ಶ್ರೀ ರಂಭಾಪುರಿ ವೀರಸಿಂಹಾಸನಾಧೀಶ್ವರ ಶ್ರೀ ೧೦೦೮ ಜಗದ್ಗುರು ಪ್ರಸನ್ನ ರೇಣುಕ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ ದಿವ್ಯ ಸಾನ್ನಿಧ್ಯದಲ್ಲಿ ನಡೆಯಲಿರುವ ಈ ಸಮಾರಂಭವನ್ನು ಜಿಲ್ಲಾ ಕೇಂದ್ರದಲ್ಲಿ ಯಶಸ್ವಿಯಾಗಿ ಆಯೋಜಿಸುವುದು ಎಲ್ಲರ ಜವಾಬ್ದಾರಿಯಾಗಿದೆ. ಕಾರ್ಯಕ್ರಮಕ್ಕೆ ಅಗತ್ಯವಿರುವ ಪೆಂಡಾಲ್ ಸೇರಿದಂತೆ ವಿವಿಧ ಸೇವಾ ಕಾರ್ಯಗಳಿಗೆ ಸಹಕಾರ ನೀಡುವುದಾಗಿ ತಿಳಿಸಿದರು. ಭಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮಾರಂಭವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಕನ್ನಡಪ್ರಭ ವಾರ್ತೆ ಹಾಸನ
ಧಾರ್ಮಿಕ ಹಾಗೂ ಧರ್ಮ ಜಾಗೃತಿಯ ಕಾರ್ಯಕ್ರಮಗಳು ಸಮಾಜದಲ್ಲಿ ನಡೆಯುವುದು ಅಗತ್ಯವಾಗಿದ್ದು, ಇಂತಹ ಕಾರ್ಯಕ್ರಮಗಳಿಂದ ಸಮಾಜದಲ್ಲಿ ಧಾರ್ಮಿಕ ಮೌಲ್ಯಗಳು ಮತ್ತು ಸಂಸ್ಕಾರಗಳು ಮತ್ತಷ್ಟು ಬಲಗೊಳ್ಳಲಿವೆ. ಡಿ. ೨ರಂದು ಹಾಸನದ ಕಲಾಭವನದ ಮುಂಭಾಗ ನಡೆಯಲಿರುವ ಬಾಳೆಹೊನ್ನೂರು ಜಗದ್ಗುರುಗಳ ಜನಜಾಗೃತಿ ಧರ್ಮ ಸಮಾರಂಭಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಶಾಸಕ ಸ್ವರೂಪ್ ಪ್ರಕಾಶ್ ಭರವಸೆ ನೀಡಿದರು.ನಗರದ ಶಾಸಕರ ನಿವಾಸದಲ್ಲಿ ಗುರುವಾರ ಹಾಸನ ಜನಜಾಗೃತಿ ಧರ್ಮ ಸಮಾರಂಭದ ಸಮಿತಿ ಸದಸ್ಯರು ಕಾರ್ಯಕ್ರಮದ ಆಹ್ವಾನ ಪತ್ರಿಕೆ ನೀಡಿ ಆಹ್ವಾನಿಸಿದ ಸಂದರ್ಭದಲ್ಲಿ ಅವರು ಮಾತನಾಡಿ, ಶ್ರೀ ರಂಭಾಪುರಿ ವೀರಸಿಂಹಾಸನಾಧೀಶ್ವರ ಶ್ರೀ ೧೦೦೮ ಜಗದ್ಗುರು ಪ್ರಸನ್ನ ರೇಣುಕ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ ದಿವ್ಯ ಸಾನ್ನಿಧ್ಯದಲ್ಲಿ ನಡೆಯಲಿರುವ ಈ ಸಮಾರಂಭವನ್ನು ಜಿಲ್ಲಾ ಕೇಂದ್ರದಲ್ಲಿ ಯಶಸ್ವಿಯಾಗಿ ಆಯೋಜಿಸುವುದು ಎಲ್ಲರ ಜವಾಬ್ದಾರಿಯಾಗಿದೆ. ಕಾರ್ಯಕ್ರಮಕ್ಕೆ ಅಗತ್ಯವಿರುವ ಪೆಂಡಾಲ್ ಸೇರಿದಂತೆ ವಿವಿಧ ಸೇವಾ ಕಾರ್ಯಗಳಿಗೆ ಸಹಕಾರ ನೀಡುವುದಾಗಿ ತಿಳಿಸಿದರು. ಭಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮಾರಂಭವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.ಈ ಸಂದರ್ಭದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಪುನೀತ್ ಪಟೇಲ್, ತಾಲೂಕು ಅಧ್ಯಕ್ಷ ಕಟ್ಟಾಯ ಶಿವಕುಮಾರ್, ನಗರಾಭಿವೃದ್ಧಿ ಪ್ರಾಧಿಕಾರ ಮಟ್ಟದ ಸಮಿತಿ ಅಧ್ಯಕ್ಷ ಎಚ್.ಪಿ. ರೋಹಿತ್, ಉಪಾಧ್ಯಕ್ಷ ಮಧು, ಜಿಲ್ಲಾ ವೀರಶೈವ ಲಿಂಗಾಯತ ಸಂಘದ ಪ್ರಧಾನ ಕಾರ್ಯದರ್ಶಿ ಈ.ಎಂ. ರುದ್ರಕುಮಾರ್, ಸಮಾಜದ ಮುಖಂಡರಾದ ಸಂಗಮ್, ಮಹಾಸಭಾದ ನಿರ್ದೇಶಕರಾದ ರಾಜಶೇಖರ್ ಮೂರ್ತಿ, ಎಚ್.ಕೆ. ಮಿಥುನ್, ಎಚ್.ಕೆ. ದಿಲೀಪ್, ಎಚ್. ಸಿ. ಕೀರ್ತಿಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.