆಯಾಗುತ್ತಿದೆ ಎಂದರು.ಜಿಲ್ಲೆಯ ಜ್ವಲಂತ ಸಮಸ್ಯೆಗಳಾದ ಕಲ್ಯಾಣ ಕರ್ನಾಟಕದ ಬಿಟ್ಟು ಹೋದ ಜಿಲ್ಲೆಯಾದ ವಿಜಯಪುರ ಜಿಲ್ಲೆಯನ್ನು 371ಜೆ ಕಲ್ಯಾಣ ಕರ್ನಾಟಕ ಮೀಸಲಾತಿಯಡಿ ಸೇರ್ಪಡೆ, ವಿಮಾನ ನಿಲ್ದಾಣ ಕಾರ್ಯಾರಂಭ, ವಿಜಯಪುರ ನಗರದ ಸರಕಾರಿ ಪಾಲಿಟೆಕ್ನಿಕ್ ಆವರಣದಲ್ಲಿ ಸರ್ಕಾರಿ ತಾಂತ್ರಿಕ ಮಹಾವಿದ್ಯಾಲಯ ಸ್ಥಾಪಿಸುವ ಕುರಿತು ಅಧಿವೇಶನದಲ್ಲಿ ಚರ್ಚೆ ಮಾಡಬೇಕು ಎಂದು ರೈತ ಭಾರತ ಪಕ್ಷದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಕೆಂಗನಾಳ ಆಗ್ರಹಿಸಿದ್ದಾರೆ.