ಭತ್ತಕ್ಕೆ ₹3,500 ಬೆಂಬಲ ಬೆಲೆ ನೀಡಿಕೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ನಗರದಲ್ಲಿ ಬುಧವಾರ ಉಪವಿಭಾಗಾಧಿಕಾರಿ ಕಚೇರಿ ಎದುರು ಧರಣಿ ನಡೆಸಲಾಯಿತು. ಮುಖಂಡರು, ರೈತರು ಸರ್ಕಾರ ವಿರುದ್ಧ ಘೋಷಣೆ ಕೂಗಿ ದಾವಣಗೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- ರೈತ ಸಂಘಟನೆಗಳ ಪ್ರತಿಭಟನೆಯಲ್ಲಿ ತಾಲೂಕು ಅಧ್ಯಕ್ಷ ವಿಶ್ವನಾಥ

- - -

ಕನ್ನಡಪ್ರಭ ವಾರ್ತೆ ದಾವಣಗೆರೆ

ಭತ್ತಕ್ಕೆ ₹3,500 ಬೆಂಬಲ ಬೆಲೆ ನೀಡಿಕೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ನಗರದಲ್ಲಿ ಬುಧವಾರ ಉಪವಿಭಾಗಾಧಿಕಾರಿ ಕಚೇರಿ ಎದುರು ಧರಣಿ ನಡೆಸಲಾಯಿತು. ಮುಖಂಡರು, ರೈತರು ಸರ್ಕಾರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಸಂಘಟನೆ ತಾಲೂಕು ಅಧ್ಯಕ್ಷ ಮಂಡಲೂರು ವಿಶ್ವನಾಥ ಮಾತನಾಡಿ, ರಾಗಿ ಕ್ವಿಂ.ಗೆ ₹4,500, ಭತ್ತಕ್ಕೆ ₹3,500 ಬೆಂಬಲ ಬೆಲೆ ನೀಡಬೇಕು. ಹೈನುಗಾರಿಕೆಯಲ್ಲಿ ತೊಡಗಿರುವ ರೈತರಿಗೆ ಅನುಕೂಲ ಆಗುವಂತೆ ಪ್ರತಿ ಲೀಟರ್ ಹಾಲಿನ ದರವನ್ನು ₹50ಕ್ಕೆ ಹೆಚ್ಚಿಸಬೇಕು. ಪ್ರತಿ ತಾಲೂಕಿನಲ್ಲೂ ಖರೀದಿ ಕೇಂದ್ರ ಸ್ಥಾಪಿಸಿ, ರೈತರ ಉತ್ಪನ್ನಗಳನ್ನು ಬೆಂಬಲ ಬೆಲೆ ಯೋಜನೆಯಡಿ ವರ್ಷಪೂರ್ತಿ ಖರೀದಿಸಬೇಕು. ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ವಿತರಣೆ ಮಾಡಬೇಕು. ಅತಿವೃಷ್ಟಿ, ಅನಾವೃಷ್ಟಿಯಿಂದ ಬೆಳೆ ಕಳೆದುಕೊಂಡು ನಷ್ಟ ಅನುಭವಿಸುತ್ತಿರುವ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.

ಉಪವಿಭಾಗಾಧಿಕಾರಿ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಧರಣಿಯಲ್ಲಿ ಸಂಘಟನೆ ಪದಾಧಿಕಾರಿಗಳಾದ ಗೀತಾ ಚಂದ್ರಶೇಖರ, ಆಶಾ, ಎಸ್.ಕೆ.ಪ್ರಸನ್ನ ಕುಮಾರ, ಎಸ್.ವಿ. ನಾಗರಾಜಪ್ಪ, ಅಣ್ಣೇಶ್, ಶಿವಕುಮಾರ, ಮಹಾದೇವಪ್ಪ, ನಾಗರಾಜ ಇತರರು ಪಾಲ್ಗೊಂಡಿದ್ದರು.

- - -

-15ಕೆಡಿವಿಜಿ40:

ದಾವಣಗೆರೆಯಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಧರಣಿ ನಡೆಯಿತು.