ಕೊಳಕೇರಿ ಗ್ರಾಮದ ಕಲಿಯಂಡ ಐನ್‌ಮನೆಯಲ್ಲಿ ಕುಟುಂಬ ಅಭಿವೃದ್ಧಿ ಸಂಘದ ಅಧ್ಯಕ್ಷ ಕಲಿಯಂಡ ವಿಜಯ ಅಧ್ಯಕ್ಷತೆಯಲ್ಲಿ ಸಭೆ ಆಯೋಜಿಸಲಾಯಿತು. ಅಭಿವೃದ್ಧಿ ಸಂಘದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
ನಾಪೋಕ್ಲು ; ಅಖಿಲ ಕೊಡವ ಸಮಾಜ ನೇತೃತ್ವದಲ್ಲಿ ವಿವಿಧ ಕೊಡವ ಸಮಾಜ ಹಾಗೂ ಸಂಘ ಸಂಸ್ಥೆಗಳು ಸೇರಿದಂತೆ ಕೊಡವ ಭಾಷಿಕ ಸಮುದಾಯಗಳು ಕುಟ್ಟದಿಂದ ಮಡಿಕೇರಿಯ ವರೆಗೆ ಕೈಗೊಂಡ ಕೊಡವಾಮೆ ಬಾಳೋ ಪಾದಯಾತ್ರೆಯಲ್ಲಿ ಕಲಿಯಂಡ ಕುಟುಂಬಸ್ಥರು ಎಲ್ಲ ರೀತಿಯಲ್ಲಿ ಸಂಪೂರ್ಣ ಸಹಕಾರದೊಂದಿಗೆ ಭಾಗವಹಿಸುತ್ತಿದ್ದೇವೆ ಎಂದು ಕಲಿಯಂಡ ವಿಜಯ ತಿಳಿಸಿದ್ದಾರೆ.
ಇಲ್ಲಿಗೆ ಸಮೀಪದ ಕೊಳಕೇರಿ ಗ್ರಾಮದ ಕಲಿಯಂಡ ಐನ್ ಮನೆಯಲ್ಲಿ ಕುಟುಂಬ ಅಭಿವೃದ್ಧಿ ಸಂಘದ ಅಧ್ಯಕ್ಷ ಕಲಿಯಂಡ ವಿಜಯ ಅವರ ಅಧ್ಯಕ್ಷತೆಯಲ್ಲಿ ಸಭೆ ಆಯೋಜಿಸಿ ಮಾತನಾಡಿದ ಅವರು ಶುಕ್ರವಾರ ಮಡಿಕೇರಿಯಲ್ಲಿ ಜರುಗಲಿರುವ ಸಮಾವೇಶದಲ್ಲಿಯೂ ಕುಟುಂಬ ಸದಸ್ಯರೆಲ್ಲರೂ ಭಾಗವಹಿಸಿ ಯಶಸ್ವಿಗೊಳಿಸಲು ಸಹಕರಿಸುವ ನಿಟ್ಟಿನಲ್ಲಿ ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವಿಜಯ ಹಾಗೂ ಕುಟುಂಬದ ಪ್ರಮುಖ ಪ್ರಕಾಶ್ ತಿಳಿಸಿದರು. ಈ ಸಂದರ್ಭ ಅಭಿವೃದ್ಧಿ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಶಾಲೆಗೆ ರಜೆ ಘೋಷಣೆ: ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ನಾಪೋಕ್ಲು ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಕಲಿಯಂಡ ಹ್ಯಾರಿ ಮಂದಣ್ಣ ಪ್ರತಿಕ್ರಿಯಿಸಿ ಪಾದಯಾತ್ರೆಯ ಪ್ರಯುಕ್ತ ಶುಕ್ರವಾರ ನಮ್ಮ ಶಾಲೆಗೆ ಒಂದು ದಿನದ ರಜೆಯನ್ನು ಘೋಷಿಸಲಾಗಿದೆ ಎಂದು ತಿಳಿಸಿದರು.
ಕೊಡವಾಮೆ ಬಾಳೋ ಪಾದಯಾತ್ರೆ: ಇಂದು ಮಡಿಕೇರಿಯಲ್ಲಿ 700 ಕ್ಕೂ ಅಧಿಕ ಪೊಲೀಸರ ನಿಯೋಜನೆ
ಕನ್ನಡಪ್ರಭ ವಾರ್ತೆ ಮಡಿಕೇರಿಕೊಡವಾಮೆ ಬಾಳೋ ಪಾದಯಾತ್ರೆ ಫೆ.7 ರಂದು ಮಡಿಕೇರಿ ನಗರಕ್ಕೆ ತಲುಪುವ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಕೊಡಗು ಜಿಲ್ಲಾ ಪೊಲೀಸರಿಂದ ಸೂಕ್ತ ಬಂದೋಬಸ್ತ್ ಮಾಡಲಾಗಿದೆ.
ಪೊಲೀಸ್ ಇಲಾಖೆಯ ಪ್ರಕಾರ ಪಾದಯಾತ್ರೆಯಲ್ಲಿ ಅಂದಾಜು 15 ರಿಂದ 25 ಸಾವಿರ ಜನ ಪಾಲ್ಗೊಳ್ಳುವ ಸಾಧ್ಯತೆ ಇದ್ದು, ಕೊಡಗು ಜಿಲ್ಲಾ ಪೊಲೀಸ್ ಹಾಗೂ ಹೊರ ಜಿಲ್ಲೆಗಳ ವಿವಿಧ ಘಟಕದಿಂದ ಅಧಿಕಾರಿ/ಸಿಬ್ಬಂದಿ ಸಹ ನಿಯೋಜಿಸಲಾಗಿದೆ. ಬಂದೋಬಸ್ತ್ ಕರ್ತವ್ಯಕ್ಕಾಗಿ 1, ಪೊಲೀಸ್ ಅಧೀಕ್ಷಕರು, 1 ಹೆಚ್ಚುವರಿ ಪೊಲೀಸ್ ಅಧೀಕ್ಷಕರು, 6 ಪೊಲೀಸ್ ಉಪಾಧೀಕ್ಷಕರು, 18 ಪೊಲೀಸ್ ನಿರೀಕ್ಷಕರು, 35 ಪೊಲೀಸ್ ಉಪನಿರೀಕ್ಷಕರು, 55 ಸಹಾಯಕ ಪೊಲೀಸ್ ಉಪನಿರೀಕ್ಷಕರು, 430 ಪೊಲೀಸ್ ಹೆಡ್ ಕಾನ್ಸೆಬಲ್/ಕಾನ್ಸ್ ಟೇಬಲ್ಸ್, 100 ಕೆ.ಎಸ್.ಆರ್.ಪಿ (5 ಪ್ಲಾಟಿನ್) ಹಾಗೂ 70 ಡಿಎಆರ್ ಗಳನ್ನು ನೇಮಿಸಲಾಗಿದೆ.ಇದರೊಂದಿಗೆ 7 ರಂದು ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬೆಳಗ್ಗೆ 6 ರಿಂದ ರಾತ್ರಿ 12 ಗಂಟೆವರೆಗೆ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.
ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವವರು ಶಾಂತಿಯುತವಾಗಿ ರಸ್ತೆಯ ಒಂದು ಬದಿಯಲ್ಲಿ ತೆರಳುವುದು. ಪಾದಯಾತ್ರೆಯ ಆಯೋಜಕರು ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಆಗಮಿಸುವುದರ ವಾಹನಗಳನ್ನು ಪಾರ್ಕಿಂಗ್ ನಿಗದಿಪಡಿಸಿರುವ ಸ್ಥಳಗಳಲ್ಲಿ ಪಾರ್ಕಿಂಗ್ ಮಾಡುವ ಬಗ್ಗೆ ಕ್ರಮ ಕೈಗೊಳ್ಳುವುದು ಹಾಗೂ ಪಾದಯಾತ್ರೆಯೊಂದಿಗೆ ವಾಹನಗಳು ಬರದಂತೆ ನೋಡಿಕೊಳ್ಳಬೇಕು, ಪಾದಯಾತ್ರೆಯಲ್ಲಿನ ಸ್ವಯಂ ಸೇವಕರು ಸಾರ್ವಜನಿಕರಿಗೆ ಹಾಗೂ ತುರ್ತು ಸೇವೆಗಳ ವಾಹನಗಳ ಸಂಚಾರಕ್ಕೆ ಅಡ್ಡಿಯಾಗದಂತೆ ನೋಡಿಕೊಳ್ಳಬೇಕು, ಪಾದಯಾತ್ರೆ ಸಮಯದಲ್ಲಿ ಎಲ್ಲಿಯು ರಸ್ತೆ ತಡೆ ಮಾಡದಂತೆ ಸ್ವಯಂ ಸೇವಕರು ನೋಡಿಕೊಳ್ಳಬೇಕು, ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಆಯೋಜಕರು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೂಚನೆ ನೀಡಿದ್ದಾರೆ.
ವಿಶೇಷ ಸೂಚನೆ : ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸಿದಲ್ಲಿ ಜಿಲ್ಲಾ ಪೊಲೀಸ್ ಕಚೇರಿ ದೂರವಾಣಿಗೆ ಸಂಖ್ಯೆ: 08272-228330 ಮತ್ತು 9480804900 ಕ್ಕೆ ಕರೆ ಮಾಡಿ ಮಾಹಿತಿ ಒದಗಿಸುವಂತೆ ಹಾಗೂ ಯಾವುದೇ ರೀತಿಯ ಅಕ್ರಮ ಚಟುವಟಿಕೆಗಳು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆ/ ತುರ್ತು ಸಹಾಯವಾಣಿ 112 ಕ್ಕೆ ಕರೆ ಮಾಡಿ ಮಾಹಿತಿ ನೀಡಿ ಸಹಕರಿಸುವಂತೆ ಸಾರ್ವಜನಿಕರಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.ವಾಹನ ಪಾರ್ಕಿಂಗ್ ತಾತ್ಕಾಲಿಕ ನಿಷೇಧಕೊಡವ ಜನಾಂಗ ಮತ್ತು ಕೊಡವ ಭಾಷಿಕ ಸಮುದಾಯಗಳ ಕೊಡವಾಮೆ ಬಾಳೋ ಪಾದಯಾತ್ರೆ ಹಿನ್ನೆಲೆಯಲ್ಲಿ ಶುಕ್ರವಾರ ಮಡಿಕೇರಿ ನಗರದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಜನ ಸೇರುವ ನಿರೀಕ್ಷೆ ಇದ್ದು, ಮಡಿಕೇರಿ ನಗರದಲ್ಲಿ ವಾಹನ ಪಾರ್ಕಿಂಗ್ ವ್ಯವಸ್ಥೆಯಲ್ಲಿ ತಾತ್ಕಾಲಿಕ ಬದಲಾವಣೆ ಮಾಡಲಾಗಿದೆ.
ಮಡಿಕೇರಿಯ ಸುದರ್ಶನ ರಸ್ತೆ, ಜಿಲ್ಲಾಸ್ಪತ್ರೆ ರಸ್ತೆ, ಜನರಲ್ ತಿಮ್ಮಯ್ಯ ವೃತ್ತದಿಂದ ಮಂಗಳೂರು ರಸ್ತೆ, ವಿನೋದ್ ಮೆಡಿಕಲ್ ಮುಂಭಾಗ, ಬಾಲಾಜಿ ಸ್ಟೋರ್ ಮುಂಭಾಗ, ಹಳೇ ಖಾಸಗಿ ಬಸ್ ನಿಲ್ದಾಣ ಆವರಣ, ಕಾರ್ ಟ್ಯಾಕ್ಸಿ ನಿಲ್ದಾಣ, ಕಾಲೇಜು ರಸ್ತೆ, ಗಣಪತಿ ಬೀದಿ, ಮಾರುಕಟ್ಟೆ ಆವರಣ, ಜ್ಯೂನಿಯರ್ ಕಾಲೇಜು ರಸ್ತೆ ಸೇರಿದಂತೆ ಜನ ಸಂದಣಿ ಏರ್ಪಡುವ ಪ್ರದೇಶಗಳಲ್ಲಿ ಎಲ್ಲಾ ರೀತಿಯ ವಾಹನಗಳ ಪಾರ್ಕಿಂಗ್ ನಿಷೇಧಿಸಲಾಗಿದೆ.
ಸ್ಥಳೀಯರು ಮತ್ತು ಸಾರ್ವಜನಿಕರು ಸಹಕರಿಸಲು ಪೊಲೀಸ್ ಇಲಾಖೆ ಮನವಿ ಮಾಡಿಕೊಂಡಿದ್ದಾರೆ.ಮಡಿಕೇರಿ ನಗರ ಸಂಚಾರಿ ಪೊಲೀಸರಿಂದ ಪಾರ್ಕಿಂಗ್ ವ್ಯವಸ್ಥೆಯಲ್ಲಿ ತಾತ್ಕಾಲಿಕ ಬದಲಾವಣೆ ಮಾಡಲಾಗಿದೆ. ಸಾರ್ವಜನಿಕರು ಸಹಕರಿಸಲು ನಗರ ಸಂಚಾರಿ ಪೊಲೀಸರು ಮನವಿ ಮಾಡಿದ್ದಾರೆ.