ಸಂಶೋಧನೆ ಯೋಜನೆಗಳ ಮೂಲಾಂಶಗಳು: ವಿಶೇಷ ಉಪನ್ಯಾಸ

| Published : Apr 04 2024, 01:09 AM IST / Updated: Apr 05 2024, 05:20 AM IST

ಸಾರಾಂಶ

ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆಶ್ರಯದಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ‘ಸಂಶೋಧನಾ ಯೋಜನೆಯ ಮೂಲಾಂಶಗಳು’ ಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು.

 ಉಡುಪಿ :  ಇಲ್ಲಿನ ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸ್ನಾತಕೋತ್ತರ ಸಮಾಜಶಾಸ್ತ್ರ ವಿಭಾಗ, ಸಮಾಜಕಾರ್ಯ ವಿಭಾಗ ಹಾಗೂ ಐಕ್ಯೂಎಸಿ ಘಟಕ ಇವುಗಳ ಜಂಟಿ ಆಶ್ರಯದಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ‘ಸಂಶೋಧನಾ ಯೋಜನೆಯ ಮೂಲಾಂಶಗಳು’ ಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಎಸ್.ಎಂ.ಎಸ್. ಕಾಲೇಜು ಬ್ರಹ್ಮಾವರ ಇದರ ನಿವೃತ್ತ ಪ್ರಾಂಶುಪಾಲ ಡಾ. ವೈ. ರವೀಂದ್ರನಾಥ ರಾವ್ ಅವರು ವಿದ್ಯಾರ್ಥಿಗಳಿಗೆ ಸಾಮಾಜಿಕ ಸಂಶೋಧನೆಯ ಬಗ್ಗೆ ವಿವರವಾದ ಮಾಹಿತಿಯನ್ನು ನೀಡಿದರು. ಅವರು ವಿಶೇಷವಾಗಿ ಸಂಶೋಧನೆ ವಿಷಯದ ಆಯ್ಕೆ ಮತ್ತು ಸಂಶೋಧನಾ ಶೀರ್ಷಿಕೆ ನೀಡುವ ಅಗತ್ಯತೆಗಳನ್ನು ವಿವರಿಸುತ್ತಾ, ವಿದ್ಯಾರ್ಥಿಗಳು ತಮ್ಮ ಸುತ್ತಮುತ್ತಲಿನ ಸಂಗತಿಗಳನ್ನು ಕುತೂಹಲದಿಂದ ಅವಲೋಕಿಸಿದಾಗ ಅವರಿಗೆ ಅಧ್ಯಯನ ವಿಷಯಗಳು ಲಭ್ಯವಾಗುತ್ತವೆ ಎಂದು ತಿಳಿಸಿದರು.

ಇದರ ಜೊತೆಗೆ ವಿದ್ಯಾರ್ಥಿಗಳು ತಮ್ಮ ಸಂಶೋಧನಾ ವಿಷಯಕ್ಕೆ ಸಂಬಂಧಪಟ್ಟ ಬಗ್ಗೆ ಈಗಾಗಲೇ ಇರುವ ಸಂಬಂಧಪಟ್ಟ ಗ್ರಂಥಗಳನ್ನು ಓದಿಕೊಳ್ಳುವ ಅಗತ್ಯತೆಯನ್ನು ತಿಳಿಸಿದರು. ಸಂಶೋಧನೆಯ ವಸ್ತುನಿಷ್ಠತೆಯ ಬಗ್ಗೆ ಒತ್ತಿ ಹೇಳಿದರು. ಇದರ ಜೊತೆಗೆ ಆಕಾರ ಗ್ರಂಥಗಳ ಪಟ್ಟಿ ನೀಡುವಿಕೆಯ ವಿಧಾನದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು.

ಪ್ರಾಂಶುಪಾಲ ಪ್ರೊ. ಸುರೇಶ್ ರೈ ಕೆ. ಅಧ್ಯಕ್ಷತೆ ವಹಿಸಿದ್ದರು. ಐಕ್ಯೂಎಸಿ ಸಂಚಾಲಕರಾದ ಡಾ. ಮೇವಿ ಮಿರಾಂದ, ಸಮಾಜಕಾರ್ಯ ವಿಭಾಗದ ಸಂಯೋಜಕ ಡಾ. ದುಗ್ಗಪ್ಪ ಕಜೆಕಾರ್ ಉಪಸ್ಥಿತರಿದ್ದರು. ಸಮಾಜಶಾಸ್ತ್ರ ವಿಭಾಗ ಮುಖ್ಯಸ್ಥ ಡಾ. ರಾಘವ ನಾಯ್ಕ್ ಸ್ವಾಗತಿಸಿದರು. ಸಮಾಜಶಾಸ್ತ್ರ ವಿಭಾಗದ ವಿದ್ಯಾರ್ಥಿನಿಯರಾದ ಅಂಕಿತಾ ಪೈ ಕಾರ್ಯಕ್ರಮ ನಿರೂಪಿಸಿದರು. ಮಹೇಶ್ವರಿ ವಂದಿಸಿದರು.