ಅಭಿವೃದ್ಧಿಗೆ ಮೀಸಲಿದ್ದ ಹಣ ಅಕ್ರಮವಾಗಿ ವರ್ಗ: ಬಿಜೆಪಿ ಯುವ ಮೋರ್ಚಾ

| Published : Jun 02 2024, 01:45 AM IST

ಅಭಿವೃದ್ಧಿಗೆ ಮೀಸಲಿದ್ದ ಹಣ ಅಕ್ರಮವಾಗಿ ವರ್ಗ: ಬಿಜೆಪಿ ಯುವ ಮೋರ್ಚಾ
Share this Article
  • FB
  • TW
  • Linkdin
  • Email

ಸಾರಾಂಶ

ಯೂನಿಯನ್ ಬ್ಯಾಂಕ್ ಮೂಲಕ ಕೆಲವು ಕಂಪನಿಗಳಿಗೆ ಹಣ ಅಕ್ರಮವಾಗಿ ವರ್ಗಾವಣೆ ಮಾಡಿದ್ದು, ಕಾಂಗ್ರೆಸ್ ಪಕ್ಷ ಚುನಾವಣಾ ಖರ್ಚಿಗಾಗಿ ದಲಿತ ಸಮುದಾಯದ ಅಭಿವೃದ್ಧಿಗೆ ಮೀಸಲಿದ್ದ ಹಣ ವೆಚ್ಚ ಮಾಡಿದೆ ಎನ್ನುವ ಅನುಮಾನ ವ್ಯಾಪಕವಾಗಿ ಕೇಳಿ ಬರುತ್ತಿದ್ದು, ಕಾಂಗ್ರೆಸ್ಸಿನ ಭ್ರಷ್ಟಾಚಾರಕ್ಕೆ ಹಿಡಿದ ಕನ್ನಡಿ ಇದಾಗಿದ್ದು, ತಕ್ಷಣ ಸಚಿವ ನಾಗೇಂದ್ರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಪ್ರಕರಣದಲ್ಲಿ ಯಾರು ಭಾಗಿಯಾಗಿದ್ದಾರೋ ಎಲ್ಲಾ ಸಚಿವರು ರಾಜೀನಾಮೆ ನೀಡಬೇಕು.

ಕನ್ನಡಪ್ರಭ ವಾರ್ತೆ ಸಾಗರ

ಇಲ್ಲಿನ ಬಿಜೆಪಿ ಯುವ ಮೋರ್ಚಾ ವತಿಯಿಂದ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ೧೮೭ ಕೋಟಿ ರು. ಅಕ್ರಮ ಹಣ ವರ್ಗಾವಣೆ ಖಂಡಿಸಿ ಶಿವಪ್ಪನಾಯಕ ವೃತ್ತದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಸಂತೋಷ್ ಶೇಟ್ ಮಾತನಾಡಿ, ಯೂನಿಯನ್ ಬ್ಯಾಂಕ್ ಮೂಲಕ ಕೆಲವು ಕಂಪನಿಗಳಿಗೆ ಹಣ ಅಕ್ರಮವಾಗಿ ವರ್ಗಾವಣೆ ಮಾಡಿದ್ದು, ಕಾಂಗ್ರೆಸ್ ಪಕ್ಷ ಚುನಾವಣಾ ಖರ್ಚಿಗಾಗಿ ದಲಿತ ಸಮುದಾಯದ ಅಭಿವೃದ್ಧಿಗೆ ಮೀಸಲಿದ್ದ ಹಣ ವೆಚ್ಚ ಮಾಡಿದೆ ಎನ್ನುವ ಅನುಮಾನ ವ್ಯಾಪಕವಾಗಿ ಕೇಳಿ ಬರುತ್ತಿದ್ದು, ಕಾಂಗ್ರೆಸ್ಸಿನ ಭ್ರಷ್ಟಾಚಾರಕ್ಕೆ ಹಿಡಿದ ಕನ್ನಡಿ ಇದಾಗಿದ್ದು, ತಕ್ಷಣ ಸಚಿವ ನಾಗೇಂದ್ರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಪ್ರಕರಣದಲ್ಲಿ ಯಾರು ಭಾಗಿಯಾಗಿದ್ದಾರೋ ಎಲ್ಲಾ ಸಚಿವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಯುವ ಮೋರ್ಚಾ ನಗರ ಘಟಕದ ಅಧ್ಯಕ್ಷ ಪರಶುರಾಮ್ ಮಾತನಾಡಿ, ಗ್ಯಾರಂಟಿ ಮೂಲಕ ಜನರ ದಾರಿ ತಪ್ಪಿಸಿ ರಾಜ್ಯ ಕಾಂಗ್ರೆಸ್ ಸರ್ಕಾರ ಲೂಟಿ ಮಾಡುತ್ತಿದೆ. ತಕ್ಷಣ ನಾಗೇಂದ್ರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ನಾಗೇಂದ್ರ ರಾಜಿನಾಮೆ ನೀಡದಿದ್ದಲ್ಲಿ ಉಗ್ರ ಪ್ರತಿಭಟನೆ ಯುವ ಮೋರ್ಚಾ ಹಮ್ಮಿಕೊಳ್ಳಲಿದೆ ಎಂದು ಎಚ್ಚರಿಕೆ ನೀಡಿದರು.

ನಗರಸಭೆ ಸದಸ್ಯರಾದ ಬಿ.ಎಚ್.ಲಿಂಗರಾಜ್, ಅರವಿಂದ ರಾಯ್ಕರ್, ಪ್ರಮುಖರಾದ ಪ್ರದೀಪ್ ಆಚಾರಿ, ವಿನಯ್ ಪೂಜಾರಿ, ಗುರುಪ್ರಸಾದ್, ಪ್ರವೀಣ್, ಆದರ್ಶ, ಮುರಳಿ ಮಂಕಳಲೆ, ಸುಧೀರ್ ಶೆಣೈ, ಪ್ರಕಾಶ್ ರಾಮನಗರ, ಅಮಿತ್ ಇನ್ನಿತರರಿದ್ದರು.

ಭದ್ರಾವತಿ: ಬಿಜೆಪಿ ಯುವ ಮೋರ್ಚಾದಿಂದ ಪ್ರತಿಭಟನೆಭದ್ರಾವತಿ: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಭ್ರಷ್ಟಾಚಾರ ಖಂಡಿಸಿ ಶನಿವಾರ ನಗರದಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಮಾಧವಚಾರ್ ವೃತ್ತದಲ್ಲಿ ಟಯರ್‌ಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಯುವ ಮೋರ್ಚಾ ಮುಖಂಡರು ಮಾತನಾಡಿ, ನಿಗಮದಲ್ಲಿ ನಡೆದಿರುವ ಕೋಟ್ಯಾಂತರ ರು. ಹಣ ದುರುಪಯೋಗ ಪ್ರಕರಣ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರಕ್ಕೆ ಸಾಕ್ಷಿ. ಹಣ ದುರುಪಯೋಗದ ಜಾಲಕ್ಕೆ ನಲುಗಿ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಿರುವುದು ವಿಷಾದನೀಯ ಸಂಗತಿ, ಈ ಪ್ರಕರಣವನ್ನು ಯುವ ಮೋರ್ಚಾ ಖಂಡಿಸುವ ಜೊತೆಗೆ ಸಿಬಿಐ ತನಿಖೆಗೆ ವಹಿಸಲು ಆಗ್ರಹಿಸುತ್ತದೆ ಎಂದರು. ಯುವ ಮೋರ್ಚಾ ಅಧ್ಯಕ್ಷ ಧನುಷ್ ಬೋಸ್ಲೆ ಪ್ರತಿಭಟನೆ ನೇತೃತ್ವ ವಹಿಸಿದ್ದರು. ಉಪಾಧ್ಯಕ್ಷ ಧನ್ಯ ಪಟೇಲ್, ಪ್ರಮುಖರಾದ ಸುಧಾಕರ್, ಭರತ್, ತ್ಯಾಗರಾಜ್, ಮನು, ಶಶಾಂಕ್, ನವೀನ್, ರೈತ ಮೋರ್ಚಾ ಅಧ್ಯಕ್ಷ ಆನಂದ್, ಓಬಿಸಿ ಮೋರ್ಚಾ ಅಧ್ಯಕ್ಷ ರಾಜಶೇಖರ್ ಉಪ್ಪಾರ, ಸುಬ್ರಮಣಿ, ಶಾಂತಣ್ಣ, ಎಸ್ಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ರಾಜೇಶ್ ಸೇರಿ ಯುವ ಮೋರ್ಚಾದ ಕಾರ್ಯಕರ್ತರು ಪಾಲ್ಗೊಂಡಿದ್ದರು.