ರಾಜ್ಯ ವ್ಯಾಪಿ ಕೆಂಪೇಗೌಡ ಜಯಂತಿಚರ್ಚಾ ಸ್ಪರ್ಧೆಗೆ ಪಾಲಿಕೆಯಿಂದ ಹಣ

| Published : Jun 25 2024, 01:48 AM IST / Updated: Jun 25 2024, 05:29 AM IST

ರಾಜ್ಯ ವ್ಯಾಪಿ ಕೆಂಪೇಗೌಡ ಜಯಂತಿಚರ್ಚಾ ಸ್ಪರ್ಧೆಗೆ ಪಾಲಿಕೆಯಿಂದ ಹಣ
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯ ವ್ಯಾಪಿ ಕೆಂಪೇಗೌಡ ಜಯಂತಿಚರ್ಚಾ ಸ್ಪರ್ಧೆಗೆ ಪಾಲಿಕೆಯಿಂದ ಹಣ ನೀಡುತ್ತಿರುವುದು.

 ಬೆಂಗಳೂರು : ರಾಜ್ಯವ್ಯಾಪಿ ಅದ್ಧೂರಿ ಕೆಂಪೇಗೌಡ ಜಯಂತಿ ಆಚರಣೆಗೆ ರಾಜ್ಯ ಸರ್ಕಾರ ನಿರ್ಧರಿಸಿದೆ. ಅದರ ಭಾಗವಾಗಿ 235 ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಲ್ಲಿ ಚರ್ಚಾಸ್ಪರ್ಧೆ ಏರ್ಪಡಿಸಲಾಗುತ್ತಿದ್ದು, ಅದಕ್ಕಾಗಿ ಪ್ರತಿ ತಾಲೂಕುಗಳಿಗೂ ತಲಾ ₹1 ಲಕ್ಷ ಅನುದಾನ ಬಿಡುಗಡೆ ಮಾಡುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಪತ್ರ ಬರೆದಿದ್ದಾರೆ.

ರಾಜ್ಯಾದ್ಯಂತ ಜೂ.27ರಂದು ಕೆಂಪೇಗೌಡ ಜಯಂತಿ ಆಚರಣೆಗಾಗಿ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ಅದರಲ್ಲಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣ ಮತ್ತು ಅರಮನೆ ಮೈದಾನದಲ್ಲಿ ಕಾರ್ಯಕ್ರಮ ಆಯೋಜನೆಗೆ ನಿರ್ಧರಿಸಲಾಗಿದೆ. ಅದಕ್ಕೂ ಮುನ್ನ ಶಾಲಾ-ಕಾಲೇಜು ಮಟ್ಟದಲ್ಲಿ ಚರ್ಚಾಸ್ಪರ್ಧೆ ಏರ್ಪಡಿಸಲಾಗುತ್ತಿದ್ದು, ಅದಕ್ಕೆ ಬಿಬಿಎಂಪಿಯಿಂದ ಹಣ ಬಿಡುಗಡೆ ಮಾಡಲಾಗಿದೆ.

ರಾಜ್ಯದ ಎಲ್ಲ 235 ತಾಲೂಕುಗಳಲ್ಲಿ ಶಿಕ್ಷಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳ ನಡುವೆ ಕೆಂಪೇಗೌಡರು, ಅವರಿಗೆ ಸಂಬಂಧಿಸಿದ ವಿಷಯಗಳ ಕುರಿತಾಗಿ ಚರ್ಚಾ ಸ್ಪರ್ಧೆ ಏರ್ಪಡಿಸಲು ನಿರ್ಧರಿಸಲಾಗಿದೆ. ಅದಕ್ಕೆ ಬಿಬಿಎಂಪಿಯಿಂದ ಎಲ್ಲ 235 ತಾಲೂಕುಗಳಿಗೆ ತಲಾ ₹1 ಲಕ್ಷದಂತೆ ಒಟ್ಟು ₹2.35 ಕೋಟಿ ನೀಡಲಾಗುತ್ತಿದೆ. ಆ ಹಣ ಬಿಡುಗಡೆಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಪತ್ರ ಬರೆದಿದ್ದಾರೆ.