ಸಾರಾಂಶ
ದೊಡ್ಡಬಳ್ಳಾಪುರ: ಪತ್ರಕರ್ತರ ಕ್ಷೇಮ ಮತ್ತು ಆಶೋತ್ತರಗಳ ದನಿಯಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಗಣನೀಯ ಕೆಲಸ ಮಾಡುತ್ತಿದೆ ಎಂದು ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್ ಹೇಳಿದರು.
ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಎಎಸ್‌ವಿಎಸ್‌ವಿ ಸಮುದಾಯ ಭವನದಲ್ಲಿ ಶುಕ್ರವಾರ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ದೊಡ್ಡಬಳ್ಳಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘಗಳ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಪತ್ರಿಕಾ ದಿನಾಚರಣೆ-2025 ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಸರ್ಕಾರ ಮತ್ತು ಪತ್ರಕರ್ತರ ನಡುವಿನ ಸೇತುವೆಯಂತೆ ಸಂಘ ಕಾರ್ಯನಿರ್ವಹಣೆ ಮಾಡುತ್ತಿದೆ. ಪತ್ರಕರ್ತರ ವಿಮಾ ಯೋಜನೆ, ಬಸ್ಪಾಸ್ ಯೋಜನೆ ಹಾಗೂ ಹಿರಿಯ ಪತ್ರಕರ್ತರ ಮಾಸಾಶನ ಯೋಜನೆಗಳನ್ನು ಸರ್ಕಾರದ ಸಹಯೋಗದಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸಲು ದಿಟ್ಟ ಹೆಜ್ಜೆ ಇಡಲಾಗಿದೆ. ಮುಂಬರುವ ದಿನಗಳಲ್ಲಿ ಗ್ರಾಮೀಣ ಮಟ್ಟದ ಪತ್ರಕರ್ತರಿಗೂ ಸರ್ಕಾರದ ಸವಲತ್ತುಗಳು ವಿಸ್ತರಣೆಯಾಗುವಂತೆ ವಿವಿಧ ಕಾರ್ಯಯೋಜನೆಗಳನ್ನು ಹೊಂದಲಾಗಿದೆ ಎಂದು ತಿಳಿಸಿದರು.
ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ ಮಾತನಾಡಿ, ಬದಲಾದ ತಂತ್ರಜ್ಞಾನದ ಕಾಲಘಟ್ಟಕ್ಕೆ ಪೂರಕವಾಗಿ ಹೊಸ ಬಗೆಯ ಆಲೋಚನೆಗಳ ಅನುಷ್ಠಾನಕ್ಕೆ ಆದ್ಯತೆ ನೀಡುವುದು ಅವಶ್ಯ. ಬದುಕಿನ ಜೊತೆಗೆ ನೈತಿಕ ಬದ್ದತೆಯನ್ನೂ ಉಳಿಸಿಕೊಂಡು ಕೆಲಸ ಮಾಡುವುದು ಇಂದಿನ ಅಗತ್ಯ. ಸಂಘಟನೆಗಳ ಪತ್ರಕರ್ತರನ್ನು ಸಮಕಾಲೀನ ಅಗತ್ಯತೆಗಳಿಗೆ ಪೂರಕವಾಗಿ ಸಜ್ಜುಗೊಳಿಸುವ ಹೊಣೆಗಾರಿಕೆಯನ್ನು ನಿಭಾಯಿಸಬೇಕು ಎಂದು ತಿಳಿಸಿದರು.ತಾಲೂಕು ವಕೀಲರ ಸಂಘದ ಅಧ್ಯಕ್ಷ ರವಿ ಮಾವಿನಕುಂಟೆ ಮಾತನಾಡಿ, ಸಮಾಜದ ಓರೆಕೋರೆಗಳನ್ನು ತಿದ್ದುವ ಮಹತ್ವದ ಕಾರ್ಯವನ್ನು ಸಮಾಜಸ್ನೇಹಿಯಾಗಿ ನಿರ್ವಹಿಸುವ ಪತ್ರಕರ್ತರ ಜೀವನಭದ್ರತೆಯ ಬಗ್ಗೆಯೂ ಚಿಂತನೆ ಅಗತ್ಯ ಎಂದು ಹೇಳಿದರು.
ಅಭಿನಂದನೆ:ಇದೇ ವೇಳೆ ಜಿಲ್ಲೆಯ ಹಿರಿಯ ಪತ್ರಕರ್ತರಾದ ನೆಲಮಂಗಲದ ಎನ್.ಮೂರ್ತಿ, ದೊಡ್ಡಬಳ್ಳಾಪುರದ ಎನ್.ಎಂ.ನಟರಾಜ್, ದೇವನಹಳ್ಳಿಯ ಎಸ್‌ಸಿಎಂ ಬೈರೇಗೌಡ, ಹೊಸಕೋಟೆಯ ಎನ್.ಎಂ.ನಾಗರಾಜ್, ವಿಜಯಪುರದ ವೆಂಕಟೇಶ್ ಅವರನ್ನು ಸನ್ಮಾನಿಸಲಾಯಿತು.
ಬೆಂ.ಗ್ರಾ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಬಿ.ಶ್ರೀನಿವಾಸ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್.ರಮೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು.ರಾಜ್ಯ ಕಾರ್ಯಕಾರಿಣಿ ಸದಸ್ಯೆ ಕುಸುಮ ಪರ್ವತರಾಜು, ತಾಲೂಕು ಸಂಘದ ಅಧ್ಯಕ್ಷ ಚಂದ್ರಶೇಖರ್ ಡಿ.ಉಪ್ಪಾರ್, ಗೌರವಾಧ್ಯಕ್ಷ ಕೆ.ಸಿ.ರುದ್ರೇಶ್, ಕಾರ್ಯದರ್ಶಿ ಚಂದ್ರಪ್ಪ ನೆಲ್ಲುಗುದಿಗೆ, ಜಿಲ್ಲಾ ಉಪಾಧ್ಯಕ್ಷ ಮುರಳಿಮೋಹನ್, ಬಿ.ಎಸ್.ಮಂಜುನಾಥ್, ಜ್ಯೋತೀಶ್ವರಪ್ಪ, ಕಾರ್ಯದರ್ಶಿ ಪರಮಶಿವಯ್ಯ, ನಾಗರಾಜ್, ಖಜಾಂಚಿ ಶಾಂತಮೂರ್ತಿ, ಜಿಲ್ಲಾ ಕಸಾಪ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್, ತಾಲೂಕು ಪತ್ರಕರ್ತರ ಸಂಘದ ಕೊತ್ತೂರಪ್ಪ, ಶ್ರೀನಿವಾಸ ತೆರದಾಳ್, ದೇವನಹಳ್ಳಿ ತಾಲೂಕು ಅಧ್ಯಕ್ಷ ಸುನಿಲ್, ನೆಲಮಂಗಲ ತಾಲೂಕು ಅಧ್ಯಕ್ಷ ಕೃಷ್ಣಪ್ಪ, ಹೊಸಕೋಟೆ ತಾಲೂಕು ಅಧ್ಯಕ್ಷ ನಾಗರಾಜ್ ಮತ್ತಿತರರು ಹಾಜರಿದ್ದರು.
( ಫೋಟೊ ಪ್ಯಾನಲ್‌ಗೆ ಬಳಸಿ)22ಕೆಡಿಬಿಪಿ1-
ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಹ್ಮಣ್ಯದಲ್ಲಿ ನಡೆದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತರನ್ನು ಸನ್ಮಾನಿಸಲಾಯಿತು. ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ, ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್ ಇತರರಿದ್ದರು.22ಕೆಡಿಬಿಪಿ2- ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಹ್ಮಣ್ಯದಲ್ಲಿ ನಡೆದ ಬೆಂ.ಗ್ರಾ ಜಿಲ್ಲಾ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಭಾರತೀಯ ಪತ್ರಕರ್ತರ ಒಕ್ಕೂಟದ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ ಉದ್ಘಾಟಿಸಿದರು.